Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL ​ನಲ್ಲಿಲ್ಲ ಚಾನ್ಸ್​, ವಿದೇಶದಲ್ಲಿ ಭರ್ಜರಿ ಶತಕ ಸಿಡಿಸಿ ಮಿಂಚಿದ ಪೂಜಾರ

Cheteshwar Pujara: ಟೆಸ್ಟ್ ಸ್ಪೆಷಲಿಸ್ಟ್ ಎಂದೇ ಖ್ಯಾತರಾಗಿರುವ ಚೇತೇಶ್ವರ ಪೂಜಾರ ಐಪಿಎಲ್ 2021 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಆಯ್ಕೆಯಾಗಿದ್ದರು.

TV9 Web
| Updated By: ಝಾಹಿರ್ ಯೂಸುಫ್

Updated on: Apr 08, 2023 | 10:09 PM

ಭಾರತದಲ್ಲಿ ಐಪಿಎಲ್​ ರಂಗೇರುತ್ತಿದ್ದರೆ, ಅತ್ತ ಕ್ರಿಕೆಟ್ ಜನಕರ ನಾಡು ಇಂಗ್ಲೆಂಡ್​ನಲ್ಲಿ ಕೌಂಟಿ ಚಾಂಪಿಯನ್​ಶಿಪ್ ಶುರುವಾಗಿದೆ. ಈ ಬಾರಿಯ ಟೂರ್ನಿಯಲ್ಲಿ ಸಸೆಕ್ಸ್ ತಂಡವನ್ನು ಭಾರತದ ಅನುಭವಿ ಬ್ಯಾಟರ್ ಚೇತೇಶ್ವರ ಪೂಜಾರ ಮುನ್ನಡೆಸುತ್ತಿರುವುದು ವಿಶೇಷ.

1 / 7
ಇದೀಗ ಮೊದಲ ಪಂದ್ಯದಲ್ಲೇ ಭರ್ಜರಿ ಶತಕ ಸಿಡಿಸುವ ಮೂಲಕ ಚೇತೇಶ್ವರ ಪೂಜಾರ ಎಲ್ಲರ ಗಮನ ಸೆಳೆದಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡರ್ಹಾಮ್ ತಂಡವು ಮೊದಲ ಇನಿಂಗ್ಸ್​ನಲ್ಲಿ 376 ರನ್​ ಕಲೆಹಾಕಿತ್ತು.

2 / 7
ಇದಕ್ಕುತ್ತರವಾಗಿ ಇನಿಂಗ್ಸ್ ಆರಂಭಿಸಿದ ಸಸೆಕ್ಸ್ ತಂಡವು 91 ರನ್​ಗಳಿಸುಷ್ಟರಲ್ಲಿ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ವೇಳೆ ಕಣಕ್ಕಿಳಿದ ಪೂಜಾರಾ ತಂಡಕ್ಕೆ ಆಸರೆಯಾದರು. ರಕ್ಷಣಾತ್ಮಕ ಆಟದೊಂದಿಗೆ ರನ್​ಗಳಿಸುತ್ತಾ ಸಾಗಿದ ಅವರು ಟಾಮ್ ಕ್ಲಾರ್ಕ್ ಅವರೊಂದಿಗೆ 112 ರನ್‌ಗಳ ಜೊತೆಯಾಟವಾಡಿದರು.

3 / 7
ಅಲ್ಲದೆ ಚೇತೇಶ್ವರ ಪೂಜಾರಾ ಈ ಪಂದ್ಯದಲ್ಲಿ 163 ಎಸೆತಗಳಲ್ಲಿ 13 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 115 ರನ್ ಬಾಸಿದರು. ವಿಶೇಷ ಎಂದರೆ ಇದು ಸಸೆಕ್ಸ್ ಪರ ಆಡಿದ 14 ಇನ್ನಿಂಗ್ಸ್‌ಗಳಲ್ಲಿ ಪೂಜಾರ ಅವರ ಆರನೇ ಶತಕವಾಗಿದೆ.

4 / 7
ಪೂಜಾರ ಅವರ ಭರ್ಜರಿ ಶತಕದ ನೆರವಿನಿಂದ ಇದೀಗ ಸಸೆಕ್ಸ್ ತಂಡವು 2ನೇ ದಿನದಾಟದ ಅಂತ್ಯಕ್ಕೆ 9 ವಿಕೆಟ್ ನಷ್ಟಕ್ಕೆ 332 ರನ್ ಕಲೆಹಾಕಿದೆ.

5 / 7
ಟೆಸ್ಟ್ ಸ್ಪೆಷಲಿಸ್ಟ್ ಎಂದೇ ಖ್ಯಾತರಾಗಿರುವ ಚೇತೇಶ್ವರ ಪೂಜಾರ ಐಪಿಎಲ್ 2021 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಆಯ್ಕೆಯಾಗಿದ್ದರು. ಆದರೆ ಒಂದೇ ಒಂದು ಪಂದ್ಯದಲ್ಲಿ ಕಣಕ್ಕಿಳಿಯಲು ಅವಕಾಶ ಸಿಕ್ಕಿರಲಿಲ್ಲ. ಅಷ್ಟೇ ಅಲ್ಲದೆ ಕಳೆದ ಸೀಸನ್​ನಲ್ಲಿ ಅವರನ್ನು ತಂಡದಿಂದ ಕೈ ಬಿಡಲಾಗಿತ್ತು.

6 / 7
ಅಂದರೆ 2021 ರಲ್ಲಿ ಸಿಎಸ್​ಕೆ ತಂಡದಲ್ಲಿದ್ದರೂ ಚೇತೇಶ್ವರ ಪೂಜಾರ ಕೊನೆಯ ಬಾರಿಗೆ ಐಪಿಎಲ್ ಪಂದ್ಯ ಆಡಿದ್ದು 2014 ರಲ್ಲಿ. ಅಲ್ಲದೆ ಇದುವರೆಗೆ 30 ಐಪಿಎಲ್​ ಪಂದ್ಯಗಳನ್ನಾಡಿರುವ ಪೂಜಾರ 20.52 ಸರಾಸರಿಯಲ್ಲಿ 390 ರನ್ ಗಳಿಸಿದ್ದಾರೆ. ಇದಾಗ್ಯೂ ಈ ಬಾರಿ ಅವರು ಐಪಿಎಲ್​ ಹರಾಜಿಗೆ ಹೆಸರು ನೀಡಿರಲಿಲ್ಲ. ಇದೀಗ ಇಂಗ್ಲೆಂಡ್​ನಲ್ಲಿ ಶತಕ ಸಿಡಿಸುವ ಮೂಲಕ ಎಲ್ಲರ ಗಮನ ಸೆಳೆದಿರುವುದು ವಿಶೇಷ.

7 / 7
Follow us
ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ

ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ

ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ

ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ

ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ

ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ

ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ

ಇ ಖಾತಾ ಅಭಿಯಾನ ಗಡುವು ವಿಸ್ತರಿಸಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದಾರೆ: ಶಾಸಕ

ಕೇಳಿದ ಪ್ರಶ್ನೆಗಳಿಗೆ ಪತ್ರಿಕಾ ಗೋಷ್ಠಿಯಲ್ಲಿ ಉತ್ತರಿಸುವುನೆಂದ ವಿಜಯೇಂದ್ರ

ಕುಮಾರಸ್ವಾಮಿ ಮತ್ತು ಸಂಬಂಧಿಕರು ಗೋಮಾಳ ಕಬಳಿಸಿರುವರೆಂದು ಹಿರೇಮಠ ಆರೋಪ