ವರ್ಷಗಳ ಬಳಿಕ ಟೀಂ ಇಂಡಿಯಾಕ್ಕೆ ಕಂಬ್ಯಾಕ್ ಮಾಡಿದ 7 ಸ್ಟಾರ್ ಕ್ರಿಕೆಟಿಗರಿವರು

Updated on: Oct 18, 2026 | 5:58 PM

ಟೀಂ ಇಂಡಿಯಾದಲ್ಲಿ ಪ್ರತಿಭೆಗಳ ಕೊರತೆಯಿಲ್ಲದಿದ್ದರೂ, ತಂಡದಿಂದ ಹೊರಗುಳಿದ ಆಟಗಾರರಿಗೆ ಕಂಬ್ಯಾಕ್ ಕಷ್ಟ. ಈ ಲೇಖನವು ವರ್ಷಗಳ ದೀರ್ಘ ಕಾಯುವಿಕೆಯ ನಂತರ ಭಾರತ ತಂಡಕ್ಕೆ ಯಶಸ್ವಿಯಾಗಿ ಮರಳಿದ ಕ್ರಿಕೆಟಿಗರ ಕುರಿತು ವಿವರಿಸುತ್ತದೆ. ಜಯದೇವ್ ಉನದ್ಕಟ್, ಕರುಣ್ ನಾಯರ್, ಪಾರ್ಥಿವ್ ಪಟೇಲ್, ಆಶಿಶ್ ನೆಹ್ರಾ, ಭುವನೇಶ್ವರ ಕುಮಾರ್, ದಿನೇಶ್ ಕಾರ್ತಿಕ್ ಮತ್ತು ವರುಣ್ ಚಕ್ರವರ್ತಿ ಅಂತಹ ಪ್ರಮುಖ ಉದಾಹರಣೆಗಳು.

1 / 8
ಟೀಂ ಇಂಡಿಯಾದಲ್ಲಿ ಪ್ರತಿಭೆಗಳಿಗೇನು ಕೊರತೆ ಇಲ್ಲ. ಹೀಗಾಗಿ ಒಮ್ಮೆ ತಂಡದಿಂದ ಹೊರಬಿದ್ದವರು ಮತ್ತೆ ತಂಡದಲ್ಲಿ ಸ್ಥಾನ ಪಡೆಯಲು ಸಾಕಷ್ಟು ದಿನ ಕಾಯಲೇಬೇಕು. ಹೀಗೆ ವರ್ಷಗಳಿಂದ ತಂಡದಿಂದ ಹೊರಗಿದ್ದು, ಆ ಬಳಿಕ ತಂಡಕ್ಕೆ ಕಂಬ್ಯಾಕ್ ಮಾಡಿದ ಭಾರತದ ಆಟಗಾರರ ಪಟ್ಟಿ ದೊಡ್ಡದಿದೆ. ಅಂತಹ ಆಟಗಾರರ ವಿವರ ಇಲ್ಲಿದೆ(PC-PTI).

ಟೀಂ ಇಂಡಿಯಾದಲ್ಲಿ ಪ್ರತಿಭೆಗಳಿಗೇನು ಕೊರತೆ ಇಲ್ಲ. ಹೀಗಾಗಿ ಒಮ್ಮೆ ತಂಡದಿಂದ ಹೊರಬಿದ್ದವರು ಮತ್ತೆ ತಂಡದಲ್ಲಿ ಸ್ಥಾನ ಪಡೆಯಲು ಸಾಕಷ್ಟು ದಿನ ಕಾಯಲೇಬೇಕು. ಹೀಗೆ ವರ್ಷಗಳಿಂದ ತಂಡದಿಂದ ಹೊರಗಿದ್ದು, ಆ ಬಳಿಕ ತಂಡಕ್ಕೆ ಕಂಬ್ಯಾಕ್ ಮಾಡಿದ ಭಾರತದ ಆಟಗಾರರ ಪಟ್ಟಿ ದೊಡ್ಡದಿದೆ. ಅಂತಹ ಆಟಗಾರರ ವಿವರ ಇಲ್ಲಿದೆ(PC-PTI).

