''ಹೊಸ ನಾಯಕನನ್ನು ಸಿದ್ಧಪಡಿಸಲು ನಾವು ಶ್ರಮಿಸುತ್ತಿದ್ದೇವೆ. ಯುವಕರನ್ನು ನಂಬಿದ್ದು ಫಲ ನೀಡಿದೆ. ನಾಯಕತ್ವದ ಬಗ್ಗೆ ರುತುರಾಜ್ ಜತೆ ಮಾತನಾಡಿದ್ದೇನೆ. ಇದು ಅವರಿಗೆ ಉತ್ತಮ ಅವಕಾಶ. ಐಪಿಎಲ್ ಗೂ ಮುನ್ನ ನಡೆಯುವ ಅಭ್ಯಾಸ ಪಂದ್ಯಗಳಲ್ಲಿ ಧೋನಿ ಫಿಟ್ ಆಗಿ ಕಾಣುತ್ತಿದ್ದು, ಈ ಬಾರಿ ಫಿಟ್ನೆಸ್ ಸಮಸ್ಯೆ ಇರುವುದಿಲ್ಲ. ಅಭ್ಯಾಸ ಪಂದ್ಯಗಳಲ್ಲಿ ಎಂಎಸ್ ಉತ್ತಮ ಪ್ರದರ್ಶನ ನೀಡಿದ್ದು, ಈ ಋತುವಿನಲ್ಲಿ ಉತ್ತಮ ಪ್ರದರ್ಶನ ನೀಡುವ ಭರವಸೆ ಇದೆ,'' ಎಂದು ಸ್ಟೀಫನ್ ಫ್ಲೆಮಿಂಗ್ ಹೇಳಿದರು.