AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

100 ವರ್ಷಗಳ ಬಳಿಕ ದಾಖಲೆ ಬರೆದ ಜಿಂಬಾಬ್ವೆ ಬ್ಯಾಟರ್; ಎರ್ವಿನ್ ಅಬ್ಬರಕ್ಕೆ ಕ್ರಿಕೆಟ್ ಜಗತ್ತು ಬೆರಗು

ಜಿಂಬಾಬ್ವೆಯ ಕ್ರೇಗ್ ಎರ್ವಿನ್ ಅಫ್ಘಾನಿಸ್ತಾನ ವಿರುದ್ಧ ಅಜೇಯ ದ್ವಿಶತಕ ಸಿಡಿಸಿ ದಾಖಲೆ ಬರೆದಿದ್ದಾರೆ. 41 ವರ್ಷ 82 ದಿನಗಳ ವಯಸ್ಸಿನಲ್ಲಿ, ಕಳೆದ 100 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ದ್ವಿಶತಕ ಬಾರಿಸಿದ ಅತ್ಯಂತ ಹಿರಿಯ ಆಟಗಾರ ಎನಿಸಿದ್ದಾರೆ. ಎರಿಕ್ ರೋವೆನ್ ಮತ್ತು ಜ್ಯಾಕ್ ಹಾಬ್ಸ್ ನಂತರ ಈ ಸಾಧನೆ ಮಾಡಿದ ಮೂರನೇ ಆಟಗಾರ ಇವರಾಗಿದ್ದು, ತಮ್ಮ ಚೊಚ್ಚಲ ದ್ವಿಶತಕದ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ.

ಪೃಥ್ವಿಶಂಕರ
|

Updated on: Nov 09, 2026 | 9:19 PM

Share
ಜಿಂಬಾಬ್ವೆಯ ಅನುಭವಿ ಬ್ಯಾಟರ್ ಕ್ರೇಗ್ ಎರ್ವಿನ್ ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಕ್ರಿಕೆಟ್ ಅಭಿಮಾನಿಗಳ ಮನಗೆದ್ದಿದ್ದಾರೆ. ಎರಡನೇ ಇನ್ನಿಂಗ್ಸ್‌ನಲ್ಲಿ ಅಜೇಯ ದ್ವಿಶತಕ ಸಿಡಿಸಿದ ಎಡಗೈ ಬ್ಯಾಟರ್, ತಮ್ಮ ಹೆಸರಿಗೆ ಅಪರೂಪದ ದಾಖಲೆಯೊಂದನ್ನು ಸೇರಿಸಿಕೊಂಡಿದ್ದಾರೆ.

1 / 6
ಕಳೆದ 100 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ದ್ವಿಶತಕ ಬಾರಿಸಿದ ಅತ್ಯಂತ ಹಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಎರ್ವಿನ್ ಪಾತ್ರರಾಗಿದ್ದಾರೆ. 41 ವರ್ಷ 82 ದಿನಗಳ ವಯಸ್ಸಿನಲ್ಲಿ ಅವರು ಈ ಸಾಧನೆ ಮಾಡಿದ್ದಾರೆ. ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಇವರಿಗಿಂತ ಹೆಚ್ಚಿನ ವಯಸ್ಸಿನಲ್ಲಿ ದ್ವಿಶತಕ ಬಾರಿಸಿರುವುದು ಕೇವಲ ಇಬ್ಬರು ಆಟಗಾರರು ಮಾತ್ರ.

2 / 6
ಟೆಸ್ಟ್ ಕ್ರಿಕೆಟ್‌ನಲ್ಲಿ ಹಿರಿಯ ವಯಸ್ಸಿನಲ್ಲಿ ದ್ವಿಶತಕ ಬಾರಿಸಿದ ದಾಖಲೆಯನ್ನು ದಕ್ಷಿಣ ಆಫ್ರಿಕಾದ ಎರಿಕ್ ರೋವೆನ್ ಹೊಂದಿದ್ದಾರೆ. 1951ರ ಜುಲೈ 26ರಂದು ಲೀಡ್ಸ್‌ನಲ್ಲಿ ಇಂಗ್ಲೆಂಡ್ ವಿರುದ್ಧ ದ್ವಿಶತಕ ಸಿಡಿಸಿದಾಗ ಅವರಿಗೆ 42 ವರ್ಷ 6 ದಿನ ವಯಸ್ಸಾಗಿತ್ತು.

