Jay Shah: ಜಯ್ ಶಾಗೆ ಒಲಿದ ಸ್ಪೋರ್ಟ್ಸ್ ಬಿಸಿನೆಸ್ ಲೀಡರ್ ಆಫ್ ದಿ ಇಯರ್ ಪ್ರಶಸ್ತಿ
Jay Shah: ಸಾಲು ಸಾಲು ಸವಾಲುಗಳ ನಡುವೆಯೂ ಏಷ್ಯಾಕಪ್ ಹಾಗೂ ಏಕದಿನ ವಿಶ್ವಕಪ್ ಅನ್ನು ಅತ್ಯಂತ ಯಶಸ್ವಿಯಾಗಿ ನಡೆಸಿದೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರಿಗೆ 2023ರ ಸ್ಪೋರ್ಟ್ಸ್ ಬಿಸಿನೆಸ್ ಲೀಡರ್ ಆಫ್ ದಿ ಇಯರ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
1 / 6
ಸಾಲು ಸಾಲು ಸವಾಲುಗಳ ನಡುವೆಯೂ ಏಷ್ಯಾಕಪ್ ಹಾಗೂ ಏಕದಿನ ವಿಶ್ವಕಪ್ ಅನ್ನು ಅತ್ಯಂತ ಯಶಸ್ವಿಯಾಗಿ ನಡೆಸಿದೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರಿಗೆ 2023ರ ವರ್ಷದ ಕ್ರೀಡಾ ಉದ್ಯಮ ನಾಯಕ ಪ್ರಶಸ್ತಿ (Sports Business Leader of the Year) ನೀಡಿ ಗೌರವಿಸಲಾಗಿದೆ.
2 / 6
ಈ ಸುದ್ದಿಯನ್ನು ಬಿಸಿಸಿಐ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು. ‘2023 ರ ಸ್ಪೋರ್ಟ್ಸ್ ಬಿಸಿನೆಸ್ ಲೀಡರ್ ಆಫ್ ದಿ ಇಯರ್ ಪ್ರಶಸ್ತಿಗೆ ಭಾಜನರಾದ ಬಿಸಿಸಿಐ ಗೌರವ ಕಾರ್ಯದರ್ಶಿ ಜಯ್ ಶಾ ಅವರಿಗೆ ಅಭಿನಂದನೆಗಳು. ಕ್ರೀಡಾ ಆಡಳಿತದಲ್ಲಿ ಈ ವಿಶೇಷ ಗೌರವವನ್ನು ಪಡೆದ ಮೊದಲ ವ್ಯಕ್ತಿ ಜಯ್ ಶಾ. ಅವರು ನಿಜವಾಗಿಯೂ ಈ ಗೌರವಕ್ಕೆ ಅರ್ಹರು ಎಂದು ಬರೆದುಕೊಂಡಿದೆ.
3 / 6
ಬಿಸಿಸಿಐನಲ್ಲಿ ಕಾರ್ಯದರ್ಶಿ ಹುದ್ದೆಯ ಹೊರತಾಗಿ, ಜಯ್ ಶಾ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷರೂ ಆಗಿದ್ದಾರೆ. ಈ ಹುದ್ದೆಗೇರುವ ಮೊದಲು ಅವರು ಗುಜರಾತ್ ಕ್ರಿಕೆಟ್ ಸಂಸ್ಥೆಯಲ್ಲಿ ಜಂಟಿ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದರು.
4 / 6
ಜಯ್ ಶಾ 2019 ರಲ್ಲಿ ಬಿಸಿಸಿಐ ಕಾರ್ಯದರ್ಶಿಯಾಗಿ ಆಯ್ಕೆಯಾದರು. ಮತ್ತು ವರ್ಷದ ಆರಂಭದಲ್ಲಿ ಎಸಿಸಿ ಅಧ್ಯಕ್ಷರಾಗಿಯೂ ಆಯ್ಕೆಯಾದರು. ಇತ್ತೀಚೆಗೆ ಮುಕ್ತಾಯಗೊಂಡ 2023ರ ಏಕದಿನ ವಿಶ್ವಕಪ್ ಮತ್ತು ಶ್ರೀಲಂಕಾ ಹಾಗೂ ಪಾಕಿಸ್ತಾನದ ಜಂಟಿ ಆತಿಥ್ಯದಲ್ಲಿ ನಡೆದ ಏಷ್ಯಾಕಪ್ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ನಡೆಸಿದ ಕೀರ್ತಿ ಜಯ್ ಶಾ ಅವರಿಗೆ ಸಲ್ಲುತ್ತದೆ.
5 / 6
ಅದರಲ್ಲೂ ವಿಶ್ವಕಪ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಏಕಾಂಗಿಯಾಗಿ ಭಾರತದಲ್ಲಿ ಯಶಸ್ವಿ ವಿಶ್ವಕಪ್ ಆಯೋಜಿಸಿದ ಶ್ರೇಯ ಜಯ್ ಶಾ ಅವರಿಗೆ ಸಲ್ಲುತ್ತದೆ. ಈ ವಿಶ್ವಕಪ್ ಅನ್ನು ಸುಮಾರು 1.25 ಮಿಲಿಯನ್ ಪ್ರೇಕ್ಷಕರು ಮೈದಾನಕ್ಕೆ ಬಂದು ವೀಕ್ಷಿಸಿದ್ದೇ ಏಕದಿನ ವಿಶ್ವಕಪ್ ಎಷ್ಟು ಯಶಸ್ವಿಯಾಯಿತು ಎಂಬುದಕ್ಕೆ ಸಾಕ್ಷಿಯಾಗಿದೆ.
6 / 6
ಜಯ್ ಶಾ ತಮ್ಮ ನಾಯಕತ್ವದ ಗುಣಗಳಿಂದ ವಿಶ್ವ ಕ್ರಿಕೆಟ್‌ನ ಮೇಲೂ ಪ್ರಭಾವ ಬೀರಿದರು. ಒಲಿಂಪಿಕ್ಸ್‌ಗೆ ಕ್ರಿಕೆಟ್ ಸೇರ್ಪಡೆಗೊಳ್ಳುವಲ್ಲಿ ಶಾ ಪ್ರಮುಖ ಪಾತ್ರ ವಹಿಸಿದ್ದಾರೆ. ಕ್ರಿಕೆಟ್‌ಗೆ ಅವರ ಸೇವೆಯನ್ನು ಗುರುತಿಸಿ ಭಾರತೀಯ ಕೈಗಾರಿಕೆಗಳ ಒಕ್ಕೂಟ (ಸಿಐಐ) ಅವರನ್ನು ಅತ್ಯುತ್ತಮ ಕ್ರೀಡಾ ಉದ್ಯಮ ನಾಯಕ ಎಂದು ಗುರುತಿಸಿದೆ.
Published On - 12:45 pm, Tue, 5 December 23