- Kannada News Photo gallery Cricket photos CPL 2023: Ambati Rayudu signs up for St Kitts and Nevis Patriots
CPL 2023: ಕೆರಿಬಿಯನ್ ಪ್ರೀಮಿಯರ್ ಲೀಗ್ಗೆ ಅಂಬಾಟಿ ರಾಯುಡು ಎಂಟ್ರಿ?
Ambati Rayudu: ಅಂಬಾಟಿ ರಾಯುಡು ಸೇಂಟ್ ಕಿಟ್ಸ್ ಮತ್ತು ನೆವಿಸ್ ಪೇಟ್ರಿಯಾಟ್ಸ್ ಪರ ಕಣಕ್ಕಿಳಿದರೆ, ಕೆರಿಬಿಯನ್ ಪ್ರೀಮಿಯರ್ ಲೀಗ್ನಲ್ಲಿ ಆಡಿದ 2ನೇ ಭಾರತೀಯ ಆಟಗಾರ ಎನಿಸಿಕೊಳ್ಳಲಿದ್ದಾರೆ. ಇದಕ್ಕೂ ಮುನ್ನ ರಾಜಸ್ಥಾನ್ ರಾಯಲ್ಸ್ ತಂಡದ ಮಾಜಿ ಲೆಗ್ ಸ್ಪಿನ್ನರ್ ಪ್ರವೀಣ್ ತಾಂಬೆ ಟ್ರಿನ್‌ಬಾಗೊ ನೈಟ್ ರೈಡರ್ಸ್ ತಂಡದ ಪರ ಕಣಕ್ಕಿಳಿದಿದ್ದರು.
Updated on: Aug 12, 2023 | 5:07 PM

ಟೀಮ್ ಇಂಡಿಯಾದ ಮಾಜಿ ಆಟಗಾರ ಅಂಬಾಟಿ ರಾಯುಡು ಕೆರಿಬಿಯನ್ ಪ್ರೀಮಿಯರ್ ಲೀಗ್ನತ್ತ ಮುಖ ಮಾಡಿದ್ದಾರೆ. ಐಪಿಎಲ್ 2023 ರ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ಗೆ ವಿದಾಯ ಹೇಳಿರುವ ರಾಯುಡು ಸಿಪಿಎಲ್ನ ಸೇಂಟ್ ಕಿಟ್ಸ್ ಮತ್ತು ನೆವಿಸ್ ಪೇಟ್ರಿಯಾಟ್ಸ್ ತಂಡಕ್ಕೆ ಆಯ್ಕೆಯಾಗಿದ್ದಾರೆ ಎಂದು ವರದಿಯಾಗಿದೆ.

ಈ ವರದಿ ಪ್ರಕಾರ, ರಾಯುಡು ಸೇಂಟ್ ಕಿಟ್ಸ್ ಮತ್ತು ನೆವಿಸ್ ಪೇಟ್ರಿಯಾಟ್ಸ್ ತಂಡಕ್ಕೆ ಮಾರ್ಕ್ಯೂ ಪ್ಲೇಯರ್ ಆಗಿ ಸಹಿ ಹಾಕಿದ್ದಾರೆ. ಹೀಗಾಗಿ ಮುಂಬರುವ ಕೆರಿಬಿಯನ್ ಪ್ರೀಮಿಯರ್ ಲೀಗ್ನಲ್ಲಿ ಅಂಬಾಟಿ ರಾಯುಡು ಕಾಣಿಸಿಕೊಳ್ಳುವುದು ಖಚಿತ ಎನ್ನಲಾಗಿದೆ.

ಐಪಿಎಲ್ 2023ರ ಮೂಲಕ ವಿದಾಯ ಹೇಳಿದ್ದ ಅಂಬಾಟಿ ರಾಯುಡು ಆ ಬಳಿಕ USA ನಲ್ಲಿ ನಡೆದ ಮೇಜರ್ ಕ್ರಿಕೆಟ್ ಲೀಗ್ನಲ್ಲಿ ಕಾಣಿಸಿಕೊಳ್ಳಲು ಬಯಸಿದ್ದರು. ಅಷ್ಟೇ ಅಲ್ಲದೆ CSK ಫ್ರಾಂಚೈಸ್ನ ಟೆಕ್ಸಾಸ್ ಸೂಪರ್ ಕಿಂಗ್ಸ್ ಜೊತೆ ಒಪ್ಪಂದ ಮಾಡಿಕೊಂಡಿದ್ದರು.

ಇದರ ಬೆನ್ನಲ್ಲೇ ಬಿಸಿಸಿಐ ಭಾರತೀಯ ಆಟಗಾರರು ನಿವೃತ್ತಿಯ ನಂತರ ವಿದೇಶಿ ಲೀಗ್‌ಗಳಲ್ಲಿ ಭಾಗವಹಿಸುವುದನ್ನು ತಡೆಯಲು ಕೂಲಿಂಗ್-ಆಫ್ ಅವಧಿ ಜಾರಿಗೆ ತರಲು ಚಿಂತನೆ ನಡೆಸುವುದಾಗಿ ತಿಳಿಸಿತ್ತು. ಹೀಗಾಗಿ ರಾಯುಡು ಮೇಜರ್ ಕ್ರಿಕೆಟ್ ಲೀಗ್ನಿಂದ ಹಿಂದೆ ಸರಿದಿದ್ದರು.

ಆದರೆ ಇದೀಗ ಬಿಸಿಸಿಐ ಅಂತಹ ಯಾವುದೇ ಹೊಸ ನಿಯಮವನ್ನು ಜಾರಿಗೊಳಿಸಿಲ್ಲ. ಹೀಗಾಗಿ ಕೆರಿಬಿಯನ್ ಪ್ರೀಮಿಯರ್ ಲೀಗ್ ಮೂಲಕ ಹೊಸ ಇನಿಂಗ್ಸ್ ಆರಂಭಿಸಲು ಅಂಬಾಟಿ ರಾಯುಡು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

ಒಂದು ವೇಳೆ ಅಂಬಾಟಿ ರಾಯುಡು ಸೇಂಟ್ ಕಿಟ್ಸ್ ಮತ್ತು ನೆವಿಸ್ ಪೇಟ್ರಿಯಾಟ್ಸ್ ಪರ ಕಣಕ್ಕಿಳಿದರೆ, ಕೆರಿಬಿಯನ್ ಪ್ರೀಮಿಯರ್ ಲೀಗ್ನಲ್ಲಿ ಆಡಿದ 2ನೇ ಭಾರತೀಯ ಆಟಗಾರ ಎನಿಸಿಕೊಳ್ಳಲಿದ್ದಾರೆ.

ಇದಕ್ಕೂ ಮುನ್ನ ರಾಜಸ್ಥಾನ್ ರಾಯಲ್ಸ್ ತಂಡದ ಮಾಜಿ ಲೆಗ್ ಸ್ಪಿನ್ನರ್ ಪ್ರವೀಣ್ ತಾಂಬೆ ಟ್ರಿನ್‌ಬಾಗೊ ನೈಟ್ ರೈಡರ್ಸ್ ತಂಡದ ಪರ ಕಣಕ್ಕಿಳಿದಿದ್ದರು. ಇದೀಗ ಅಂಬಾಟಿ ರಾಯುಡು ಕೂಡ ಕೆರಿಬಿಯನ್ ಪ್ರೀಮಿಯರ್ ಲೀಗ್ನತ್ತ ಮುಖ ಮಾಡಿದ್ದಾರೆ.
