AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೈಹಿಕ ಕಿರುಕುಳ ಆರೋಪ; ಅಭಿಷೇಕ್ ಪೊರೆಲ್ ಬಂಧನಕ್ಕೆ ಹೈಕೋರ್ಟ್ ಆದೇಶ

Cricketer Abhishek Porel Faces Arrest Warrant: ಯುವ ಕ್ರಿಕೆಟಿಗ ಅಭಿಷೇಕ್ ಪೊರೆಲ್ ಲೈಂಗಿಕ ದೌರ್ಜನ್ಯ, ವಿವಾಹದ ಸುಳ್ಳು ಭರವಸೆ ಹಾಗೂ ಬೆದರಿಕೆ ಆರೋಪದಡಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೋಲ್ಕತ್ತಾ ಹೈಕೋರ್ಟ್, ಅವರ ಬಂಧನಕ್ಕೆ ಆದೇಶಿಸಿದೆ. ಪ್ರಕರಣದ ಗಂಭೀರತೆ ಪರಿಗಣಿಸಿ, ಪೊಲೀಸರಿಗೆ ತ್ವರಿತ ತನಿಖೆಗೆ ಮತ್ತು ಎಲೆಕ್ಟ್ರಾನಿಕ್ ಸಾಧನಗಳನ್ನು ವಶಪಡಿಸಿಕೊಳ್ಳಲು ಸೂಚಿಸಿದೆ. ಈ ಪ್ರಕರಣ ಅವರ ಕ್ರಿಕೆಟ್ ವೃತ್ತಿಜೀವನಕ್ಕೆ ದೊಡ್ಡ ಹೊಡೆತ ನೀಡಿದೆ.

ಪೃಥ್ವಿಶಂಕರ
|

Updated on: Jul 19, 2026 | 6:45 PM

Share
ಲೈಂಗಿಕ ದೌರ್ಜನ್ಯ ಹಾಗೂ ಬೆದರಿಕೆ ಆರೋಪದಡಿಯಲ್ಲಿ ಭಾರತದ ಯುವ ಕ್ರಿಕೆಟಿಗ ಅಭಿಷೇಕ್ ಪೊರೆಲ್ ಅವರನ್ನು ಬಂಧಿಸುವಂತೆ ಕೋಲ್ಕತ್ತಾ ಹೈಕೋರ್ಟ್ ಪೊಲೀಸರಿಗೆ ಆದೇಶ ನೀಡಿದೆ. ದೇಶೀಯ ಕ್ರಿಕೆಟ್‌ನಲ್ಲಿ ಬಂಗಾಳ ಮತ್ತು ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ದೆಹಲಿ ಕ್ಯಾಪಿಟಲ್ಸ್ ಪರ ಆಡುವ ಯುವ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಅಭಿಷೇಕ್ ಪೊರೆಲ್ ಇದೀಗ ಜೈಲು ಸೇರಬೇಕಾದ ಸ್ಥಿತಿ ಎದುರಾಗಿದೆ(PC-PTI).

1 / 6
ಕಳೆದ ತಿಂಗಳಷ್ಟೇ, ಮಹಿಳೆಯೊಬ್ಬರು, ಅಭಿಷೇಕ್ ಪೊರೆಲ್ ಅವರ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದು, ಮದುವೆಯ ಸುಳ್ಳು ಭರವಸೆ ನೀಡಿ ಅಭಿಷೇಕ್ ತನ್ನೊಂದಿಗೆ ದೈಹಿಕ ಸಂಬಂಧ ಬೆಳೆಸಿದ್ದರು. ಇದೀಗ ಮದುವೆಯಾಗುವಂತೆ ಕೇಳಲು ಹೋದರೆ ಅಭಿಷೇಕ್ ನನ್ನ ಮೇಲೆ ಹಲ್ಲೆ ಮಾಡಿದ್ದು, ಬೆದರಿಕೆಯನ್ನು ಹಾಕಿದ್ದಾರೆ ಎಂಬ ಗಂಭೀರ ಆರೋಪಗಳನ್ನು ಹೊರಿಸಿದ್ದಾರೆ(PC-PTI).

