AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chris Lynn: ಬಿಗ್ ಬ್ಯಾಷ್​ ಲೀಗ್​ನಲ್ಲಿ ಹೊಸ ಇತಿಹಾಸ ಬರೆದ ಕ್ರಿಸ್ ಲಿನ್

Chris Lynn Records: ಮೆಲ್ಬೋರ್ನ್​​ ರೆನೆಗೇಡ್ಸ್ ವಿರುದ್ಧದ ಈ ಪಂದ್ಯದಲ್ಲಿ 3ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಕ್ರಿಸ್ ಲಿನ್ 34 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 56 ರನ್​ ಚಚ್ಚಿದ್ದರು.

TV9 Web
| Edited By: |

Updated on: Jan 02, 2024 | 10:38 AM

Share
ಆಸ್ಟ್ರೇಲಿಯಾದ ಸ್ಪೋಟಕ ಬ್ಯಾಟರ್ ಕ್ರಿಸ್ ಲಿನ್ ಬಿಗ್ ಬ್ಯಾಷ್ ಲೀಗ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಸಿಕ್ಸ್ ಸಿಡಿಸಿ ಎಂಬುದು ವಿಶೇಷ. ಈ ಬಾರಿಯ ಬಿಗ್ ಬ್ಯಾಷ್ ಲೀಗ್​ನಲ್ಲಿ ಅಡಿಲೇಡ್ ಸ್ಟ್ರೈಕರ್ಸ್ ತಂಡದ ಪರ ಆಡುತ್ತಿರುವ ಲಿನ್ 18ನೇ ಪಂದ್ಯದಲ್ಲಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ದರು.

1 / 5
ಮೆಲ್ಬೋರ್ನ್​​ ರೆನೆಗೇಡ್ಸ್ ವಿರುದ್ಧದ ಈ ಪಂದ್ಯದಲ್ಲಿ 3ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಕ್ರಿಸ್ ಲಿನ್ 34 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 56 ರನ್​ ಚಚ್ಚಿದ್ದರು. ಈ ವೇಳೆ ಬಾರಿಸಿದ ನಾಲ್ಕು ಸಿಕ್ಸರ್​ಗಳೊಂದಿಗೆ ಬಿಬಿಎಲ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದರು.

2 / 5
ಹೌದು, ಬಿಗ್ ಬ್ಯಾಷ್ ಲೀಗ್​ ಇತಿಹಾಸದಲ್ಲೇ 200 ಸಿಕ್ಸ್​ಗಳನ್ನು ಬಾರಿಸಿದ ಮೊದಲ ಬ್ಯಾಟರ್ ಎಂಬ ದಾಖಲೆ ಕ್ರಿಸ್ ಲಿನ್ ಪಾಲಾಗಿದೆ. ಬಿಬಿಎಲ್​ನಲ್ಲಿ ಒಟ್ಟು 115 ಇನಿಂಗ್ಸ್ ಆಡಿರುವ ಲಿನ್ ಒಟ್ಟು 204 ಸಿಕ್ಸ್​ಗಳನ್ನು ಸಿಡಿಸಿದ್ದಾರೆ. ಹಾಗೆಯೇ 292 ಫೋರ್​ಗಳನ್ನು ಬಾರಿಸಿದ್ದಾರೆ.

3 / 5
ಅಷ್ಟೇ ಅಲ್ಲದೆ ಬಿಗ್ ಬ್ಯಾಷ್ ಲೀಗ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್​ಗಳ ಪಟ್ಟಿಯಲ್ಲೂ ಅಗ್ರಸ್ಥಾನದಲ್ಲಿದ್ದಾರೆ. ಕ್ರಿಸ್ ಲಿನ್ ಒಟ್ಟು 115 ಇನಿಂಗ್ಸ್ ಆಡಿದ್ದು, ಈ ವೇಳೆ ಒಂದು ಶತಕ ಹಾಗೂ 29 ಅರ್ಧಶತಕಗಳೊಂದಿಗೆ 3611 ರನ್​ ಕಲೆಹಾಕಿದ್ದಾರೆ.

4 / 5
ಬಿಗ್ ಬ್ಯಾಷ್ ಲೀಗ್​ನಲ್ಲಿ ಸಿಕ್ಸರ್ ಕಿಂಗ್ ಹಾಗೂ ಟಾಪ್ ರನ್ ಸರದಾರ ಎನಿಸಿಕೊಂಡರೂ ಈ ಬಾರಿಯ ಐಪಿಎಲ್​ಗೆ ಕ್ರಿಸ್ ಲಿನ್​ ಆಯ್ಕೆಯಾಗಿಲ್ಲ. ಈ ಬಾರಿಯ ಐಪಿಎಲ್​ ಹರಾಜಿನಲ್ಲಿ 1.5 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಲಿನ್ ಅವರ ಖರೀದಿಗೆ ಯಾವುದೇ ಫ್ರಾಂಚೈಸಿ ಆಸಕ್ತಿ ತೋರಲಿಲ್ಲ. ಇದಾಗ್ಯೂ ಬದಲಿ ಆಟಗಾರನಾಗಿ ಐಪಿಎಲ್​ಗೆ ಎಂಟ್ರಿ ಕೊಡಲಿದ್ದಾರಾ ಕಾದು ನೋಡಬೇಕಿದೆ.

5 / 5
Follow Us
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ

‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ

ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?

‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ

ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?

ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ

ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!

ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!

ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ

‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