2 / 8

ಟೀಂ ಇಂಡಿಯಾದಿಂದ ಹೊರಗುಳಿದು ಅತಿ ದೀರ್ಘ ಸಮಯದ ಬಳಿಕ ಮತ್ತೆ ತಂಡದಲ್ಲಿ ಅವಕಾಶ ಪಡೆದ ಆಟಗಾರರ ಪಟ್ಟಿಯಲ್ಲಿ ವೇಗಿ ಜಯದೇವ್ ಉನದ್ಕಟ್ ಅಗ್ರಸ್ಥಾನದಲ್ಲಿದ್ದಾರೆ. ಡಿಸೆಂಬರ್ 2010 ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಸೆಂಚುರಿಯನ್ ಟೆಸ್ಟ್‌ನಲ್ಲಿ ಉನದ್ಕಟ್ ಟೆಸ್ಟ್‌ಗೆ ಪಾದಾರ್ಪಣೆ ಮಾಡಿದರು. ಆದಾಗ್ಯೂ, ಮತ್ತೆ ಟೆಸ್ಟ್ ಪಂದ್ಯವನ್ನು ಆಡುವ ಮೊದಲು ಅವರು ಬಹಳ ಸಮಯ ಕಾಯಬೇಕಾಯಿತು. ಜಯದೇವ್​ಗೆ ಬರೋಬ್ಬರಿ 12 ವರ್ಷಗಳ ಬಳಿಕ ಅಂದರೆ ಡಿಸೆಂಬರ್ 2022 ರಲ್ಲಿ ಬಾಂಗ್ಲಾದೇಶ ವಿರುದ್ಧ ಟೆಸ್ಟ್‌ ಪಂದ್ಯವನ್ನಾಡುವ ಅವಕಾಶ ದೊರಕಿತು(PC-PTI).

3 / 8

ಕನ್ನಡಿಗ ಕರುಣ್ ನಾಯರ್ ಕೂಡ ಭಾರತ ತಂಡದಲ್ಲಿ ಮತ್ತೊಂದು ಅವಕಾಶ ಪಡೆಯಲು 8 ವರ್ಷ ಕಾಯಬೇಕಾಯಿತು. ಡಿಸೆಂಬರ್ 2016 ರಲ್ಲಿ, ನಾಯರ್ ಇಂಗ್ಲೆಂಡ್ ವಿರುದ್ಧ ಚೆನ್ನೈ ಟೆಸ್ಟ್‌ನಲ್ಲಿ ಅಜೇಯ 303 ರನ್ ಗಳಿಸಿದರು, ಟೆಸ್ಟ್ ಕ್ರಿಕೆಟ್‌ನಲ್ಲಿ ತ್ರಿಶತಕ ಗಳಿಸಿದ 2ನೇ ಭಾರತೀಯ ಬ್ಯಾಟ್ಸ್‌ಮನ್ ಎಂಬ ದಾಖಲೆಯನ್ನು ನಿರ್ಮಿಸಿದರು. ಆದಾಗ್ಯೂ, ಮಾರ್ಚ್ 2017 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಧರ್ಮಶಾಲಾ ಟೆಸ್ಟ್ ನಂತರ, ಅವರಿಗೆ ಭಾರತೀಯ ಟೆಸ್ಟ್ ತಂಡದಲ್ಲಿ ಮತ್ತೊಂದು ಅವಕಾಶ ಸಿಗಲಿಲ್ಲ. ಇದರ ನಂತರ ಕರುಣ್​ಗೆ ಜೂನ್ 2025 ರಲ್ಲಿ ಭಾರತ ಟೆಸ್ಟ್ ತಂಡದಲ್ಲಿ ಅವಕಾಶ ಸಿಕ್ಕಿತು(PC-PTI).

4 / 8

ವಿಕೆಟ್‌ ಕೀಪರ್ ಬ್ಯಾಟ್ಸ್‌ಮನ್ ಪಾರ್ಥಿವ್ ಪಟೇಲ್ ಬಹಳ ಚಿಕ್ಕ ವಯಸ್ಸಿನಲ್ಲಿಯೇ ಭಾರತೀಯ ತಂಡಕ್ಕೆ ಪಾದಾರ್ಪಣೆ ಮಾಡಿದರಾದರೂ ಅವರಿಗೆ ತಂಡದಲ್ಲಿ ಖಾಯಂ ಸ್ಥಾನ ಸಿಗಲಿಲ್ಲ. 2008 ರಲ್ಲಿ ತಮ್ಮ ಕೊನೆಯ ಟೆಸ್ಟ್ ಪಂದ್ಯವನ್ನು ಆಡಿದ ಪಾರ್ಥಿವ್ ಆ ನಂತರ ನವೆಂಬರ್ 2016 ರಲ್ಲಿ ಇಂಗ್ಲೆಂಡ್ ವಿರುದ್ಧದ ಮೊಹಾಲಿ ಟೆಸ್ಟ್‌ನಲ್ಲಿ ಮತ್ತೆ ಟೀಂ ಇಂಡಿಯಾದಲ್ಲಿ ಆಡುವ ಅವಕಾಶ ಪಡೆದರು. ಅಂದರೆ ಪಾರ್ಥಿವ್ ಸುಮಾರು ಎಂಟು ವರ್ಷಗಳ ನಂತರ ತಂಡದಲ್ಲಿ ಸ್ಥಾನ ಪಡೆದಿದ್ದರು(PC-PTI).

