ಸೋಲಿನ ನಡುವೆ ಹೊಸ ಚರಿತ್ರೆ ಬರೆದ ಕೂಪರ್ ಕೊನೊಲಿ!

Updated on: May 07, 2026 | 8:53 AM

Cooper Connolly Records: ಐಪಿಎಲ್ ಇತಿಹಾಸದ ದಾಖಲೆ ಪುಸ್ತಕದಲ್ಲಿ ಆಸ್ಟ್ರೇಲಿಯಾದ ಯುವ ದಾಂಡಿಗ ಕೂಪರ್ ಕೊನೊಲಿ ಹೊಸ ಅಧ್ಯಾಯ ಬರೆದಿದ್ದಾರೆ. ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ಸ್ಫೋಟಕ ಶತಕ ಸಿಡಿಸಿದ ಎಡಗೈ ದಾಂಡಿಗ ಹೊಸ ಇತಿಹಾಸ ಬರೆಯುವಲ್ಲಿ ಯಶಸ್ವಿಯಾಗಿದ್ದಾರೆ. ಅದು ಸಹ ಡಿಕಾಕ್ ಹೆಸರಿನಲ್ಲಿದ್ದ 10 ವರ್ಷಗಳ ಹಳೆಯ ದಾಖಲೆ ಮುರಿಯುವ ಮೂಲಕ ಎಂಬುದು ವಿಶೇಷ.

1 / 6
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಹೊಸ ಇತಿಹಾಸ ನಿರ್ಮಾಣವಾಗಿದೆ. ಅದು ಕೂಡ ಸೋಲಿನ ನಡುವೆ. ಅಂದರೆ ಐಪಿಎಲ್ ಇತಿಹಾಸದಲ್ಲೇ ಶತಕ ಸಿಡಿಸಿದ ಅತ್ಯಂತ ಕಿರಿಯ ವಿದೇಶಿ ಬ್ಯಾಟರ್ ಎಂಬ ದಾಖಲೆ ಪಂಜಾಬ್ ಕಿಂಗ್ಸ್​ ತಂಡದ ಯುವ ದಾಂಡಿಗ ಕೂಪರ್ ಕೊನೊಲಿ (Cooper Connolly) ಪಾಲಾಗಿದೆ. (PC: IPL)

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಹೊಸ ಇತಿಹಾಸ ನಿರ್ಮಾಣವಾಗಿದೆ. ಅದು ಕೂಡ ಸೋಲಿನ ನಡುವೆ. ಅಂದರೆ ಐಪಿಎಲ್ ಇತಿಹಾಸದಲ್ಲೇ ಶತಕ ಸಿಡಿಸಿದ ಅತ್ಯಂತ ಕಿರಿಯ ವಿದೇಶಿ ಬ್ಯಾಟರ್ ಎಂಬ ದಾಖಲೆ ಪಂಜಾಬ್ ಕಿಂಗ್ಸ್​ ತಂಡದ ಯುವ ದಾಂಡಿಗ ಕೂಪರ್ ಕೊನೊಲಿ (Cooper Connolly) ಪಾಲಾಗಿದೆ. (PC: IPL)

2 / 6

ಹೈದರಾಬಾದ್​​ನ ರಾಜೀವ್ ಗಾಂಧಿ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 49ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ  ಸನ್​ರೈಸರ್ಸ್ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ 235 ರನ್​​ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ ಪರ ಕೂಪರ್ ಕೊನೊಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. (PC: IPL)

