ಮಾಧ್ಯಮ ವರದಿಗಳ ಪ್ರಕಾರ, ಮಯಾಂಕ್ ಯಾದವ್ ಇನ್ನೂ ಗಾಯದಿಂದ ಚೇತರಿಸಿಕೊಂಡಿಲ್ಲ. ಇದರಿಂದಾಗಿ ಅವರು ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಟಿ20 ಸರಣಿಗೂ ಟೀಂ ಇಂಡಿಯಾದಲ್ಲಿ ಆಯ್ಕೆಯಾಗುವುದಿಲ್ಲ. ಬಿಸಿಸಿಐ ಮೂಲವನ್ನು ಉಲ್ಲೇಖಿಸಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದ್ದು, ಮಯಾಂಕ್ ಬೆನ್ನುನೋವಿನಿಂದ ಬಳಲುತ್ತಿದ್ದು, ಇಂಗ್ಲೆಂಡ್ ಸರಣಿಗೆ ಫಿಟ್ ಆಗುವ ಸಾಧ್ಯತೆಯಿಲ್ಲ. ಇದಲ್ಲದೆ ಜನವರಿ 23 ರಿಂದ ಆರಂಭವಾಗಲಿರುವ 2ನೇ ಹಂತದ ರಣಜಿ ಟ್ರೋಫಿಯ ಮೊದಲ ಪಂದ್ಯಕ್ಕೂ ಅವರನ್ನು ಆಯ್ಕೆ ಮಾಡಲಾಗಿಲ್ಲ.