AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Mandir: ಅಯೋಧ್ಯೆಗೆ ಆಗಮಿಸಿದ ಕ್ರಿಕೆಟಿಗರ ಪಟ್ಟಿ ಇಲ್ಲಿದೆ

Pran Pratishtha Ceremony: ಅಯೋಧ್ಯೆಯಲ್ಲಿ ನಡೆಯುತ್ತಿರುವ ಐತಿಹಾಸಿಕ ಶ್ರೀರಾಮ ಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭವನ್ನು ಇಡೀ ಭಾರತವೇ ಕಣ್ತುಂಬಿಕೊಳ್ಳುತ್ತಿದೆ. ಈ ಸಮಾರಂಭದಲ್ಲಿ ಪಾಲ್ಗೊಳ್ಳಲು ದೇಶದ ಕೆಲವು ದೊಡ್ಡ ಸೆಲೆಬ್ರಿಟಿಗಳಿಗೆ ಆಹ್ವಾನ ನೀಡಲಾಗಿದೆ.

TV9 Web
| Edited By: |

Updated on:Jan 22, 2024 | 11:36 AM

Share
ಅಯೋಧ್ಯೆಯಲ್ಲಿ ನಡೆಯುತ್ತಿರುವ ಶ್ರೀ ರಾಮ ಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಈ ಐತಿಹಾಸಿಕ ಕ್ಷಣಗಳಿಗೆ ಸಾಕ್ಷಿಯಾಗಲು ಈಗಾಗಲೇ ದೇಶದ ಹಲವು ಸೆಲೆಬ್ರಿಟಿಗಳು ಅಯೋಧ್ಯೆಗೆ ತಲುಪಿದ್ದಾರೆ. ಇವರಲ್ಲಿ ಖ್ಯಾತ ಕ್ರಿಕೆಟಿಗರು ಕೂಡ ಇದ್ದಾರೆ.

1 / 7
ಜನವರಿ 21 ರಂದು ಅಯೋಧ್ಯೆಗೆ ಪ್ರಯಾಣ ಬೆಳೆಸಿದ್ದ ಟೀಮ್ ಇಂಡಿಯಾದ ಮಾಜಿ ನಾಯಕ ಅನಿಲ್ ಕುಂಬ್ಳೆ ಇದೀಗ ಅಯೋಧ್ಯೆಯಲ್ಲಿದ್ದಾರೆ. ಕುಟುಂಬದ ಜೊತೆ ಈ ಸಮಾರಂಭದಲ್ಲಿ ಪಾಲ್ಗೊಂಡಿರುವ ಕುಂಬ್ಳೆ ಇದೀಗ ರಾಮ ಮಂದಿರದ ಜೊತೆಗಿನ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ.

2 / 7
ಇನ್ನು ಟೀಮ್ ಇಂಡಿಯಾದ ಸ್ಟಾರ್ ಆಲ್​ರೌಂಡರ್ ರವೀಂದ್ರ ಜಡೇಜಾ ಕೂಡ ರಾಮ ಜನ್ಮಭೂಮಿಯಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಜಡೇಜಾ ಅವರ ಫೋಟೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

3 / 7
ಹಾಗೆಯೇ ಟೀಮ್ ಇಂಡಿಯಾದ ಮಾಜಿ ನಾಯಕ ಮಿಥಾಲಿ ರಾಜ್ ಕೂಡ ಅಯೋಧ್ಯೆಯಲ್ಲಿದ್ದು, ಅವರ ಫೋಟೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

4 / 7
ಭಾರತ ತಂಡದ ಮಾಜಿ ವೇಗಿ ವೆಂಕಟೇಶ್ ಪ್ರಸಾದ್ ಕೂಡ ಅಯೋಧ್ಯೆಯಲ್ಲಿದ್ದಾರೆ. ಈ ಶುಭ ಸಮಾರಂಭದಲ್ಲಿ ಪಾಲ್ಗೊಳ್ಳುತ್ತಿರುವ ಬಗ್ಗೆ ಸಂತಸ ಹಂಚಿಕೊಂಡಿರುವ ವೆಂಕಿ, ಬಾಲರಾಮನ ಪ್ರಾಣ ಪ್ರತಿಷ್ಠಾ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ಕಾತುರದಿಂದ ಕಾಯುತ್ತಿದ್ದಾರೆ.

5 / 7
ಇನ್ನು ಸಚಿನ್ ತೆಂಡೂಲ್ಕರ್ ಈಗಾಗಲೇ ಅಯೋಧ್ಯೆಗೆ ತಲುಪಿದ್ದು, ವಿರಾಟ್ ಕೊಹ್ಲಿ ಕೂಡ ಶ್ರೀರಾಮ ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.

6 / 7
ಇದಾಗ್ಯೂ ಈ ಶುಭ ಸಮಾರಂಭದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಕಾಣಿಸಿಕೊಳ್ಳುವ ಸಾಧ್ಯತೆಯಿಲ್ಲ. ಹಿಟ್​ಮ್ಯಾನ್ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗಾಗಿ ಇಂದು ಹೈದರಾಬಾದ್​ಗೆ ಪ್ರಯಾಣಿಸಲಿದ್ದು, ಹೀಗಾಗಿ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ಗೈರಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

7 / 7

Published On - 11:36 am, Mon, 22 January 24

ಕುಡಿದು ಟೈಟ್ ಆದವರಿಗೆ ಉಚಿತವಾಗಿ ಮನೆಗೆ ತಲುಪಿಸುವ ವ್ಯವಸ್ಥೆ

ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ

New Year 2026 Live: ನ್ಯೂ ಇಯರ್; ರಾಜ್ಯದ ಉದ್ದಗಲಕ್ಕೂ ಸಂಭ್ರಮ ಜೋರು

ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ

ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ

ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​

ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ

ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು

ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?