ಬಿಬಿಎಲ್ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಕ್ರಿಸ್ ಲಿನ್
ಬಿಗ್ ಬ್ಯಾಷ್ ಲೀಗ್ನಲ್ಲಿ ಆಸ್ಟ್ರೇಲಿಯಾ ತಂಡದ ಬ್ಯಾಟರ್ ಕ್ರಿಸ್ ಲಿನ್ ಹೊಸ ಮೈಲುಗಲ್ಲು ದಾಟಿದ್ದಾರೆ. ಅದು ಕೂಡ 226 ಸಿಕ್ಸ್ ಹಾಗೂ 336 ಫೋರ್ಗಳನ್ನು ಬಾರಿಸುವ ಮೂಲಕ. ಈ ಸಿಡಿಲಬ್ಬರದ ಬ್ಯಾಟಿಂಗ್ನೊಂದಿಗೆ ಕ್ರಿಸ್ ಲಿನ್ ಬಿಬಿಎಲ್ ಟೂರ್ನಿಯಲ್ಲಿ 4 ಸಾವಿರ ರನ್ ಪೂರೈಸಿದ ಮೊದಲ ಬ್ಯಾಟರ್ ದಾಖಲೆ ನಿರ್ಮಿಸಿದ್ದಾರೆ.
Updated on: Jan 05, 2026 | 9:47 AM

Big Bash 2026: ಬಿಗ್ ಬ್ಯಾಷ್ ಲೀಗ್ನಲ್ಲಿ ಸ್ಪೋಟಕ ದಾಂಡಿಗ ಕ್ರಿಸ್ ಲಿನ್ (Chris Lynn) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಬಾರಿಯ ಟೂರ್ನಿಯಲ್ಲಿ ಅಡಿಲೇಡ್ ಸ್ಟ್ರೈಕರ್ಸ್ ಪರ ಕಣಕ್ಕಿಳಿಯುತ್ತಿರುವ ಲಿನ್ ಈವರೆಗೆ ಒಟ್ಟು 111 ರನ್ ಕಲೆಹಾಕಿದ್ದಾರೆ.

ಈ ರನ್ಗಳೊಂದಿಗೆ ಬಿಗ್ ಬ್ಯಾಷ್ ಲೀಗ್ ಇತಿಹಾಸದಲ್ಲಿ 4 ಸಾವಿರ ರನ್ಗಳನ್ನು ಪೂರೈಸಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ. ಬಿಬಿಎಲ್ನಲ್ಲಿ ಈವರೆಗೆ 132 ಪಂದ್ಯಗಳನ್ನಾಡಿರುವ ಕ್ರಿಸ್ ಲಿನ್ 1 ಶತಕ ಹಾಗೂ 32 ಅರ್ಧಶತಕಗಳೊಂದಿಗೆ 4066 ರನ್ ಕಲೆಹಾಕಿದ್ದಾರೆ.

ವಿಶೇಷ ಎಂದರೆ ಕ್ರಿಸ್ ಲಿನ್ ಅವರನ್ನು ಹೊರತುಪಡಿಸಿ ಬಿಗ್ ಬ್ಯಾಷ್ ಲೀಗ್ನಲ್ಲಿ ಯಾವುದೇ ಬ್ಯಾಟರ್ 4 ಸಾವಿರ ರನ್ಗಳ ಗಡಿ ತಲುಪಿಲ್ಲ. ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ಆರೋನ್ ಫಿಂಚ್.

ಮೆಲ್ಬೋರ್ನ್ ರೆನೆಗೇಡ್ಸ್ ಪರ ಬರೋಬ್ಬರಿ 107 ಪಂದ್ಯಗಳನ್ನಾಡಿರುವ ಆರೋನ್ ಫಿಂಚ್ 105 ಇನಿಂಗ್ಸ್ಗಳ ಮೂಲಕ 2 ಭರ್ಜರಿ ಶತಕ ಹಾಗೂ 26 ಅರ್ಧಶತಕಗಳನ್ನು ಸಿಡಿಸಿದ್ದಾರೆ. ಈ ಮೂಲಕ ಒಟ್ಟು 3311 ರನ್ಗಳಿಸಿ ಬಿಗ್ ಬ್ಯಾಷ್ ಲೀಗ್ನಲ್ಲಿ ಅತ್ಯಧಿಕ ರನ್ ಕಲೆಹಾಕಿದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇದೀಗ 130 ಇನಿಂಗ್ಸ್ಗಳ ಮೂಲಕ ಕ್ರಿಸ್ ಲಿನ್ ಒಟ್ಟು 4066 ರನ್ಗಳಿಸಿದ್ದಾರೆ. ಈ ಮೂಲಕ ಬಿಬಿಎಲ್ನಲ್ಲಿ 4 ಸಾವಿರ ರನ್ಗಳಿಸಿದ ಮೊದಲ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಬಿಗ್ ಬ್ಯಾಷ್ ಲೀಗ್ನಲ್ಲಿ 200 ಕ್ಕೂ ಅಧಿಕ ಸಿಕ್ಸರ್ ಬಾರಿಸಿದ ಪ್ರಥಮ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಕ್ರಿಸ್ ಲಿನ್ ಪಾತ್ರರಾಗಿದ್ದಾರೆ.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More




