CSK vs MI IPL 2021: CSK ಪರ ಪದಾರ್ಪಣೆ ಮಾಡಲು ಕನ್ನಡಿಗ ಸಜ್ಜು
TV9 Web | Updated By: ಝಾಹಿರ್ ಯೂಸುಫ್
Updated on:
Sep 18, 2021 | 5:27 PM
Robin Uthappa: ಸಿಪಿಎಲ್ನಲ್ಲಿ ಸೆಂಟ್ ಲೂಸಿಯಾ ಕಿಂಗ್ಸ್ ತಂಡದ ನಾಯಕರಾಗಿದ್ದ ಡುಪ್ಲೆಸಿಸ್ ತೊಡೆ ಸಂದು ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಕಾರಣ ಸೆಮಿ ಫೈನಲ್ ಹಾಗೂ ಫೈನಲ್ ಪಂದ್ಯದಿಂದ ಹೊರಗುಳಿದಿದ್ದರು.
1 / 7
ಚೆನ್ನೈ ಸೂಪರ್ ಕಿಂಗ್ಸ್: ರುತುರಾಜ್ ಗಾಯಕ್ವಾಡ್, ರಾಬಿನ್ ಉತ್ತಪ್ಪ, ಮೊಯೀನ್ ಅಲಿ, ಸುರೇಶ್ ರೈನಾ, ಅಂಬಾಟಿ ರಾಯುಡು, ರವೀಂದ್ರ ಜಡೇಜಾ, ಎಂ.ಎಸ್.ಧೋನಿ, ಶಾರ್ದುಲ್ ಠಾಕೂರ್, ದೀಪಕ್ ಚಹರ್, ಇಮ್ರಾನ್ ತಾಹಿರ್, ಜೋಶ್ ಹ್ಯಾಝಲ್‌ವುಡ್
2 / 7
ಫಾಫ್ ಡುಪ್ಲೆಸಿಸ್ ಫಿಟ್ನೆಸ್ ಸಮಸ್ಯೆಯಿಂದ ಬಳಲುತ್ತಿದ್ದು, ಅವರು ಫಿಟ್ ಆಗಿದ್ದರೆ ರಾಬಿನ್ ಉತ್ತಪ್ಪ ಹೊರಗುಳಿಯಲಿದ್ದಾರೆ. ಹಾಗೆಯೇ ಸ್ಯಾಮ್ ಕರನ್ ಕ್ವಾರಂಟೈನ್ನಲ್ಲಿದ್ದು ಹೀಗಾಗಿ ಮೊದಲ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ.
3 / 7
ಇದೀಗ ಡುಪ್ಲೆಸಿಸ್ ಯುಎಇಗೆ ಬಂದಿಳಿದರೂ ಗಾಯದ ಗಂಭೀರ ಪರಿಣಾಮ ಒಂದು ವಾರಗಳ ಕಾಲ ವಿಶ್ರಾಂತಿ ಪಡೆಯುವ ಅಗತ್ಯವಿದೆ. ಹೀಗಾಗಿ ಮೊದಲ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆ ಹೆಚ್ಚು. ಇತ್ತ ಡುಪ್ಲೆಸಿಸ್ ಹೊರಗುಳಿದರೆ ಸಿಎಸ್ಕೆ ಪರ ಯಾರು ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ ಎಂಬ ಚರ್ಚೆಗಳು ಶುರುವಾಗಿದೆ.
4 / 7
ಈ ಪಟ್ಟಿಯಲ್ಲಿ ಮುಂಚೂಣಿಯಲ್ಲಿರುವ ಹೆಸರು ಕನ್ನಡಿಗ ರಾಬಿನ್ ಉತ್ತಪ್ಪ. ಹೌದು, ಉತ್ತಪ್ಪ ಈ ಸಲ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಆಯ್ಕೆಯಾಗಿದ್ದರೂ ಮೊದಲಾರ್ಧದಲ್ಲಿ ಯಾವುದೇ ಪಂದ್ಯವಾಡಿರಲಿಲ್ಲ. ಇತ್ತ ಡುಪ್ಲೆಸಿಸ್ ಹಾಗೂ ರುತುರಾಜ್ ಗಾಯಕ್ವಾಡ್ ಉತ್ತಮವಾಗಿ ಇನಿಂಗ್ಸ್ ಆರಂಭಿಸಿದ್ದರಿಂದ ಮೊದಲ 7 ಪಂದ್ಯಗಳಲ್ಲಿ ರಾಬಿನ್ ಉತ್ತಪ್ಪ ಬೆಂಚ್ ಕಾಯಬೇಕಾಯಿತು.