5 / 8

ವೇಗಿ ಆಶಿಶ್ ನೆಹ್ರಾ ಕೂಡ ಗಾಯಗಳು ಮತ್ತು ಫಿಟ್ನೆಸ್ ಸಮಸ್ಯೆಗಳಿಂದಾಗಿ ತಂಡದಿಂದ ಹೊರಬೀಳುತ್ತಲೇ ಇದ್ದರು. 2011 ರ ವಿಶ್ವಕಪ್ ಸೆಮಿಫೈನಲ್‌ನಲ್ಲಿ ಪಾಕಿಸ್ತಾನ ವಿರುದ್ಧ ಆಡಿದ ನಂತರ ತಂಡದಿಂದ ಹೊರಬಿದ್ದಿದ್ದ ನೆಹ್ರಾ, ಜನವರಿ 2016 ರಲ್ಲಿ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯೊಂದಿಗೆ ತಂಡಕ್ಕೆ ಮರಳಿದರು. ಅಂದರೆ ಸುಮಾರು ಐದು ವರ್ಷಗಳ ನಂತರ ನೆಹ್ರಾಗೆ ತಂಡದಲ್ಲಿ ಆಡುವ ಅವಕಾಶ ಸಿಕ್ಕಿತು(PC-PTI).

6 / 8

ಇದೀಗ ಭುವನೇಶ್ವರ ಕುಮಾರ್ ಸುಮಾರು ನಾಲ್ಕು ವರ್ಷಗಳ ನಂತರ ಟೀಮ್ ಇಂಡಿಯಾಗೆ ಮರಳಿದ್ದಾರೆ. ಸ್ವಿಂಗ್ ಬೌಲಿಂಗ್‌ಗೆ ಹೆಸರುವಾಸಿಯಾದ ಭುವನೇಶ್ವರ್, ನವೆಂಬರ್ 2022 ರಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ಪರ ಕೊನೆಯ ಬಾರಿಗೆ ಟಿ20 ಅಂತರರಾಷ್ಟ್ರೀಯ ಪಂದ್ಯವನ್ನು ಆಡಿದ್ದರು. ಆ ನಂತರ ಅವರನ್ನು ರಾಷ್ಟ್ರೀಯ ತಂಡದಿಂದ ಕೈಬಿಡಲಾಗಿತ್ತು(PC-PTI).

7 / 8

ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ 2014 ರಲ್ಲಿ ತಮ್ಮ ಕೊನೆಯ ಏಕದಿನ ಪಂದ್ಯವನ್ನು ಆಡಿದ್ದರು. ಅದಾದ ಬಳಿಕ ಜುಲೈ 2017 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯ ಸಮಯದಲ್ಲಿ ಅವರಿಗೆ ಮತ್ತೊಂದು ಅವಕಾಶ ಸಿಕ್ಕಿತು. ಅಂದರೆ ಕಾರ್ತಿಕ್ ಕೂಡ ಮೂರು ವರ್ಷಗಳಿಗೂ ಹೆಚ್ಚು ಕಾಲದ ನಂತರ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದರು(PC-PTI).

8 / 8

2021 ರ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ಮಿಸ್ಟರಿ ಸ್ಪಿನ್ನರ್ ವರುಣ್ ಚಕ್ರವರ್ತಿ ಅವರನ್ನು ಆ ನಂತರ ತಂಡದಿಂದ ಕೈಬಿಡಲಾಯಿತು. ವರುಣ್ ಮತ್ತೊಂದು ಅವಕಾಶಕ್ಕಾಗಿ ಸುಮಾರು ಮೂರು ವರ್ಷಗಳ ಕಾಲ ಕಾಯಬೇಕಾಯಿತು. ವರುಣ್​ಗೆ ಅಕ್ಟೋಬರ್ 2024 ರಲ್ಲಿ ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿಯಲ್ಲಿ ಆಡುವ ಅವಕಾಶ ಸಿಕ್ಕಿತು(PC-PTI).

Published On - 5:57 pm, Sun, 18 October 26

ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Loading...
Unable to load recommendations.
Follow Us