2 / 6
ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಮೋಗ್ರಾ ಪೊಲೀಸ್ ಠಾಣೆಯಲ್ಲಿ ಅಭಿಷೇಕ್ ಪೊರೆಲ್ ವಿರುದ್ಧ ಅಧಿಕೃತವಾಗಿ ಎಫ್‌ಐಆರ್ ದಾಖಲಿಸಲಾಗಿದೆ. ಈ ದೂರಿನಲ್ಲಿ ಅವರ ವಿರುದ್ಧ ಗಂಭೀರ ಆರೋಪಗಳನ್ನು ಹೊರಿಸಲಾಗಿದೆ. ವಿಷಯದ ಗಂಭೀರತೆಯನ್ನು ಪರಿಗಣಿಸಿ, ಕೋಲ್ಕತ್ತಾ ಹೈಕೋರ್ಟ್ ಪ್ರಕರಣವನ್ನು ತ್ವರಿತಗೊಳಿಸಲು ಮತ್ತು ಆರೋಪಿ ಆಟಗಾರನನ್ನು ಸಾಧ್ಯವಾದಷ್ಟು ಬೇಗ ವಶಕ್ಕೆ ತೆಗೆದುಕೊಳ್ಳುವಂತೆ ಪೊಲೀಸರಿಗೆ ಕಟ್ಟುನಿಟ್ಟಿನ ಆದೇಶಗಳನ್ನು ನೀಡಿದೆ(PC-PTI).

3 / 6
ವಿಚಾರಣೆಯ ಸಮಯದಲ್ಲಿ, ನ್ಯಾಯಾಲಯವು ಅವರನ್ನು ಬಂಧಿಸಲು ಆದೇಶಿಸಿದ್ದಲ್ಲದೆ, ಅಭಿಷೇಕ್ ಪೊರೆಲ್ ಅವರ ಎಲ್ಲಾ ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳು ಮತ್ತು ಸಾಧನಗಳನ್ನು ತಕ್ಷಣವೇ ವಶಪಡಿಸಿಕೊಳ್ಳುವಂತೆ ಪೊಲೀಸರಿಗೆ ನಿರ್ದೇಶನ ನೀಡಿದೆ. ಪ್ರಕರಣದ ಸೂಕ್ಷ್ಮತೆಯನ್ನು ಪರಿಗಣಿಸಿ, ನ್ಯಾಯಾಲಯವು ತನಿಖಾ ಅಧಿಕಾರಿಗಳಿಗೆ ತ್ವರಿತವಾಗಿ ಕಾರ್ಯನಿರ್ವಹಿಸಲು ನಿರ್ದೇಶಿಸಿದೆ(PC-PTI).

4 / 6
ವರದಿಗಳ ಪ್ರಕಾರ, ಈ ಹೈ ಪ್ರೊಫೈಲ್ ಪ್ರಕರಣದ ಮುಂದಿನ ನ್ಯಾಯಾಲಯದ ವಿಚಾರಣೆಯನ್ನು ಈಗ ಆಗಸ್ಟ್ 11 ರಂದು ನಿಗದಿಪಡಿಸಲಾಗಿದೆ, ಅಲ್ಲಿ ಪೊಲೀಸರು ತಮ್ಮ ತನಿಖೆ ಮತ್ತು ಇಲ್ಲಿಯವರೆಗೆ ಅಭಿಷೇಕ್ ವಿರುದ್ಧ ತೆಗೆದುಕೊಂಡ ಕ್ರಮಗಳ ಬಗ್ಗೆ ವಿವರಣೆ ನೀಡಲಿದ್ದಾರೆ. ಈ ಗಂಭೀರ ಘಟನೆಯು ಅಭಿಷೇಕ್ ಪೊರೆಲ್ ಅವರ ಕ್ರಿಕೆಟ್ ವೃತ್ತಿಜೀವನವನ್ನು ಸಂಕಷ್ಟಕ್ಕೆ ತಳ್ಳಿದೆ(PC-PTI).

5 / 6
23 ವರ್ಷದ ಅಭಿಷೇಕ್ ಪೊರೆಲ್ ತಮ್ಮ ವೃತ್ತಿಜೀವನದಲ್ಲಿ 32 ಪ್ರಥಮ ದರ್ಜೆ ಮತ್ತು 23 ಲಿಸ್ಟ್ ಎ ಪಂದ್ಯಗಳನ್ನು ಆಡಿದ್ದಾರೆ. ಅವರು 2023 ರಿಂದ ಐಪಿಎಲ್‌ನ ಭಾಗವಾಗಿದ್ದು, ತಮ್ಮ ಮೊದಲ ಅವೃತ್ತಿಯಿಂದಲೂ ದೆಹಲಿ ಕ್ಯಾಪಿಟಲ್ಸ್ ಪರ ಆಡುತ್ತಿದ್ದಾರೆ. ಇಲ್ಲಿಯವರೆಗೆ ಅವರು 35 ಐಪಿಎಲ್ ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದಾರೆ(PC-PTI).

6 / 6
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?

ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?

ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ

‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್

ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ

ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ

ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?

ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ

‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?

ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!