5 / 7
ಇದೀಗ ಡುಪ್ಲೆಸಿಸ್ ಅಲಭ್ಯತೆ ಕಾರಣ ರಾಬಿನ್ ಉತ್ತಪ್ಪಗೆ ಸಿಎಸ್ಕೆ ಪರ ಪದಾರ್ಪಣೆ ಮಾಡುವ ಅವಕಾಶ ದೊರೆಯಲಿದೆ. ಏಕೆಂದರೆ ಈ ಹಿಂದೆ ರಾಬಿನ್ ಉತ್ತಪ್ಪ ಕೆಕೆಆರ್ ಹಾಗೂ ರಾಜಸ್ಥಾನ್ ರಾಯಲ್ಸ್ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಹೀಗಾಗಿ ಅನುಭವಿ ಆಟಗಾರನನ್ನು ಸಿಎಸ್ಕೆ ಮೊದಲ ಪಂದ್ಯದಲ್ಲಿ ಬದಲಿ ಆಟಗಾರನಾಗಿ ಕಣಕ್ಕಿಳಿಸುವ ಸಾಧ್ಯತೆ ಹೆಚ್ಚು.
6 / 7
ಕೆಲ ಮೂಲಗಳ ಪ್ರಕಾರ ಮೊದಲ ಪಂದ್ಯಕ್ಕಾಗಿ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಕೊಡಗಿನ ಕುವರನಿಗೆ ಸಿಎಸ್ಕೆ ಮ್ಯಾನೇಜ್ಮೆಂಟ್ ನಿರ್ದೇಶಿಸಿದ್ದಾರೆ. ಹೀಗಾಗಿ ಕಳೆದ ಎರಡು ದಿನಗಳಿಂದ ರಾಬಿನ್ ಉತ್ತಪ್ಪ ನೆಟ್ಸ್ನಲ್ಲಿ ಕಠಿಣ ಅಭ್ಯಾಸದಲ್ಲಿ ತೊಡಗಿಸಿಕೊಂಡಿದ್ದಾರೆ. ಹೀಗಾಗಿ ಮುಂಬೈ ಇಂಡಿಯನ್ಸ್ ವಿರುದ್ದದ ಪಂದ್ಯದಲ್ಲಿ ಉತ್ತಪ್ಪ ಕಣಕ್ಕಿಳಿಯುವುದ ಬಹುತೇಕ ಖಚಿತ ಎನ್ನಬಹುದು.
7 / 7
ಚೆನ್ನೈ ಸೂಪರ್ ಕಿಂಗ್ಸ್ ತಂಡ ಹೀಗಿದೆ: ಮಹೇಂದ್ರ ಸಿಂಗ್ ಧೋನಿ (ನಾಯಕ), ಸುರೇಶ್ ರೈನಾ, ಅಂಬಟಿ ರಾಯುಡು, ರಾಬಿನ್ ಉತ್ತಪ್ಪ, ಕೆಎಂ ಆಸಿಫ್, ದೀಪಕ್ ಚಹರ್, ಡ್ವೇನ್ ಬ್ರಾವೋ, ಫಾಫ್ ಡು ಪ್ಲೆಸಿಸ್, ಇಮ್ರಾನ್ ತಾಹಿರ್, ಎನ್ ಜಗದೀಸನ್, ಕರ್ಣ್ ಶರ್ಮಾ, ಲುಂಗಿ ಎನ್‌ಗಿಡಿ, ರವೀಂದ್ರ ಜಡೇಜಾ, ರುತುರಾಜ್ ಗಾಯಕ್ವಾಡ್, ಶಾರ್ದೂಲ್ ಠಾಕೂರ್, ಮಿಚೆಲ್ ಸ್ಯಾಂಟ್ನರ್, ಸ್ಯಾಮ್ ಕರನ್, ಆರ್ ಸಾಯಿ ಕಿಶೋರ್, ಮೊಯೀನ್ ಅಲಿ, ಕೆ ಗೌತಮ್, ಚೇತೇಶ್ವರ ಪೂಜಾರ, ಹರಿಶಂಕರ್ ರೆಡ್ಡಿ, ಭಗತ್ ವರ್ಮ, ಸಿ ಹರಿ ನಿಶಾಂತ್, ಜೋಶ್ ಹ್ಯಾಝಲ್‌ವುಡ್.