3 / 6

ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೂಪರ್ ಕೊನೊಲಿ ಎಸ್​ಆರ್​​​ಹೆಚ್​ ಬೌಲರ್​ಗಳನ್ನು ಮನಸೋ ಇಚ್ಛೆ ದಂಡಿಸಿದ್ದರು. ಈ ಮೂಲಕ 57 ಎಸೆತಗಳಲ್ಲಿ ಶತಕ ಪೂರೈಸಿದ್ದಾರೆ. ಈ ಸೆಂಚುರಿಯೊಂದಿಗೆ ಐಪಿಎಲ್ ಇತಿಹಾಸದಲ್ಲಿ ಶತಕ ಸಿಡಿಸಿದ ಅತ್ಯಂತ ಕಿರಿಯ ವಿದೇಶಿ ಆಟಗಾರ ಎಂಬ ದಾಖಲೆ ಕೊನೊಲಿ ಪಾಲಾಯಿತು. (PC: IPL)

4 / 6

ಇದಕ್ಕೂ ಮುನ್ನ ಈ ದಾಖಲೆ ಕ್ವಿಂಟನ್ ಡಿಕಾಕ್ ಹೆಸರಿನಲ್ಲಿತ್ತು. 2016 ರಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ (ಈಗಿನ ಡೆಲ್ಲಿ ಕ್ಯಾಪಿಟಲ್ಸ್​) ಪರ ಕಣಕ್ಕಿಳಿದಿದ್ದ ಡಿಕಾಕ್ ಆರ್​ಸಿಬಿ ವಿರುದ್ಧ ಶತಕ ಸಿಡಿಸಿದ್ದರು. ಈ ವೇಳೆ ಅವರ ವಯಸ್ಸು 23 ವರ್ಷ, 122 ದಿನಗಳು. ಈ ಮೂಲಕ ಐಪಿಎಲ್​​ನಲ್ಲಿ ಸೆಂಚುರಿ ಬಾರಿಸಿದ ಅತೀ ಕಿರಿಯ ವಿದೇಶಿಗ ಎನಿಸಿಕೊಂಡಿದ್ದರು. (PC: IPL)

5 / 6

ಇದೀಗ 10 ವರ್ಷಗಳ ಬಳಿಕ ಈ ದಾಖಲೆಯನ್ನು ಅಳಿಸಿ ಹಾಕುವಲ್ಲಿ ಆಸ್ಟ್ರೇಲಿಯಾ ದಾಂಡಿಗ ಯಶಸ್ವಿಯಾಗಿದ್ದಾನೆ. ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಕೇವಲ 57 ಎಸೆತಗಳಲ್ಲಿ ಸೆಂಚುರಿ ಪೂರೈಸಿ 22 ವರ್ಷದ ಕೂಪರ್ ಕೊನೊಲಿ ಐಪಿಎಲ್​ನಲ್ಲಿ ಶತಕ ಸಿಡಿಸಿದ ಅತೀ ಕಿರಿಯ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. (PC: IPL)

6 / 6

ಈ ದಾಖಲೆಯ ಹೊರತಾಗಿಯೂ ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ ಸೋಲನುಭವಿಸಿದೆ. ಎಸ್​ಆರ್​ಹೆಚ್ ನೀಡಿದ 236 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಪಂಜಾಬ್ ಕಿಂಗ್ಸ್ ಪರ ಕೂಪರ್ ಕೊನೊಲಿ 59 ಎಸೆತಗಳಲ್ಲಿ 8 ಭರ್ಜರಿ ಸಿಕ್ಸರ್ ಹಾಗೂ 7 ಫೋರ್​ಗಳೊಂದಿಗೆ ಅಜೇಯ 107 ರನ್ ಬಾರಿಸಿದರು. ಇದಾಗ್ಯೂ ಉಳಿದ ಬ್ಯಾಟರ್​​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ 20 ಓವರ್​ಗಳಲ್ಲಿ 202 ರನ್​ಗಳಿಸಿ ಪಂಜಾಬ್ ಕಿಂಗ್ಸ್ 33 ರನ್​​ಗಳಿಂದ ಸೋಲೊಪ್ಪಿಕೊಂಡಿದೆ. (PC: IPL)

Published On - 8:52 am, Thu, 7 May 26

Loading...
Unable to load recommendations.
Follow Us