
2027 ರ ಐಪಿಎಲ್‌ಗೆ ಇನ್ನು ಸಾಕಷ್ಟು ಸಮಯವಿದೆ. ಆದಾಗ್ಯೂ ಮುಂಬರುವ ಆವೃತ್ತಿಯ ಬಗ್ಗೆ ಈಗಾಗಲೇ ಚರ್ಚೆಗಳು ಹುಟ್ಟಿಕೊಂಡಿವೆ. ಅದರಲ್ಲೂ ಟೀಂ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯರನ್ನು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಬಿಡುಗಡೆ ಮಾಡುತ್ತಿದೆ ಎಂಬ ಸುದ್ದಿ ಸಧ್ಯಕ್ಕೆ ಸಂಚಲನ ಮೂಡಿಸಿದೆ. ಇದರ ನಡುವೆ ಹಾರ್ದಿಕ್ ಪಾಂಡ್ಯರನ್ನು ತಮ್ಮ ತಂಡಕ್ಕೆ ಸೇರಿಸಿಕೊಳ್ಳಲು ಫ್ರಾಂಚೈಸಿಗಳು ಸಾಲುಗಟ್ಟಿ ನಿಂತಿವೆ ಎಂದು ವರದಿಯಾಗಿದೆ (PC-PTI).
ಆರಂಭದಲ್ಲಿ ಕೇಳಿಬಂದ ಮಾಹಿತಿ ಪ್ರಕಾರ, ಹಾರ್ದಿಕ್ ಪಾಂಡ್ಯ ಖರೀದಿಗೆ ಕೆಕೆಆರ್ ಹಾಗೂ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಗಳು ಒಲವು ತೋರಿವೆ ಎನ್ನಲಾಗುತ್ತಿದೆ. ಕಳೆದ ಕೆಲವು ದಿನಗಳಿಂದ ಈ ಎರಡು ತಂಡಗಳ ಜೊತೆಗೆ ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಕೂಡ ಸೇರಿಕೊಂಡಿದೆ ಎಂದು ವರದಿಯಾಗಿತ್ತು. ಆದರೀಗ ಹಾರ್ದಿಕ್ ಪಾಂಡ್ಯ ಖರೀದಿಯ ಸುದ್ದಿಯ ಬಗ್ಗೆ ಸಿಎಸ್‌ಕೆ ಸಿಇಒ ಸ್ಪಷ್ಟನೇ ನೀಡುವ ಕೆಲಸ ಮಾಡಿದ್ದಾರೆ (PC-PTI).
ಹಾರ್ದಿಕ್ ಪಾಂಡ್ಯರನ್ನು ತಂಡಕ್ಕೆ ಸೇರಿಸಿಕೊಳ್ಳಲು ಸಿಎಸ್‌ಕೆ ಫ್ರಾಂಚೈಸಿ ಪ್ರಯತ್ನಗಳನ್ನು ಮಾಡುತ್ತಿದೆ ಎಂಬ ಸುದ್ದು ಸೋಶೀಯಲ್ ಮೀಡಿಯಾದಲ್ಲಿ ಸಂಚಲನ ಸೃಷ್ಟಿಸಿತ್ತು. ಇದಕ್ಕೆ ಪೂರಕವಾಗಿ ಧೋನಿ ಬದಲಿಯಾಗಿ ಸಿಎಸ್‌ಕೆ ಫ್ರಾಂಚೈಸಿ ಅವರಷ್ಟೇ ವರ್ಚಸ್ ಹೊಂದಿರುವ ಟೀಂ ಇಂಡಿಯಾದ ಮತ್ತೊಬ್ಬ ಸ್ಟಾರ್ ಆಟಗಾರನನ್ನು ಹುಡುಕುತ್ತಿತ್ತು. ಹೀಗಾಗಿ ಹಾರ್ದಿಕ್ ಪಾಂಡ್ಯರನ್ನು ಖರೀದಿಸಲು ಸಿಎಸ್‌ಕೆ ಮುಂದಾಗಿರಬಹುದು ಎಂಬ ಸುದ್ದಿ ಹರಿದಾಡುತ್ತಿತ್ತು (PC-PTI).
ಆದರೀಗ ಈ ವದಂತಿಗೆ ತೆರೆ ಎಳೆಯುವ ಕೆಲಸವನ್ನು ಸಿಎಸ್‌ಕೆ ಸಿಇಒ ಕಾಶಿ ವಿಶ್ವನಾಥನ್ ಮಾಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಸುದ್ದಿಗಳೆಲ್ಲ ಕೇವಲ ಊಹಾಪೋಹಗಳಷ್ಟೆ. ಪ್ರಸ್ತುತ ಆ ರೀತಿಯ ಯಾವುದೇ ಮಾತುಕತೆ ನಡೆದಿಲ್ಲ. ಅಲ್ಲದೆ ತಂಡವು ಪ್ರಸ್ತುತ ಪಾಂಡ್ಯರನ್ನು ಖರೀದಿಸುವ ಯಾವುದೇ ಯೋಜನೆಯನ್ನು ಹೊಂದಿಲ್ಲ ಎಂದಿದ್ದಾರೆ (PC-PTI).
ನಮ್ಮ ತಂಡವು ಕಳೆದ ಆವೃತ್ತಿಯ ಪ್ರದರ್ಶನದ ಬಗ್ಗೆ ಇನ್ನೂ ಯಾವುದೇ ವಿಶ್ಲೇಷಣೆ ಮಾಡಿಲ್ಲ. ಮೇಜರ್ ಲೀಗ್ ಕ್ರಿಕೆಟ್ ಮುಗಿದ ನಂತರವೇ ನಾವು ಅದರ ಬಗ್ಗೆ ಗಮನಹರಿಸುತ್ತೇವೆ. ನಾವು ಇಲ್ಲಿಯವರೆಗೆ ಹಾರ್ದಿಕ್ ಪಾಂಡ್ಯ ಅಥವಾ ಮುಂಬೈ ಇಂಡಿಯನ್ಸ್ ಮ್ಯಾನೇಜ್‌ಮೆಂಟ್ ಜೊತೆ ಮಾತನಾಡಿಲ್ಲ. ಸಾಮಾಜಿಕ ಮಾಧ್ಯಮದಲ್ಲಿ ಬರುತ್ತಿರುವ ಸುದ್ದಿಗಳಲ್ಲಿ ಯಾವುದೇ ಸತ್ಯವಿಲ್ಲ ಎಂದಿದ್ದಾರೆ (PC-PTI).