IND vs AUS: ಮೂರನೇ ಟೆಸ್ಟ್​​ಗೆ ಈತನನ್ನು ತಂಡದಿಂದ ಕೈಬಿಡಿ ಎಂದ ಪೂಜಾರ

|

Updated on: Dec 10, 2024 | 4:34 PM

IND vs AUS: ಅಡಿಲೇಡ್‌ನಲ್ಲಿ ಭಾರತ ತಂಡ 10 ವಿಕೆಟ್‌ಗಳಿಂದ ಸೋತ ನಂತರ, ಗಾಬಾ ಟೆಸ್ಟ್‌ಗೆ ಆಡುವ 11ರಲ್ಲಿ ಬದಲಾವಣೆ ಅಗತ್ಯವಿದೆ ಎಂದು ಚೇತೇಶ್ವರ ಪೂಜಾರ ಅಭಿಪ್ರಾಯಪಟ್ಟಿದ್ದಾರೆ. ಅಶ್ವಿನ್ ಬದಲಿಗೆ ವಾಷಿಂಗ್ಟನ್ ಸುಂದರ್ ಅವರಿಗೆ ಅವಕಾಶ ನೀಡುವ ಬಗ್ಗೆ ಅವರು ಸೂಚಿಸಿದ್ದಾರೆ. ಆದರೆ ಹರ್ಷಿತ್ ರಾಣಾ ಅವರನ್ನು ಕೈಬಿಡುವುದು ಸರಿಯಲ್ಲ ಎಂದು ಪೂಜಾರ ಅಭಿಪ್ರಾಯಪಟ್ಟಿದ್ದಾರೆ.

1 / 6
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಸರಣಿಯ ಮೂರನೇ ಟೆಸ್ಟ್ ಪಂದ್ಯವು ಗಾಬಾ ಮೈದಾನದಲ್ಲಿ ನಡೆಯಲಿದೆ. ಅಡಿಲೇಡ್‌ನಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಮುಖಭಂಗ ಎದುರಿಸಿದ್ದ  ಭಾರತ ತಂಡ 10 ವಿಕೆಟ್‌ಗಳ ಹೀನಾಯ ಸೋಲು ಕಂಡಿತ್ತು. ಹೀಗಾಗಿ ಸರಣಿ 1-1 ರಿಂದ ಸಮಬಲಗೊಂಡಿದೆ.

2 / 6
ಇದೀಗ ಗಾಬಾದಲ್ಲಿ ನಡೆಯಲಿರುವ ಮೂರನೇ ಟೆಸ್ಟ್ ಪಂದ್ಯ ಉಭಯ ತಂಡಗಳಿಗೂ ಅತ್ಯಂತ ಮಹತ್ವದ್ದಾಗಿದ್ದು, ಈ ಪಂದ್ಯವನ್ನು ಗೆಲ್ಲುವ ತಂಡ ಸರಣಿಯಲ್ಲಿ ಮುನ್ನಡೆ ಕಾಯ್ದುಕೊಳ್ಳಲಿದೆ. ಈ ನಡುವೆ ಅಡಿಲೇಡ್‌ ಟೆಸ್ಟ್ ಸೋತ ಬಳಿಕ ಟೀಂ ಇಂಡಿಯಾದ ಆಡುವ 11ರಲ್ಲಿ ಬದಲಾವಣೆಗೆ ಆಗ್ರಹ ಕೇಳಿಬಂದಿದೆ. ಇದೇ ವೇಳೆ ಮೂರನೇ ಟೆಸ್ಟ್‌ಗೆ ಭಾರತ ತಂಡದಲ್ಲಿ ಒಂದು ಬದಲಾವಣೆ ಮಾಡಲು ಚೇತೇಶ್ವರ ಪೂಜಾರ ಸಲಹೆ ನೀಡಿದ್ದಾರೆ.

