- Kannada News Photo gallery Cricket photos CSK Finished 10th in the points table for the first time in IPL history
ಇದೇ ಮೊದಲ ಬಾರಿಗೆ… ಹೀನಾಯ ದಾಖಲೆಯೊಂದಿಗೆ ಐಪಿಎಲ್ ಮುಗಿಸಿದ CSK
IPL 2025 CSK vs GT: ಇಂಡಿಯನ್ ಪ್ರೀಮಿಯರ್ ಲೀಗ್ನ 67ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್ಗಳಲ್ಲಿ 230 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು ಕೇವಲ 147 ರನ್ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಸಿಎಸ್ಕೆ ತಂಡ 83 ರನ್ಗಳ ಭರ್ಜರಿ ಜಯ ಸಾಧಿಸಿದೆ.
Updated on: May 26, 2025 | 7:33 AM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗಿ 18 ವರ್ಷಗಳು ಕಳೆದಿವೆ. ಈ ಹದಿನೆಂಟು ವರ್ಷಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡ ಕಾಣಿಸಿಕೊಂಡಿದ್ದು 16 ಸೀಸನ್ಗಳಲ್ಲಿ ಮಾತ್ರ. ಕಳೆದ 15 ಸೀಸನ್ಗಳಲ್ಲಿ ಸಿಎಸ್ಕೆ ತಂಡವು ಒಮ್ಮೆಯೂ ಸಹ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದಿರಲಿಲ್ಲ.

ಆದರೆ ಈ ಬಾರಿ ಅಂತಿಮ ಸ್ಥಾನದೊಂದಿಗೆ ಐಪಿಎಲ್ ಅಭಿಯಾನ ಮುಗಿಸಿದೆ. ಅದು ಕೂಡ ಕೊನೆಯ ಪಂದ್ಯದಲ್ಲಿ ಗೆಲ್ಲುವ ಮೂಲಕ ಎಂಬುದು ವಿಶೇಷ. ಅಹಮದಾಬಾದ್ನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 83 ರನ್ಗಳ ಅಮೋಘ ಜಯ ಸಾಧಿಸಿದೆ.

ಈ ಪಂದ್ಯದಲ್ಲಿ ಟಾಸ್ ಗೆದ್ದ ಮಹೇಂದ್ರ ಸಿಂಗ್ ಧೋನಿ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ಪರ ಡೆವೊನ್ ಕಾನ್ವೆ (52) ಹಾಗೂ ಡೆವಾಲ್ಡ್ ಬ್ರೆವಿಸ್ (57) ಸ್ಪೋಟಕ ಅರ್ಧಶತಕ ಬಾರಿಸಿದರು. ಈ ಹಾಫ್ ಸೆಂಚುರಿಗಳ ನೆರವಿನೊಂದಿಗೆ ಸಿಎಸ್ಕೆ ತಂಡವು 20 ಓವರ್ಗಳಲ್ಲಿ 230 ರನ್ ಕಲೆಹಾಕಿತು.

231 ರನ್ಗಳ ಕಠಿಣ ಗುರಿ ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು 18.3 ಓವರ್ಗಳಲ್ಲಿ 147 ರನ್ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಮಹೇಂದ್ರ ಸಿಂಗ್ ಧೋನಿ ಮುಂದಾಳತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ತನ್ನ ಅಂತಿಮ ಲೀಗ್ ಪಂದ್ಯದಲ್ಲಿ ಬರೋಬ್ಬರಿ 83 ರನ್ಗಳ ಅಮೋಘ ಗೆಲುವು ದಾಖಲಿಸಿದೆ.

ಈ ಗೆಲುವಿನ ಹೊರತಾಗಿಯೂ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಅಂಕ ಪಟ್ಟಿಯಲ್ಲಿ ಮೇಲೇರಲು ಸಾಧ್ಯವಾಗಿಲ್ಲ. ಏಕೆಂದರೆ 14 ಪಂದ್ಯಗಳಲ್ಲಿ 4 ಜಯ ಸಾಧಿಸಿದರೂ ರಾಜಸ್ಥಾನ್ ರಾಯಲ್ಸ್ ತಂಡವು -0.549 ನೆಟ್ ರನ್ ರೇಟ್ ಹೊಂದಿತ್ತು. ಇತ್ತ 14 ಮ್ಯಾಚ್ಗಳಲ್ಲಿ 4 ಗೆಲುವು ದಾಖಲಿಸಿದ ಸಿಎಸ್ಕೆ -0.647 ನೆಟ್ ರನ್ ರೇಟ್ ಮಾತ್ರ ಪಡೆದುಕೊಂಡಿದೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಅಂತಿಮ ಸ್ಥಾನದೊಂದಿಗೆ ಅಭಿಯಾನ ಅಂತ್ಯಗೊಳಿಸಿದೆ.









