- TV9 Kannada Kannada News Photos Cricket Photos IPL 2026: MS Dhoni Out of CSK vs DC Match Due to Injury; Playoff Hopes Dim
IPL 2026: ತಂಡದಿಂದ ದೂರ; ಈ ಐಪಿಎಲ್ನಲ್ಲಿ ಧೋನಿ ಆಡುವುದು ಅನುಮಾನ?
IPL 2026: ಐಪಿಎಲ್ 2026ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಗಾಯದ ಸಮಸ್ಯೆ ಹಾಗೂ ಕಳಪೆ ಪ್ರದರ್ಶನದಿಂದ ಬಳಲುತ್ತಿದೆ. ಸತತ ಗೆಲುವಿನ ಲಯಕ್ಕೆ ಮರಳಿದ್ದರೂ, ಸ್ಟಾರ್ ಆಟಗಾರ ಎಂಎಸ್ ಧೋನಿ ಗಾಯದಿಂದಾಗಿ ದೆಹಲಿ ವಿರುದ್ಧದ ಪಂದ್ಯದಿಂದ ಹೊರಗುಳಿದಿರುವುದು ಅಭಿಮಾನಿಗಳಿಗೆ ನಿರಾಶೆ ಮೂಡಿಸಿದೆ. ಇದು ಸಿಎಸ್ಕೆ ಪ್ಲೇಆಫ್ ಕನಸುಗಳನ್ನು ಮತ್ತಷ್ಟು ಮಸುಕಾಗಿಸಿದೆ, ಉಳಿದ ಪಂದ್ಯಗಳಲ್ಲಿ ಅವರ ಆಟದ ಬಗ್ಗೆ ಅನುಮಾನ ಮೂಡಿಸಿದೆ.
Updated on: May 04, 2026 | 5:05 PM

2026 ರ ಐಪಿಎಲ್ನಲ್ಲಿ ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ರದರ್ಶನ ಏರಿಳಿತಗಳಿಂದ ಕೂಡಿದೆ. ಇದಕ್ಕೆ ಕಾರಣ ತಂಡದ ಸ್ಟಾರ್ ಆಟಗಾರರು ಗಾಯದಿಂದ ಟೂರ್ನಿಯಿಂದ ಹೊರಬಿದ್ದಿರುವುದು. ಇದರ ಜೊತೆಗೆ ತಂಡದಲ್ಲಿರುವವರ ಕಳಪೆ ಪ್ರದರ್ಶನ. ಇಷ್ಟೆಲ್ಲ ಸಮಸ್ಯೆಗಳ ನಡುವೆಯೂ ಸಿಎಸ್ಕೆ ಗೆಲುವಿನ ಲಯಕ್ಕೆ ಮರಳಿದ್ದು, ಸತತ ಎರಡು ಪಂದ್ಯಗಳನ್ನು ಗೆದ್ದಿದೆ. ಇದೀಗ ಸಿಎಸ್ಕೆ ತಂಡಕ್ಕೆ ಡೆಲ್ಲಿ ಎದುರಾಳಿಯಾಗಿ ನಿಂತಿದೆ.

ಈ ಪಂದ್ಯದಲ್ಲಾದರೂ ಎಂಎಸ್ ಧೋನಿ ಸಿಎಸ್ಕೆ ಪರ ಕಣಕ್ಕಿಳಿಯುತ್ತಾರಾ ಎಂದು ಕಾದು ಕುಳಿತಿದ್ದ ಅಭಿಮಾನಿಗಳಿಗೆ ಮತ್ತೆ ನಿರಾಸೆ ಎದುರಾಗಿದೆ. ಏಕೆಂದರೆ ಗಾಯದಿಂದಾಗಿ ಈ ಅವೃತ್ತಿಯಲ್ಲಿ ಒಂದೇ ಒಂದು ಪಂದ್ಯವನ್ನಾಡದ ಧೋನಿ, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧವೂ ಆಡುವುದಿಲ್ಲ. ಏಕೆಂದರೆ ಧೋನಿ ತಂಡದೊಂದಿಗೆ ದೆಹಲಿಗೆ ಪ್ರಯಾಣ ಬೆಳೆಸಿಲ್ಲ ಎಂದು ವರದಿಯಾಗಿದೆ.

ಮೇಲೆ ಹೇಳಿದಂತೆ ಐಪಿಎಲ್ 2026 ರ 48 ನೇ ಪಂದ್ಯವು ಮೇ 5 ರ ಮಂಗಳವಾರ ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯಲಿದೆ. ಈ ಪಂದ್ಯಕ್ಕಾಗಿ ಇಡೀ ಚೆನ್ನೈ ತಂಡ ದೆಹಲಿಗೆ ಆಗಮಿಸಿದೆ. ಆದರೆ ಕ್ರಿಕ್ಬಜ್ ವರದಿಯ ಪ್ರಕಾರ, ಎಂಎಸ್ ಧೋನಿ ಈ ಬಾರಿಯೂ ತಂಡದೊಂದಿಗೆ ಪ್ರಯಾಣಿಸಲಿಲ್ಲ. ವರದಿಗಳ ಪ್ರಕಾರ, ಧೋನಿ ಇನ್ನೂ ಚೆನ್ನೈನಲ್ಲಿದ್ದು, ಚೇತರಿಕೆಯ ಹಾದಿಯಲ್ಲಿದ್ದಾರೆ.