3 / 6
ಸ್ಟಾರ್ ಸ್ಪೋರ್ಟ್ಸ್ ಜೊತೆ ಮಾತನಾಡಿದ ಪೂಜಾರ ಪ್ಲೇಯಿಂಗ್ ಇಲೆವೆನ್ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಈ ವೇಳೆ ಅವರು, ನಮ್ಮ ಬ್ಯಾಟಿಂಗ್ ಉತ್ತಮವಾಗಿಲ್ಲದ ಕಾರಣ ಮೂರನೇ ಟೆಸ್ಟ್‌ನ ಆಡುವ ಹನ್ನೊಂದರ ಬಳಗದಲ್ಲಿ ನಾವು ಬದಲಾವಣೆಯನ್ನು ನೋಡಬಹುದು ಎಂದು ನಾನು ಭಾವಿಸುತ್ತೇನೆ. ಆ ಪ್ರಕಾರ ಆರ್ ಅಶ್ವಿನ್ ಬದಲಿಗೆ ವಾಷಿಂಗ್ಟನ್ ಸುಂದರ್‌ಗೆ ಅವಕಾಶ ಸಿಗಬಹುದು ಎಂದಿದ್ದಾರೆ.

4 / 6
ಇದರ ಜೊತೆಗೆ ಹರ್ಷಿತ್ ರಾಣಾ ಬದಲಿಗೆ ಬೇರೆ ಯಾರಾದರೂ ತಂಡಕ್ಕೆ ಬರಬೇಕಾ? ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪೂಜಾರ, ‘ನನ್ನ ಪ್ರಕಾರ, ಹರ್ಷಿತ್ ರಾಣಾ ಈಗಷ್ಟೇ ಟೆಸ್ಟ್​ಗೆ ಪದಾರ್ಪಣೆ ಮಾಡಿದ್ದಾರೆ. ಹೀಗಾಗಿ ನಾವು ಅವರಿಗೆ ಬೆಂಬಲ ನೀಡಬೇಕು. ಅಲ್ಲದೆ ಅವರು ಮೊದಲ ಟೆಸ್ಟ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. ಒಂದು ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಿದ ಮಾತ್ರಕ್ಕೆ ಅವರನ್ನು ತಂಡದಿಂದ ಕೈಬಿಡಲು ಸಾಧ್ಯವಿಲ್ಲ ಎಂದಿದ್ದಾರೆ.

5 / 6
ಭಾರತ- ಆಸ್ಟ್ರೇಲಿಯಾ ನಡುವೆ ನಡೆದ ಪರ್ತ್ ಟೆಸ್ಟ್‌ನಲ್ಲಿ ಅಶ್ವಿನ್‌ಗೆ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಕ್ಕಿರಲಿಲ್ಲ. ಆದರೆಅಡಿಲೇಡ್‌ನಲ್ಲಿ ಆಡುವ ಅವಕಾಶ ಪಡೆದಿದ್ದ ಅಶ್ವಿನ್‌ಗೆ ನಿರೀಕ್ಷೆಗೆ ತಕ್ಕಂತ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಮೊದಲ ಇನ್ನಿಂಗ್ಸ್‌ನಲ್ಲಿ ಅಶ್ವಿನ್ 18 ಓವರ್‌ಗಳನ್ನು ಬೌಲ್ ಮಾಡಿದರು. ಇದರಲ್ಲಿ ಅವರು 53 ರನ್ ನೀಡಿ ಕೇವಲ ಒಂದು ವಿಕೆಟ್ ಮಾತ್ರ ಪಡೆದರು.

6 / 6
ಬ್ಯಾಟಿಂಗ್​ನಲ್ಲೂ ಅಶ್ವಿನ್ ವಿಶೇಷತೆ ತೋರಲು ಸಾಧ್ಯವಾಗಲಿಲ್ಲ. ಮೊದಲ ಇನ್ನಿಂಗ್ಸ್‌ನಲ್ಲಿ 22 ರನ್ ಗಳಿಸಿದ ಅಶ್ವಿನ್ ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ 7 ರನ್ ಗಳಿಸಿದ್ದರು. ಇತ್ತ ಪರ್ತ್‌ನಲ್ಲಿ ಆಡುವ ಅವಕಾಶ ಪಡೆದಿದ್ದ ವಾಷಿಂಗ್ಟನ್ ಸುಂದರ್ ಮೂರು ವಿಕೆಟ್‌ಗಳನ್ನು ಪಡೆದಿದಲ್ಲದೆ ಎರಡೂ ಇನ್ನಿಂಗ್ಸ್‌ಗಳಲ್ಲಿ ಒಟ್ಟು 33 ರನ್ ಗಳಿಸಿದ್ದರು.