ವಿರಾಟ್ ಕೊಹ್ಲಿ-ಶತಕ ವೀರ: ವಿರಾಟ್ ಕೊಹ್ಲಿ 2022 ರಲ್ಲಿ 2 ಶತಕಗಳನ್ನು ಬಾರಿಸಿದ್ದರು. ಏಷ್ಯಾಕಪ್ನಲ್ಲಿ ಅಫ್ಘಾನ್ ವಿರುದ್ಧ ಚೊಚ್ಚಲ ಟಿ20 ಶತಕ ಸಿಡಿಸಿದ್ದ ಕೊಹ್ಲಿ, ಆ ಬಳಿಕ ಶ್ರೀಲಂಕಾ ವಿರುದ್ಧ ಏಕದಿನ ಶತಕ ಬಾರಿಸಿದ್ದರು. ಇದರೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯಧಿಕ ಶತಕ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ರಿಕಿ ಪಾಂಟಿಂಗ್ (71) ರನ್ನು ಹಿಂದಿಕ್ಕಿ ವಿರಾಟ್ ಕೊಹ್ಲಿ (72) 2ನೇ ಸ್ಥಾನಕ್ಕೇರಿದರು.