
ಇಂಗ್ಲೆಂಡ್ ವೇಗಿ ಕ್ರಿಸ್ ವೋಕ್ಸ್ (Chris Woakes) ತಮ್ಮ ವೃತ್ತಿಜೀವನದಲ್ಲಿ 1000 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ನಾಟಿಂಗ್ಹ್ಯಾಮ್ನ ಟ್ರೆಂಟ್ ಬಿಡ್ಜ್ ಮೈದಾನದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಒಟ್ಟು 6 ವಿಕೆಟ್‌ಗಳನ್ನು ಕಬಳಿಸುವ ಮೂಲಕ ವೋಕ್ಸ್ ಈ ಸಾಧನೆ ಮಾಡಿದ್ದಾರೆ.

ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 577 ವಿಕೆಟ್‌ಗಳನ್ನು ಕಬಳಿಸಿರುವ ಕ್ರಿಸ್ ವೋಕ್ಸ್, ಲಿಸ್ಟ್ ಎ ಕ್ರಿಕೆಟ್‌ನಲ್ಲಿ 251 ವಿಕೆಟ್ ಪಡೆದಿದ್ದಾರೆ. ಹಾಗೆಯೇ ಟಿ20 ಕ್ರಿಕೆಟ್‌ನಲ್ಲಿ 172 ವಿಕೆಟ್‌ಗಳನ್ನು ಪಡೆಯುವ ಮೂಲಕ 1000 ವಿಕೆಟ್‌ಗಳ ಮೈಲುಗಲ್ಲು ದಾಟಿದ್ದಾರೆ. ಈ ಸಾಧನೆ ಮೂಡಿಬಂದಿರುವುದು ಕ್ರಿಸ್ ವೋಕ್ಸ್ ಅವರ 50ನೇ ಟೆಸ್ಟ್ ಪಂದ್ಯದ ಮೂಲಕ ಎಂಬುದು ವಿಶೇಷ.

ಇಂಗ್ಲೆಂಡ್ ತಂಡದ ಪ್ರಮುಖ ವೇಗಿಯಾಗಿ ಗುರುತಿಸಿಕೊಂಡಿರುವ ಕ್ರಿಸ್ ವೋಕ್ಸ್ ಟೆಸ್ಟ್ ಕ್ರಿಕೆಟ್‌ನಲ್ಲಿ ಒಟ್ಟು 96 ಇನಿಂಗ್ಸ್ಗಳಲ್ಲಿ ಬೌಲಿಂಗ್ ಮಾಡಿದ್ದಾರೆ. ಈ ವೇಳೆ 8893 ಎಸೆತಗಳನ್ನು ಎಸೆದಿರುವ ಅವರು ಒಟ್ಟು 156 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಾಗೆಯೇ 112 ಏಕದಿನ ಪಂದ್ಯಗಳಲ್ಲಿ 5737 ಎಸೆತಗಳ ಮೂಲಕ ಒಟ್ಟು 173 ಪಡೆದಿದ್ದಾರೆ.

ಇದೀಗ ಟೆಸ್ಟ್ ಕ್ರಿಕೆಟ್‌ನಲ್ಲಿ ತೊಡಗಿಸಿಕೊಂಡಿರುವ 35 ವರ್ಷದ ಕ್ರಿಸ್ ವೋಕ್ಸ್ ಭರ್ಜರಿ ಪ್ರದರ್ಶನ ಮುಂದುವರೆಸಿದ್ದಾರೆ. ಅಲ್ಲದೆ ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಒಟ್ಟು 112 ರನ್ ನೀಡುವ ಮೂಲಕ 6 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಈ ಮೂಲಕ ಇಂಗ್ಲೆಂಡ್ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

ಅಂದಹಾಗೆ ಕ್ರಿಸ್ ವೋಕ್ಸ್ ಈ ಹಿಂದೆ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಕಾಣಿಸಿಕೊಂಡಿದ್ದರು. ಅಲ್ಲದೆ ಕೊಲ್ಕತ್ತಾ ನೈಟ್ ರೈಡರ್ಸ್, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳನ್ನು ಪ್ರತಿನಿಧಿಸಿದ್ದಾರೆ. ಈ ವೇಳೆ 21 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ವೋಕ್ಸ್ 30 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.