ಟೀಂ ಇಂಡಿಯಾ ಆಟಗಾರನಿಗೆ ಮೂಳೆ ಮುರಿತ; ದೀರ್ಘಕಾಲ ಕ್ರಿಕೆಟ್‌ನಿಂದ ದೂರ

Updated on: Jan 02, 2026 | 6:31 PM

Sai Sudharsan Injury Update: ಯುವ ಕ್ರಿಕೆಟಿಗ ಸಾಯಿ ಸುದರ್ಶನ್ ಪಕ್ಕೆಲುಬು ಗಾಯಕ್ಕೆ ಒಳಗಾಗಿದ್ದು, ಮುಂದಿನ 6 ವಾರಗಳ ಕಾಲ ಕ್ರಿಕೆಟ್‌ನಿಂದ ದೂರ ಉಳಿಯಲಿದ್ದಾರೆ. ವಿಜಯ್ ಹಜಾರೆ ಟ್ರೋಫಿಯಲ್ಲಿ ತಮಿಳುನಾಡು ತಂಡಕ್ಕೆ ಇದು ದೊಡ್ಡ ಹಿನ್ನಡೆಯಾಗಿದೆ. ನ್ಯೂಜಿಲೆಂಡ್ ಸರಣಿ ಆಯ್ಕೆಗೆ ಪರಿಣಾಮವಿಲ್ಲದಿದ್ದರೂ, ಐಪಿಎಲ್ 2026 ಆರಂಭಕ್ಕೂ ಮುನ್ನ ಅವರ ಚೇತರಿಕೆ ನಿರ್ಣಾಯಕವಾಗಿದೆ.

1 / 5
ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾವನ್ನು ಇನ್ನೇರಡು ದಿನಗಳ ಒಳಗೆ ಪ್ರಕಟಿಸುವ ಸಾಧ್ಯತೆಗಳಿವೆ. ಆದರೆ ಅದಕ್ಕೂ ಮುನ್ನ ತಂಡದ ಯುವ ಆಟಗಾರ ಸಾಯಿ ಸುದರ್ಶನ್ ಗಂಭೀರ ಗಾಯಕ್ಕೆ ತುತ್ತಾಗಿದ್ದು, ಕೆಲವು ವಾರಗಳ ವರೆಗೆ ಕ್ರಿಕೆಟ್​ನಿಂದ ದೂರ ಉಳಿಯಲಿದ್ದಾರೆ ಎಂದು ವರದಿಯಾಗಿದೆ.

2 / 5
ಆದಾಗ್ಯೂ ಸಾಯಿ ಸುದರ್ಶನ್ ಗಾಯಗೊಂಡಿರುವುದು ಟೀಂ ಇಂಡಿಯಾ ಆಯ್ಕೆಗೆ ಯಾವುದೇ ಸಮಸ್ಯೆಯನ್ನುಂಟು ಮಾಡುವುದಿಲ್ಲ. ಏಕೆಂದರೆ ಏಕದಿನ ಸರಣಿಗೆ ಅವರನ್ನು ಆಯ್ಕೆಗೆ ಪರಿಗಣಿಸುವ ಸಾಧ್ಯತೆಗಳಿರಲಿಲ್ಲ. ಆದರೆ ಸಾಯಿ ಸುದರ್ಶನ್ ಗಾಯಗೊಂಡಿರುವುದರಿಂದ ವಿಜಯ್ ಹಜಾರೆ ಟ್ರೋಫಿಯಲ್ಲಿ ಆಡುತ್ತಿರುವ ತಮಿಳುನಾಡು ತಂಡಕ್ಕೆ ದೊಡ್ಡ ಆಘಾತ ನೀಡಿದೆ.

3 / 5
ವಾಸ್ತವವಾಗಿ ಕೆಲವು ದಿನಗಳ ಹಿಂದೆ ಅಭ್ಯಾಸದ ಸಮಯದಲ್ಲಿ ಸಾಯಿ ಸುದರ್ಶನ್​ ಅವರ ಪಕ್ಕೆಲುಬುಗಳಿಗೆ ಚೆಂಡು ತಗುಲಿತ್ತು. ಇದರ ನಡುವೆ ವಿಜಯ್ ಹಜಾರೆ ಟ್ರೋಫಿಯಲ್ಲಿ ಆಡುತ್ತಿದ್ದ ಸುದರ್ಶನ್ ಮಧ್ಯಪ್ರದೇಶ ವಿರುದ್ಧದ ಪಂದ್ಯದಲ್ಲಿ ಅರ್ಧಶತಕದ ಇನ್ನಿಂಗ್ಸ್ ಕೂಡ ಆಡಿದ್ದರು. ಆದರೆ ಅದೇ ಪಂದ್ಯದಲ್ಲಿ ರನ್​ಗಾಗಿ ಓಡುವ ವೇಳೆ ಸುದರ್ಶನ್​ಗೆ ಪಕ್ಕೆಲುಬು ನೋವು ಮತ್ತಷ್ಟು ಹೆಚ್ಚಾಗಿತ್ತು.

4 / 5
ನೋವಿನ ನಡುವೆಯೂ ಆಟ ಮುಂದುವರೆಸಿದ್ದ ಸುದರ್ಶನ್ ಅವರನ್ನು ಪಂದ್ಯ ಮುಗಿದ ಬಳಿಕ ಬೆಂಗಳೂರಿನಲ್ಲಿರುವ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್‌ಗೆ ದಾಖಲಿಸಲಾಗಿತ್ತು. ಇದೀಗ ಸುದರ್ಶನ್ ವೈದ್ಯಕೀಯ ತಂಡದ ಮೇಲ್ವಿಚಾರಣೆಯಲಿದ್ದಾರೆ. ವರದಿಯ ಪ್ರಕಾರ, ಸುದರ್ಶನ್ ಸುಮಾರು 6 ವಾರಗಳ ಕಾಲ ಕ್ರಿಕೆಟ್​ನಿಂದ ದೂರ ಉಳಿಯಲಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

5 / 5
ಟೀಂ ಇಂಡಿಯಾ ಪರ ಟೆಸ್ಟ್ ಕ್ರಿಕೆಟ್​ಗೆ ಪದಾರ್ಪಣೆ ಮಾಡಿರುವ ಸುದರ್ಶನ್ ಚೇತರಿಕೆಗೆ ಸಾಕಷ್ಟು ಸಮಯಾವಕಾಶ ಸಿಗಲಿದೆ. ಏಕೆಂದರೆ ಟೀಂ ಇಂಡಿಯಾ ಪ್ರಸ್ತುತ ಯಾವುದೇ ಟೆಸ್ಟ್ ಪಂದ್ಯಗಳನ್ನು ಆಡುತ್ತಿಲ್ಲ. ಆದರೆ 2026 ರ ಐಪಿಎಲ್ ಆರಂಭಕ್ಕೂ ಮುನ್ನ ಸುದರ್ಶನ್ ಗುಣಮುಖರಾಗುತ್ತಾರಾ ಎಂಬುದನ್ನು ಕಾದುನೋಡಬೇಕಿದೆ. ಈ ಪಂದ್ಯಾವಳಿ ಮಾರ್ಚ್ ಅಂತ್ಯದಲ್ಲಿ ಪ್ರಾರಂಭವಾಗಲಿದ್ದು, ಸುದರ್ಶನ್ ಗುಜರಾತ್ ಟೈಟಾನ್ಸ್‌ ಪರ ಕಣಕ್ಕಿಳಿಯಲಿದ್ದಾರೆ.