AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chris Woakes: 1000 ವಿಕೆಟ್ ಕಬಳಿಸಿದ ಕ್ರಿಸ್ ವೋಕ್ಸ್

England vs West Indies: ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ಪ್ರಥಮ ಇನಿಂಗ್ಸ್​ನಲ್ಲಿ 416 ರನ್​ ಕಲೆಹಾಕಿದರೆ, ದ್ವಿತೀಯ ಇನಿಂಗ್ಸ್​ನಲ್ಲಿ 425 ರನ್ ಪೇರಿಸಿತು. ಅತ್ತ ವೆಸ್ಟ್ ಇಂಡೀಸ್ ತಂಡವು ಮೊದಲ ಇನಿಂಗ್ಸ್​ನಲ್ಲಿ 457 ರನ್ ಬಾರಿಸಿದರೂ, ದ್ವಿತೀಯ ಇನಿಂಗ್ಸ್​ನಲ್ಲಿ 143 ರನ್​ಗಳಿಗೆ ಆಲೌಟ್ ಆಗುವ ಮೂಲಕ 241 ರನ್​ಗಳಿಂದ ಸೋಲೊಪ್ಪಿಕೊಂಡಿದೆ.

ಝಾಹಿರ್ ಯೂಸುಫ್
|

Updated on: Jul 22, 2024 | 9:53 AM

Share
ಇಂಗ್ಲೆಂಡ್ ವೇಗಿ ಕ್ರಿಸ್ ವೋಕ್ಸ್ (Chris Woakes) ತಮ್ಮ ವೃತ್ತಿಜೀವನದಲ್ಲಿ 1000 ವಿಕೆಟ್​ಗಳನ್ನು ಕಬಳಿಸಿದ್ದಾರೆ. ನಾಟಿಂಗ್​ಹ್ಯಾಮ್​ನ ಟ್ರೆಂಟ್ ಬಿಡ್ಜ್​ ಮೈದಾನದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಒಟ್ಟು 6 ವಿಕೆಟ್​ಗಳನ್ನು ಕಬಳಿಸುವ ಮೂಲಕ ವೋಕ್ಸ್ ಈ ಸಾಧನೆ ಮಾಡಿದ್ದಾರೆ.

1 / 5
ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 577 ವಿಕೆಟ್‌ಗಳನ್ನು ಕಬಳಿಸಿರುವ ಕ್ರಿಸ್ ವೋಕ್ಸ್, ಲಿಸ್ಟ್ ಎ ಕ್ರಿಕೆಟ್​ನಲ್ಲಿ 251 ವಿಕೆಟ್ ಪಡೆದಿದ್ದಾರೆ. ಹಾಗೆಯೇ ಟಿ20 ಕ್ರಿಕೆಟ್‌ನಲ್ಲಿ 172 ವಿಕೆಟ್‌ಗಳನ್ನು ಪಡೆಯುವ ಮೂಲಕ 1000 ವಿಕೆಟ್‌ಗಳ ಮೈಲುಗಲ್ಲು ದಾಟಿದ್ದಾರೆ. ಈ ಸಾಧನೆ ಮೂಡಿಬಂದಿರುವುದು ಕ್ರಿಸ್ ವೋಕ್ಸ್ ಅವರ 50ನೇ ಟೆಸ್ಟ್ ಪಂದ್ಯದ ಮೂಲಕ ಎಂಬುದು ವಿಶೇಷ.

2 / 5
ಇಂಗ್ಲೆಂಡ್ ತಂಡದ ಪ್ರಮುಖ ವೇಗಿಯಾಗಿ ಗುರುತಿಸಿಕೊಂಡಿರುವ ಕ್ರಿಸ್ ವೋಕ್ಸ್ ಟೆಸ್ಟ್ ಕ್ರಿಕೆಟ್​ನಲ್ಲಿ ಒಟ್ಟು 96 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿದ್ದಾರೆ. ಈ ವೇಳೆ 8893 ಎಸೆತಗಳನ್ನು ಎಸೆದಿರುವ ಅವರು ಒಟ್ಟು 156 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಾಗೆಯೇ 112 ಏಕದಿನ ಪಂದ್ಯಗಳಲ್ಲಿ 5737 ಎಸೆತಗಳ ಮೂಲಕ ಒಟ್ಟು 173 ಪಡೆದಿದ್ದಾರೆ.

3 / 5
ಇದೀಗ ಟೆಸ್ಟ್ ಕ್ರಿಕೆಟ್​ನಲ್ಲಿ ತೊಡಗಿಸಿಕೊಂಡಿರುವ 35 ವರ್ಷದ ಕ್ರಿಸ್ ವೋಕ್ಸ್ ಭರ್ಜರಿ ಪ್ರದರ್ಶನ ಮುಂದುವರೆಸಿದ್ದಾರೆ. ಅಲ್ಲದೆ ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟೆಸ್ಟ್​ ಪಂದ್ಯದಲ್ಲಿ ಒಟ್ಟು 112 ರನ್ ನೀಡುವ ಮೂಲಕ 6 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಈ ಮೂಲಕ ಇಂಗ್ಲೆಂಡ್ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

4 / 5
ಅಂದಹಾಗೆ ಕ್ರಿಸ್ ವೋಕ್ಸ್ ಈ ಹಿಂದೆ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಕಾಣಿಸಿಕೊಂಡಿದ್ದರು. ಅಲ್ಲದೆ ಕೊಲ್ಕತ್ತಾ ನೈಟ್ ರೈಡರ್ಸ್, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್​ ತಂಡಗಳನ್ನು ಪ್ರತಿನಿಧಿಸಿದ್ದಾರೆ. ಈ ವೇಳೆ 21 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ವೋಕ್ಸ್ 30 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

5 / 5
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು

60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು

ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್

ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್

ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು

ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು

ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್

ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!

ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?