ಬರೋಬ್ಬರಿ 42 ಸಿಕ್ಸ್: IPL ಟೀಮ್ಗಳ ವಿಶ್ವ ದಾಖಲೆ ಸರಿಗಟ್ಟಿದ CPL ತಂಡಗಳು
CPL 2024: ಟಿ20 ಕ್ರಿಕೆಟ್ ಪಂದ್ಯವೊಂದರಲ್ಲಿ ಮೂಡಿಬಂದ ಗರಿಷ್ಠ ಸಿಕ್ಸ್ಗಳ ಸಂಖ್ಯೆ 42. ಇಂತಹದೊಂದು ವಿಶ್ವ ದಾಖಲೆಯನ್ನು ನಿರ್ಮಿಸಿದ್ದು ಐಪಿಎಲ್ ತಂಡಗಳಾದ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಪಂಜಾಬ್ ಕಿಂಗ್ಸ್. ಇದೀಗ ಈ ದಾಖಲೆಯನ್ನು ಕೆರಿಬಿಯನ್ ಪ್ರೀಮಿಯರ್ ಲೀಗ್ನ ಎರಡು ತಂಡಗಳು ಸರಿಗಟ್ಟಿದೆ.
1 / 6
ಒಂದೇ ಪಂದ್ಯದಲ್ಲಿ ಬರೋಬ್ಬರಿ 42 ಸಿಕ್ಸರ್ಗಳು... ಐಪಿಎಲ್ನಲ್ಲಿ ನಿರ್ಮಾಣವಾದ ವಿಶ್ವ ದಾಖಲೆಗೆ ಸರಿಸಮಾನವಾಗಿ ನಿಂತ ಸಿಪಿಎಲ್ ತಂಡಗಳು. ಹೌದು, ಕೆರಿಬಿಯನ್ ಪ್ರೀಮಿಯರ್ ಲೀಗ್ನ 7ನೇ ಪಂದ್ಯದಲ್ಲಿ ಸಿಕ್ಸರ್ಗಳ ಸುರಿಮಳೆಯಾಗಿದೆ. ಈ ಸಿಕ್ಸ್ ಸುರಿಮಳೆಯೊಂದಿಗೆ ಟಿ20 ಕ್ರಿಕೆಟ್ನಲ್ಲಿ ವಿಶ್ವ ದಾಖಲೆಯನ್ನು ನಿರ್ಮಿಸಿದೆ.
2 / 6
ಸಿಪಿಎಲ್ನ 7ನೇ ಪಂದ್ಯದಲ್ಲಿ ಸೇಂಟ್ ಕಿಟ್ಸ್ ಅ್ಯಂಡ್ ನೆವಿಸ್ ಪೇಟ್ರಿಯಾಟ್ಸ್ ಮತ್ತು ಗಯಾನಾ ಅಮೆಝಾನ್ ವಾರಿಯರ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗಯಾನಾ ಅಮೆಝಾನ್ ವಾರಿಯರ್ಸ್ ತಂಡವು 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 266 ರನ್ ಕಲೆಹಾಕಿತು. ಈ ಇನಿಂಗ್ಸ್ನಲ್ಲಿ ಮೂಡಿಬಂದ ಒಟ್ಟು ಸಿಕ್ಸ್ಗಳ ಸಂಖ್ಯೆ 23.
3 / 6
ಇದಾದ ಬಳಿಕ 267 ರನ್ಗಳ ಗುರಿಯನ್ನು ಬೆನ್ನತ್ತಿದ ಸೇಂಟ್ ಕಿಟ್ಸ್ ಅ್ಯಂಡ್ ನೆವಿಸ್ ಪೇಟ್ರಿಯಾಟ್ಸ್ ತಂಡವು 18 ಓವರ್ಗಳಲ್ಲಿ 226 ರನ್ ಬಾರಿಸಿ ಆಲೌಟ್ ಆಯಿತು. ಈ ಚೇಸಿಂಗ್ ವೇಳೆ ಸಿಡಿದ ಒಟ್ಟು ಸಿಕ್ಸರ್ಗಳ ಸಂಖ್ಯೆ 19.
4 / 6
ಈ ಸಿಕ್ಸರ್ಗಳೊಂದಿಗೆ ಟಿ20 ಕ್ರಿಕೆಟ್ ಪಂದ್ಯವೊಂದರಲ್ಲಿ ಅತ್ಯಧಿಕ ಸಿಕ್ಸ್ಗಳನ್ನು ಬಾರಿಸಿದ ವಿಶ್ವ ದಾಖಲೆಯನ್ನು ಸೇಂಟ್ ಕಿಟ್ಸ್ ಅ್ಯಂಡ್ ನೆವಿಸ್ ಪೇಟ್ರಿಯಾಟ್ಸ್ ಮತ್ತು ಗಯಾನಾ ಅಮೆಝಾನ್ ವಾರಿಯರ್ಸ್ ತಂಡಗಳು ಸರಿಗಟ್ಟಿದೆ. ಅಲ್ಲದೆ ಸಿಪಿಎಲ್ ಪಂದ್ಯವೊಂದರಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ದಾಖಲೆ ನಿರ್ಮಿಸಿದ್ದಾರೆ.
5 / 6
ಇದಕ್ಕೂ ಮುನ್ನ ಇಂತಹದೊಂದು ದಾಖಲೆ ಮೂಡಿಬಂದಿದ್ದು ಐಪಿಎಲ್ನಲ್ಲಿ ಎಂಬುದು ವಿಶೇಷ. ಐಪಿಎಲ್ 2024ರ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವಣ ಪಂದ್ಯದಲ್ಲಿ ಒಟ್ಟು 42 ಸಿಕ್ಸ್ಗಳನ್ನು ಬಾರಿಸಲಾಗಿತ್ತು. ಈ ಮೂಲಕ ಕೆಕೆಆರ್-ಪಂಜಾಬ್ ಕಿಂಗ್ಸ್ ಜೊತೆಗೂಡಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದರು.
6 / 6
ಇದೀಗ ಸೇಂಟ್ ಕಿಟ್ಸ್ ಅ್ಯಂಡ್ ನೆವಿಸ್ ಪೇಟ್ರಿಯಾಟ್ಸ್ ಮತ್ತು ಗಯಾನಾ ಅಮೆಝಾನ್ ವಾರಿಯರ್ಸ್ ತಂಡಗಳು ಒಟ್ಟು 42 ಸಿಕ್ಸ್ಗಳನ್ನು ಸಿಡಿಸಿ ಈ ದಾಖಲೆಯನ್ನು ಸರಿಗಟ್ಟಿದ್ದಾರೆ. ಈ ಮೂಲಕ ಟಿ20 ಪಂದ್ಯವೊಂದರಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ತಂಡಗಳ ವಿಶ್ವ ದಾಖಲೆ ಪಟ್ಟಿಯಲ್ಲಿ ಪಂಜಾಬ್ ಕಿಂಗ್ಸ್-ಕೆಕೆಆರ್ ಜೊತೆ ಅಗ್ರಸ್ಥಾನಗಳನ್ನು ಹಂಚಿಕೊಂಡಿದೆ.
Published On - 2:20 pm, Thu, 5 September 24