ಹ್ಯಾಟ್ರಿಕ್ ಸೇರಿದಂತೆ 10 ವಿಕೆಟ್ ಉರುಳಿಸಿದ ಸಾಯಿ ಕಿಶೋರ್..!

Updated on: Oct 20, 2026 | 4:47 PM

ರಣಜಿ ಟ್ರೋಫಿಯಲ್ಲಿ ತಮಿಳುನಾಡಿನ ಸಾಯಿ ಕಿಶೋರ್ ಜಾರ್ಖಂಡ್ ವಿರುದ್ಧ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ್ದಾರೆ. ಎರಡನೇ ಇನ್ನಿಂಗ್ಸ್‌ನಲ್ಲಿ ಹ್ಯಾಟ್ರಿಕ್ ಸೇರಿದಂತೆ ಒಟ್ಟು 10 ವಿಕೆಟ್‌ಗಳನ್ನು ಕಬಳಿಸಿ ತಂಡಕ್ಕೆ ಇನ್ನಿಂಗ್ಸ್ ಗೆಲುವು ತಂದುಕೊಟ್ಟರು. ದೇಶೀಯ ಕ್ರಿಕೆಟ್‌ನಲ್ಲಿ ನಿರಂತರವಾಗಿ ಉತ್ತಮ ಪ್ರದರ್ಶನ ನೀಡುತ್ತಿರುವ ಸಾಯಿ, ತಮ್ಮ ಈ ಸಾಧನೆಯ ಮೂಲಕ ಮತ್ತೆ ಭಾರತ ತಂಡಕ್ಕೆ ಆಯ್ಕೆಯಾಗುವ ನಿರೀಕ್ಷೆಯಲ್ಲಿದ್ದಾರೆ.

1 / 5
ಕಳೆದ ಮೂರು ವರ್ಷಗಳಿಂದ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯದಿದ್ದರೂ, ದೇಶೀಯ ಕ್ರಿಕೆಟ್‌ನಲ್ಲಿ ನಿರಂತರವಾಗಿ ಉತ್ತಮ ಪ್ರದರ್ಶನ ನೀಡುತ್ತಿರುವ ಆಟಗಾರ ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ತಮಿಳುನಾಡಿನ ಎಡಗೈ ಸ್ಪಿನ್ನರ್ ಸಾಯಿ ಕಿಶೋರ್ ರಣಜಿ ಟ್ರೋಫಿಯಲ್ಲಿ ಜಾರ್ಖಂಡ್ ವಿರುದ್ಧ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿ ಹ್ಯಾಟ್ರಿಕ್ ವಿಕೆಟ್ ಪಡೆದಿದ್ದಾರೆ. ಈ ಪಂದ್ಯದಲ್ಲಿ ಒಟ್ಟು 10 ವಿಕೆಟ್ ಕಬಳಿಸಿದ ಅವರು, ತಮಿಳುನಾಡು ತಂಡಕ್ಕೆ ಇನ್ನಿಂಗ್ಸ್ ಹಾಗೂ 66 ರನ್‌ಗಳ ಭರ್ಜರಿ ಗೆಲುವು ತಂದುಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ(PC-PTI).

2 / 5

ಚೆನ್ನೈನ ಎಂ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಸಾಯಿ ಕಿಶೋರ್ ಎದುರಾಳಿ ತಂಡದ ಬ್ಯಾಟರ್‌ಗಳಿಗೆ ರನ್ ಗಳಿಸಲು ಅವಕಾಶ ನೀಡದೆ ಕಾಡಿದರು. ಎರಡನೇ ಇನ್ನಿಂಗ್ಸ್‌ನಲ್ಲಿ ಹ್ಯಾಟ್ರಿಕ್ ಸೇರಿದಂತೆ ಆರು ವಿಕೆಟ್‌ಗಳನ್ನು ಕಬಳಿಸಿ ಎದುರಾಳಿ ತಂಡದ ಬ್ಯಾಟಿಂಗ್ ಬೆನ್ನೆಲುಬನ್ನೇ ಮುರಿದರು(PC-PTI).

3 / 5

ಎರಡನೇ ಇನ್ನಿಂಗ್ಸ್‌ನ 43ನೇ ಓವರ್‌ನಲ್ಲಿ ಸಾಯಿ ಕಿಶೋರ್ ಹ್ಯಾಟ್ರಿಕ್ ಸಾಧನೆ ಮಾಡಿದರು. ಮೊದಲು ಲಕ್ಷ್ಯ ರಾಯ್‌ಚಂದಾನಿ ಅವರನ್ನು 19 ರನ್‌ಗಳಿಗೆ ಬೌಲ್ಡ್ ಮಾಡಿದರು. ಬಳಿಕ ಸೌರಭ್ ರಾವತ್ ಮತ್ತು ಆದಿತ್ಯ ರಾವತ್ ಅವರನ್ನು ಸತತ ಎಸೆತಗಳಲ್ಲಿ ಔಟ್ ಮಾಡುವ ಮೂಲಕ ಹ್ಯಾಟ್ರಿಕ್ ಪೂರ್ಣಗೊಳಿಸಿದರು(PC-PTI).

4 / 5

ಮೊದಲ ಇನ್ನಿಂಗ್ಸ್‌ನಲ್ಲೂ ನಾಲ್ಕು ವಿಕೆಟ್‌ಗಳನ್ನು ಕಬಳಿಸಿದ್ದ ಸಾಯಿ ಕಿಶೋರ್, ಪಂದ್ಯದಲ್ಲಿ ಒಟ್ಟು 10 ವಿಕೆಟ್‌ಗಳನ್ನು ತಮ್ಮದಾಗಿಸಿಕೊಂಡರು. ಅವರ ಈ ಅಮೋಘ ಪ್ರದರ್ಶನದಿಂದ ತಮಿಳುನಾಡು ತಂಡ ಇನ್ನಿಂಗ್ಸ್ ಹಾಗೂ 66 ರನ್‌ಗಳ ಜಯ ಸಾಧಿಸಿತು(PC-PTI).

5 / 5

ಸಾಯಿ ಕಿಶೋರ್ ಈಗಾಗಲೇ ಟೀಮ್ ಇಂಡಿಯಾ ಪರ ಮೂರು ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು, ನಾಲ್ಕು ವಿಕೆಟ್‌ಗಳನ್ನು ಪಡೆದಿದ್ದಾರೆ. 2023ರ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ಅವರು, ಆ ಬಳಿಕ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆದಿಲ್ಲ. ಇದೀಗ ದೇಶೀಯ ಕ್ರಿಕೆಟ್‌ನಲ್ಲಿ ತೋರಿರುವ ಅದ್ಭುತ ಪ್ರದರ್ಶನದ ಮೂಲಕ ಮತ್ತೆ ಆಯ್ಕೆದಾರರ ಗಮನ ಸೆಳೆಯುವ ನಿರೀಕ್ಷೆಯಿದೆ(PC-PTI).

ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Loading...
Unable to load recommendations.
Follow Us