AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ದಾಖಲೆ ಉಡೀಸ್ ಮಾಡಿದ CSK

IPL 2025 CSK vs GT: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 67ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 230 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು ಕೇವಲ 147 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಸಿಎಸ್​ಕೆ ತಂಡ 83 ರನ್​ಗಳ ಭರ್ಜರಿ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: May 26, 2025 | 12:30 PM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡ ಹೊಸ ದಾಖಲೆ ಬರೆದಿದೆ. ಅದು ಕೂಡ ತನ್ನ ಸಾಂಪ್ರದಾಯಿಕ ಎದುರಾಳಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವಿಶೇಷ ದಾಖಲೆಯೊಂದನ್ನು ಮುರಿಯುವ ಮೂಲಕ ಎಂಬುದು ವಿಶೇಷ.

1 / 5
ಭಾನುವಾರ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 230 ರನ್​ ಕಲೆಹಾಕಿತು. ಈ 230 ರನ್​​ಗಳೊಂದಿಗೆ ಐಪಿಎಲ್​ ಇತಿಹಾಸದಲ್ಲಿ ಅತ್ಯಧಿಕ ಬಾರಿ 200+ ಸ್ಕೋರ್​ಗಳಿಸಿದ ತಂಡವೆಂಬ ದಾಖಲೆ ಸಿಎಸ್​ಕೆ ಪಾಲಾಯಿತು.

2 / 5
ಇದಕ್ಕೂ ಮುನ್ನ ಈ ವಿಶೇಷ ದಾಖಲೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೆಸರಿನಲ್ಲಿತ್ತು. ಆರ್​ಸಿಬಿ ತಂಡವು ಈವರೆಗೆ 268 ಪಂದ್ಯಗಳನ್ನಾಡಿದ್ದು, ಈ ವೇಳೆ 33 ಬಾರಿ 200+ ಸ್ಕೋರ್​ಗಳಿಸಿದೆ. ಈ ಮೂಲಕ ಐಪಿಎಲ್​ನಲ್ಲಿ ಅತ್ಯಧಿಕ ಬಾರಿ ಇನ್ನೂರಕ್ಕಿಂತ ಅಧಿಕ ಮೊತ್ತಗಳಿಸಿದ ತಂಡ ಎನಿಸಿಕೊಂಡಿತು.

3 / 5
ಇದೀಗ ಆರ್​ಸಿಬಿ ತಂಡದ ಈ ದಾಖಲೆಯನ್ನು ಅಳಿಸಿ ಹಾಕುವಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಯಶಸ್ವಿಯಾಗಿದೆ. ಸಿಎಸ್​ಕೆ ತಂಡವು ಈವರೆಗೆ 253 ಪಂದ್ಯಗಳನ್ನಾಡಿದ್ದು, ಈ ವೇಳೆ ಒಟ್ಟು 35 ಬಾರಿ 200+ ಸ್ಕೋರ್​ಗಳಿಸಿದೆ. ಅಂದರೆ ಈ ಬಾರಿಯ ಐಪಿಎಲ್​ನಲ್ಲಿ 2 ಬಾರಿ 200ಕ್ಕಿಂತ ಅಧಿಕ ಸ್ಕೋರ್​ಗಳಿಸುವ ಮೂಲಕ ಸಿಎಸ್​ಕೆ ತಂಡವು ಆರ್​ಸಿಬಿ ತಂಡದ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದಿದೆ.

4 / 5
ಹಾಗೆಯೇ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ 83 ರನ್​ಗಳ ಜಯ ಸಾಧಿಸುವುದರೊಂದಿಗೆ ಐಪಿಎಲ್ ಇತಿಹಾಸದಲ್ಲಿ ಅತೀ ಹೆಚ್ಚು ಬಾರಿ 80 ಕ್ಕಿಂತ ಅಧಿಕ ರನ್​ಗಳ ಅಂತರದಿಂದ ಗೆದ್ದ ತಂಡವೆಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಆರ್​ಸಿಬಿ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ಹೆಸರಿನಲ್ಲಿತ್ತು. ಉಭಯ ತಂಡಗಳು ಒಟ್ಟು 7 ಬಾರಿ 80 ಕ್ಕೂ ಅಧಿಕ ರನ್​ಗಳ ಅಂತರದಿಂದ ಗೆದ್ದಿದ್ದರು. ಇದೀಗ 8ನೇ ಬಾರಿ 80 ಕ್ಕಿಂತ ಅಧಿಕ ರನ್​ಗಳ ಅಂತರದಿಂದ ಜಯ ಸಾಧಿಸಿ ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದೆ.

5 / 5
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು

ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ

ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ

ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು

ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ

ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್

ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?

50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ

ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌

ಪತ್ನಿಯನ್ನ ಹತ್ಯೆಗೈದ ಪತಿ: ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ಆಯುಕ್ತ