AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CSK vs PBKS: ಏಳರಿಂದ ಮೇಲೇಳದ ಸಂಜು ಸ್ಯಾಮ್ಸನ್

Sanju Samson's Early Wicket: ರಾಜಸ್ಥಾನ್ ವಿರುದ್ಧ ಹೀನಾಯ ಸೋತ ಚೆನ್ನೈ, ಇಂದು ಪಂಜಾಬ್ ಎದುರು ತವರು ಮೈದಾನದಲ್ಲಿ ಆಡುತ್ತಿದೆ. ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಸಿಎಸ್‌ಕೆಗೆ ಉತ್ತಮ ಆರಂಭ ಸಿಗಲಿಲ್ಲ. ಸಂಜು ಸ್ಯಾಮ್ಸನ್ (7 ರನ್) ಮತ್ತೊಮ್ಮೆ ಕಳಪೆ ಪ್ರದರ್ಶನ ನೀಡಿ ಬೇಗನೆ ವಿಕೆಟ್ ಕಳೆದುಕೊಂಡರು. ಇದರಿಂದ ಸಿಎಸ್‌ಕೆ 14 ರನ್‌ಗಳಿಗೆ ಮೊದಲ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಚೆನ್ನೈ ತಂಡಕ್ಕೆ ಉತ್ತಮ ಪ್ರದರ್ಶನ ನೀಡುವ ಸವಾಲು ಎದುರಾಗಿದೆ.

ಪೃಥ್ವಿಶಂಕರ
|

Updated on: Apr 03, 2026 | 8:35 PM

Share
ರಾಜಸ್ಥಾನ್ ರಾಯಲ್ಸ್ ವಿರುದ್ಧದ ತನ್ನ ಮೊದಲ ಪಂದ್ಯವನ್ನು ಹೀನಾಯವಾಗಿ ಸೋತಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಇಂದು ತನ್ನ ತವರು ಮೈದಾನವಾದ ಎಂಎ ಚಿದಂಬರಂ ಮೈದಾನದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಿದೆ. ಈ ಪಂದ್ಯದಲ್ಲಿ ಟಾಸ್ ಸೋತ ಸಿಎಸ್​ಕೆ ಮೊದಲು ಬ್ಯಾಟಿಂಗ್‌ ಮಾಡುತ್ತಿದೆ. ಆದಾಗ್ಯೂ ತಂಡಕ್ಕೆ ಉತ್ತಮ ಆರಂಭ ಸಿಕ್ಕಿಲ್ಲ.

1 / 5
ಎಂದಿನಂತೆ ಈ ಪಂದ್ಯದಲ್ಲೂ ಸಂಜು ಸ್ಯಾಮ್ಸನ್ ಹಾಗೂ ರುತುರಾಜ್ ಗಾಯಕ್ವಾಡ್ ಸಿಎಸ್​ಕೆ ಪರ ಇನ್ನಿಂಗ್ಸ್ ಆರಂಭಿಸಿದರು. ರಾಜಸ್ಥಾನ್ ವಿರುದ್ಧದ ಪಂದ್ಯದಲ್ಲಿ 7 ಎಸೆತಗಳನ್ನು ಎದುರಿಸಿ ಕೇವಲ 6 ರನ್​ಗಳಿಗೆ ಔಟಾಗಿದ್ದ ಸಂಜು, ಈ ಪಂದ್ಯದಲ್ಲಿ ಅಬ್ಬರಿಸಲಿ ಎಂದು ಅಭಿಮಾನಿಗಳು ಆಶಿಸಿದ್ದರು. ಆದರೆ ಈ ಪಂದ್ಯದಲ್ಲೂ ಸಂಜು ಪ್ರದರ್ಶನ ಸಪ್ಪೆಯಾಗಿತ್ತು.

2 / 5
ಈ ಪಂದ್ಯದಲ್ಲೂ 7 ಎಸೆತಗಳನ್ನು ಎದುರಿಸಿದ ಸಂಜು, ಕಳೆದ ಪಂದ್ಯಕ್ಕಿಂತ ಒಂದು ರನ್ ಹೆಚ್ಚಿಗೆ ಬಾರಿಸಿ ಅಂದರೆ 7 ರನ್ ಬಾರಿಸಿ ವಿಕೆಟ್ ಕೀಪರ್​ಗೆ ಕ್ಯಾಚಿತ್ತು ಔಟಾದರು. ಸಂಜು ಅವರ ಇನ್ನಿಂಗ್ಸ್​ನಲ್ಲಿ ಕೇವಲ 1 ಬೌಂಡರಿ ಮಾತ್ರ ಸೇರಿತ್ತು. ಸಂಜು ಬೇಗನೇ ಔಟಾದ ಕಾರಣ ಸಿಎಸ್​ಕೆ ತಂಡ 14 ರನ್​ಗಳಿಗೆ ತನ್ನ ಮೊದಲ ವಿಕೆಟ್ ಕಳೆದುಕೊಂಡಿತು.

3 / 5
ಸಂಜು ಸ್ಯಾಮ್ಸನ್ ಅವರ ವಿಕೆಟ್ ಬೇಗನೇ ಪತನವಾದರೂ ಆ ಬಳಿಕ ಜೊತೆಯಾಗಿರುವ ನಾಯಕ ರುತುರಾಜ್ ಹಾಗೂ ಯುವ ಬ್ಯಾಟ್ಸ್‌ಮನ್ ಆಯುಷ್ ಮ್ಹಾತ್ರೆ ತಂಡವನ್ನು ಶತಕದ ಗಡಿ ದಾಟಿಸಿದ್ದಾರೆ. ಇವರಿಬ್ಬರ ಜೊತೆಯಾಟದಿಂದಾಗಿ ಸಿಎಸ್​ಕೆ ಕೇವಲ 10 ಓವರ್​ಗಳಲ್ಲಿ 100 ರನ್ ಕಲೆಹಾಕಿದೆ.

4 / 5
ಸಿಎಸ್​ಕೆ ಪರ ಅಬ್ಬರದ ಇನ್ನಿಂಗ್ಸ್ ಆಡಿರುವ ಆಯುಷ್ ಮ್ಹಾತ್ರೆ ತಮ್ಮ ಐಪಿಎಲ್ ವೃತ್ತಿಜೀವನದ ಎರಡನೇ ಅರ್ಧಶತಕವನ್ನು ಸಹ ಪೂರೈಸಿದ್ದಾರೆ. ಕ್ರೀಸ್​ಗೆ ಬಂದಾಗಿನಿಂದ ಅಬ್ಬರದ ಇನ್ನಿಂಗ್ಸ್ ಆಡಿರುವ ಆಯುಷ್ ಕೇವಲ 29 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದರು. ಆಯುಷ್ ತಮ್ಮ ಇನ್ನಿಂಗ್ಸ್​ನಲ್ಲಿ ಇದುವರೆಗೆ 5 ಸಿಕ್ಸರ್ ಹಾಗೂ 4 ಬೌಂಡರಿಗಳನ್ನು ಬಾರಿಸಿದ್ದಾರೆ.

5 / 5
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ

ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ

ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ

ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ

ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ

ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ

ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ

Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ

ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​