AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದೇ ಮೊದಲ ಬಾರಿಗೆ… ಹೀನಾಯ ದಾಖಲೆಯೊಂದಿಗೆ ಐಪಿಎಲ್ ಮುಗಿಸಿದ CSK 

IPL 2025 CSK vs GT: ಇಂಡಿಯನ್ ಪ್ರೀಮಿಯರ್ ಲೀಗ್​ನ 67ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 230 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು ಕೇವಲ 147 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಸಿಎಸ್​ಕೆ ತಂಡ 83 ರನ್​ಗಳ ಭರ್ಜರಿ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: May 26, 2025 | 7:33 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗಿ 18 ವರ್ಷಗಳು ಕಳೆದಿವೆ. ಈ ಹದಿನೆಂಟು ವರ್ಷಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡ ಕಾಣಿಸಿಕೊಂಡಿದ್ದು 16 ಸೀಸನ್​​ಗಳಲ್ಲಿ ಮಾತ್ರ. ಕಳೆದ 15 ಸೀಸನ್​​ಗಳಲ್ಲಿ ಸಿಎಸ್​ಕೆ ತಂಡವು ಒಮ್ಮೆಯೂ ಸಹ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದಿರಲಿಲ್ಲ.

1 / 5
ಆದರೆ ಈ ಬಾರಿ ಅಂತಿಮ ಸ್ಥಾನದೊಂದಿಗೆ ಐಪಿಎಲ್ ಅಭಿಯಾನ ಮುಗಿಸಿದೆ. ಅದು ಕೂಡ ಕೊನೆಯ ಪಂದ್ಯದಲ್ಲಿ ಗೆಲ್ಲುವ ಮೂಲಕ ಎಂಬುದು ವಿಶೇಷ. ಅಹಮದಾಬಾದ್​ನಲ್ಲಿ ನಡೆದ ಗುಜರಾತ್ ಟೈಟಾನ್ಸ್​ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 83 ರನ್​ಗಳ ಅಮೋಘ ಜಯ ಸಾಧಿಸಿದೆ.

2 / 5
ಈ ಪಂದ್ಯದಲ್ಲಿ ಟಾಸ್ ಗೆದ್ದ ಮಹೇಂದ್ರ ಸಿಂಗ್ ಧೋನಿ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ಪರ ಡೆವೊನ್ ಕಾನ್ವೆ (52) ಹಾಗೂ ಡೆವಾಲ್ಡ್ ಬ್ರೆವಿಸ್ (57) ಸ್ಪೋಟಕ ಅರ್ಧಶತಕ ಬಾರಿಸಿದರು. ಈ ಹಾಫ್ ಸೆಂಚುರಿಗಳ ನೆರವಿನೊಂದಿಗೆ ಸಿಎಸ್​ಕೆ ತಂಡವು 20 ಓವರ್​ಗಳಲ್ಲಿ 230 ರನ್​ ಕಲೆಹಾಕಿತು.

3 / 5
231 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು 18.3 ಓವರ್​ಗಳಲ್ಲಿ 147 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಮಹೇಂದ್ರ ಸಿಂಗ್ ಧೋನಿ ಮುಂದಾಳತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ತನ್ನ ಅಂತಿಮ ಲೀಗ್ ಪಂದ್ಯದಲ್ಲಿ ಬರೋಬ್ಬರಿ 83 ರನ್​ಗಳ ಅಮೋಘ ಗೆಲುವು ದಾಖಲಿಸಿದೆ. 

4 / 5
ಈ ಗೆಲುವಿನ ಹೊರತಾಗಿಯೂ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಅಂಕ ಪಟ್ಟಿಯಲ್ಲಿ ಮೇಲೇರಲು ಸಾಧ್ಯವಾಗಿಲ್ಲ. ಏಕೆಂದರೆ 14 ಪಂದ್ಯಗಳಲ್ಲಿ 4 ಜಯ ಸಾಧಿಸಿದರೂ ರಾಜಸ್ಥಾನ್ ರಾಯಲ್ಸ್ ತಂಡವು -0.549 ನೆಟ್ ರನ್ ರೇಟ್ ಹೊಂದಿತ್ತು. ಇತ್ತ 14 ಮ್ಯಾಚ್​ಗಳಲ್ಲಿ 4 ಗೆಲುವು ದಾಖಲಿಸಿದ ಸಿಎಸ್​ಕೆ -0.647 ನೆಟ್​ ರನ್ ರೇಟ್​ ಮಾತ್ರ ಪಡೆದುಕೊಂಡಿದೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಅಂತಿಮ ಸ್ಥಾನದೊಂದಿಗೆ ಅಭಿಯಾನ ಅಂತ್ಯಗೊಳಿಸಿದೆ.

5 / 5
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ

ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು

ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು

ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಫಾಲ್ಸ್, ವಿಡಿಯೋ ನೋಡಿ

ತಿಮರೋಡಿಯನ್ನು ಬಂಧಿಸುವ ಮುನ್ನ ಪೊಲೀಸ್ ಮತ್ತು ವಕೀಲರ ನಡುವೆ ವಾಗ್ವಾದ

ಮಹೇಶ್ ತಿಮರೋಡಿ ಮನೇಲಿ 4 ದಿನ ಇದ್ದೆ, ಊಟ ಮಾತ್ರ ಹಾಕಿದ್ದು: ಸುಜಾತ ಭಟ್

ವೈಷ್ಣೋದೇವಿ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಅಪಘಾತ, ಓರ್ವ ಸಾವು

Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ

ರೀಲ್ಸ್ ಮಾಡುವಾಗ ಟ್ರ್ಯಾಕ್ಟರ್ ಪಲ್ಟಿ, ಯುವಕ ಸಾವು: ವಿಡಿಯೋ ವೈರಲ್