ಧೋನಿ ಇಲ್ಲದೆ ಸಿಎಸ್ಕೆ ಪಂದ್ಯಕ್ಕೆ ಪ್ರಯಾಣಿಸುತ್ತಿರುವುದು ಇದೇ ಮೊದಲಲ್ಲ ಎಂಬುದು ಗಮನಿಸಬೇಕಾದ ಸಂಗತಿ. ಇತ್ತೀಚೆಗೆ, ಚೆನ್ನೈ ತಂಡದ ಬ್ಯಾಟಿಂಗ್ ಕೋಚ್ ಮೈಕೆಲ್ ಹಸ್ಸಿ, ತಂಡದ ಸಂಯೋಜನೆಗೆ ಅಡ್ಡಿಯಾಗುವುದನ್ನು ತಪ್ಪಿಸಲು ಮತ್ತು ಪಂದ್ಯದ ಸಮಯದಲ್ಲಿ ಪ್ರೇಕ್ಷಕರ ಗಮನವನ್ನು ತಮ್ಮತ್ತ ಸೆಳೆಯುವುದನ್ನು ತಪ್ಪಿಸಲು ಧೋನಿ ತಂಡದೊಂದಿಗೆ ಪ್ರಯಾಣಿಸುತ್ತಿಲ್ಲ ಎಂದು ಬಹಿರಂಗಪಡಿಸಿದ್ದರು. ಹೀಗಾಗಿ ಧೋನಿ ದೆಹಲಿಗೂ ತಂಡದೊಂದಿಗೆ ಪ್ರಯಾಣ ಬೆಳೆಸಿಲ್ಲ ಎಂದು ವರದಿಯಾಗಿದೆ.

ಐಪಿಎಲ್ ಆರಂಭಕ್ಕೂ ಮುನ್ನವೇ ಗಾಯಕ್ಕೆ ತುತ್ತಾದ ಧೋನಿ, ಮೂರ್ನಾಲ್ಕು ಪಂದ್ಯಗಳನ್ನು ಆಡುವುದಿಲ್ಲ ಎಂದು ಆರಂಭದಲ್ಲಿ ಹೇಳಲಾಗಿತ್ತು. ಆದರೆ ಸಿಎಸ್ಕೆ ಇದುವರೆಗೆ 9 ಪಂದ್ಯಗಳನ್ನಾಡಿದೆ. ಹೀಗಿರುವಾಗ ಉಳಿದ ಪಂದ್ಯಗಳಲ್ಲಿ ಧೋನಿ ಆಡುವುದು ಅನುಮಾನವಾಗಿದೆ. ಸಿಎಸ್ಕೆ ಪ್ರದರ್ಶನವನ್ನು ನೋಡಿದರೆ ಅದು ಪ್ಲೇಆಫ್ಗೇರುವುದು ಅನುಮಾನವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಧೋನಿ ಆಟವನ್ನು ಕಣ್ತುಂಬಿಕೊಳ್ಳಲು ಕಾದುಕುಳಿತಿದ್ದ ಅಭಿಮಾನಿಗಳಿಗೆ ನಿರಾಸೆ ಎದುರಾಗುವ ಸಾಧ್ಯತೆಗಳಿವೆ.

ಕಳೆದ ಒಂದು ದಶಕದಿಂದ ಕನ್ನಡದ ನಂ.1 ಸುದ್ದಿ ವಾಹಿನಿ ಟಿವಿ9 ಕನ್ನಡದೊಂದಿಗೆ ಪತ್ರಿಕೋದ್ಯಮದ ಪಯಣ ಮುಂದುವರಿಸಿದ್ದೇನೆ. ಕ್ರೀಡಾ ಜಗತ್ತಿನ ಆಗುಹೋಗುಗಳು, ಆಟಗಾರರ ಸಾಧನೆಗಳು, ಮೈದಾನದ ರೋಚಕ ಕ್ಷಣಗಳು ಹಾಗೂ ಕ್ರೀಡೆಯ ಹಿಂದಿನ ಆಸಕ್ತಿದಾಯಕ ಕಥನಗಳನ್ನು ಅಕ್ಷರಗಳ ಮೂಲಕ ಓದುಗರಿಗೆ ತಲುಪಿಸುವುದು ನನ್ನ ವೃತ್ತಿ ಮತ್ತು ಪ್ರವೃತ್ತಿ. ಕ್ರೀಡೆಯನ್ನು ಕೇವಲ ಆಟವಾಗಿ ನೋಡದೆ, ಅದರೊಳಗಿನ ಪರಿಶ್ರಮ, ಹೋರಾಟ, ಸಾಧನೆ ಮತ್ತು ಭಾವನೆಗಳನ್ನು ಗುರುತಿಸಿ ಬರವಣಿಗೆಯಲ್ಲಿ ಕಟ್ಟಿಕೊಡುವುದು ನನ್ನ ಪ್ರಯತ್ನ. ಮೂಲತಃ ಹಾಸನ ಜಿಲ್ಲೆಯವನು. ಹಾಸನದ ನೆಲದ ಸೊಗಡು ಮತ್ತು ಕನ್ನಡದ ಮೇಲಿನ ಅಭಿಮಾನ ನನ್ನ ಹೆಮ್ಮೆ. ವೃತ್ತಿಪರತೆಯೊಂದಿಗೆ ಹೊಸ ವಿಷಯಗಳನ್ನು ಕಲಿಯುತ್ತಾ, ಕ್ರೀಡಾ ಪತ್ರಿಕೋದ್ಯಮದಲ್ಲಿ ಹೊಸ ಮೈಲಿಗಲ್ಲುಗಳನ್ನು ಸಾಧಿಸುವ ಹಂಬಲ ನನ್ನದು.
Read More