3 / 6
ಇದಕ್ಕೂ ಮೊದಲು ಈ ದಾಖಲೆ ಇಂಗ್ಲೆಂಡ್‌ನ ಜ್ಯಾಕ್ ಹಾಬ್ಸ್ ಹೆಸರಿನಲ್ಲಿತ್ತು. ಅವರು 1924ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 41 ವರ್ಷ 195 ದಿನಗಳ ವಯಸ್ಸಿನಲ್ಲಿ ದ್ವಿಶತಕ ಬಾರಿಸಿದ್ದರು. ಇದೀಗ ಕ್ರೇಗ್ ಎರ್ವಿನ್ ಕೂಡ ಈ ವಿಶೇಷ ಸಾಧಕರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

4 / 6
ಶಾರ್ಜಾದಲ್ಲಿ ನಡೆದ ಟೆಸ್ಟ್ ಪಂದ್ಯದ ಐದನೇ ದಿನ ಕ್ರೇಗ್ ಎರ್ವಿನ್ ತಮ್ಮ ಬ್ಯಾಟಿಂಗ್ ಸಾಮರ್ಥ್ಯವನ್ನು ಸಂಪೂರ್ಣವಾಗಿ ಪ್ರದರ್ಶಿಸಿದರು. ಆರಂಭದಿಂದಲೇ ಆಕ್ರಮಣಕಾರಿ ಆಟಕ್ಕೆ ಒತ್ತು ನೀಡಿದ ಅವರು, ಅಫ್ಘಾನಿಸ್ತಾನದ ಬೌಲರ್‌ಗಳನ್ನು ಬೆಂಡೆತ್ತಿದರು.

5 / 6
ಎಡಗೈ ಬ್ಯಾಟರ್ ಕೇವಲ 87 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಬಳಿಕ 161 ಎಸೆತಗಳಲ್ಲಿ ಶತಕದ ಗಡಿ ದಾಟಿದರು. ಅಲ್ಲಿಗೆ ನಿಲ್ಲದ ಎರ್ವಿನ್, 215 ಎಸೆತಗಳಲ್ಲಿ 150 ರನ್ ಗಳಿಸಿದರು. ನಂತರ 275 ಎಸೆತಗಳನ್ನು ಎದುರಿಸಿ ತಮ್ಮ ಚೊಚ್ಚಲ ಟೆಸ್ಟ್ ದ್ವಿಶತಕವನ್ನು ಪೂರ್ಣಗೊಳಿಸಿದರು.

6 / 6
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಮರಿ ನೀರಾನೆಗೆ 'ಡಾ. ಸಮೀಕ್ಷಾ ರೆಡ್ಡಿ' ಹೆಸರು ನಾಮಕರಣ

ಬಿಜೆಪಿ ಡಿಕ್ಷನರಿ ಓದಲಿ; ಖರ್ಗೆಯ ದೀಪಾವಳಿ ಶುಭಾಶಯಕ್ಕೆ ಕಾಂಗ್ರೆಸ್ ಸಮರ್ಥನೆ

ಚೌಡೇಶ್ವರಿ ದೇವಾಲಯಕ್ಕೆ ವಿಜಯಲಕ್ಷ್ಮಿ ಭೇಟಿ, ದರ್ಶನ್​​ಗಾಗಿ ವಿಶೇಷ ಪೂಜೆ

ಸಿದ್ದರಾಮಯ್ಯರೊಂದಿಗೆ ಡಿಕೆಶಿ ಚರ್ಚೆ: ಕೆಲ ವಿಚಾರ ತಿಳಿಸಿದ್ದೇನೆ; ಸಿಎಂ

ಇಡೀ ರಾಜ್ಯದ ಮಹಿಳೆಯರಿಗಿದೆ 'ಉಚಿತ ಬಸ್', ನಮಗೇಕಿಲ್ಲ?

ರಸ್ತೆ ಗುಂಡಿಗಳ ಕಾಟ: ಖುದ್ದು ಗುಂಡಿ ಮುಚ್ಚಿದ ಸಂಚಾರಿ ಪೊಲೀಸರು

ಸ್ಟಿಂಗ್ ಆಪರೇಷನ್: CCB ವಿಚಾರಣೆಗೆ ಬಂದ ಕೃಪಾ ಆಳ್ವಾ; ವಕೀಲೆ ಹೇಳಿದ್ದೇನು?

ರಾಜ್ಯ ಸರ್ಕಾರ ಮತ್ತು ರಾಜಮನೆತನದ ನಡುವಿನ ಸಂಘರ್ಷಕ್ಕೆ ಯದುವೀರ್ ರಿಯಾಕ್ಷನ್

ಸ್ಪರ್ಧಿಗಳಿಗೆ ಹೊರಗಿನ ವಿಷಯ ರಿವೀಲ್ ಮಾಡಿದ ಮಂಜು; ಇಡೀ ಮನೆ ಅಲ್ಲೋಲ ಕಲ್ಲೋಲ

ಮಂಡ್ಯದ ಚಿನಕುರಳಿ ಗ್ರಾಮದಲ್ಲಿ ಭೀಕರ ಅಗ್ನಿ ಅವಘಡ; ಭಸ್ಮವಾದ ಮೂರು ಅಂಗಡಿಗಳು