ಸಿಎಸ್​ಕೆ ತಂಡಕ್ಕೆ ಟೀಂ ಇಂಡಿಯಾದ ಮಾಜಿ ವೇಗಿ ಹೆಡ್ ಕೋಚ್

Updated on: Sep 21, 2026 | 7:18 PM

ಐಪಿಎಲ್ 2026 ರ ನಂತರ ಸ್ಟೀಫನ್ ಫ್ಲೆಮಿಂಗ್ ರಾಜೀನಾಮೆ ನೀಡಿದ ಕಾರಣ, ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ಮುಖ್ಯ ಕೋಚ್ ಸ್ಥಾನಕ್ಕೆ ಟೀಮ್ ಇಂಡಿಯಾದ ಮಾಜಿ ವೇಗದ ಬೌಲರ್ ಜಹೀರ್ ಖಾನ್ ಅವರನ್ನು ನೇಮಿಸಲಾಗಿದೆ. ಜಹೀರ್ ಖಾನ್ 2027ರ ಐಪಿಎಲ್ ಸೀಸನ್‌ನಿಂದ ಸಿಎಸ್‌ಕೆ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್ ಮತ್ತು ಮುಂಬೈ ಇಂಡಿಯನ್ಸ್‌ನಲ್ಲಿ ಕಾರ್ಯನಿರ್ವಹಿಸಿದ ಅನುಭವ ಹೊಂದಿರುವ ಜಹೀರ್, ಸಿಎಸ್‌ಕೆ ಯಶಸ್ಸಿಗೆ ನೆರವಾಗುವ ನಿರೀಕ್ಷೆಯಿದೆ.

1 / 5
ಐಪಿಎಲ್​ನ ಅತ್ಯಂತ ಯಶಸ್ವಿ ತಂಡಗಳಾದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ರದರ್ಶನ ಕಳೆದ ಕೆಲವು ಆವೃತ್ತಿಗಳಿಂದ ತೀರ ಕಳಪೆಯಾಗಿದೆ. ಹೀಗಾಗಿ ಮುಂದಿನ ಸೀಸನ್ ಆರಂಭಕ್ಕೂ ಮುನ್ನ ಸಿಎಸ್​ಕೆ ತಂಡದಲ್ಲಿ ಮಹತ್ತರ ಬದಲಾವಣೆಗಳಾಗುತ್ತಿವೆ. ಅದರಂತೆ ತಂಡದ ಹೆಡ್ ಕೋಚ್ ಸ್ಟೀಫನ್ ಫ್ಲೆಮಿಂಗ್ ರಾಜೀನಾಮೆಯಿಂದ ತೆರವಾಗಿದ್ದ ಜಾಗಕ್ಕೆ ಹೊಸ ಮುಖ್ಯ ಕೋಚ್​ ಆಗಮನವಾಗಿದೆ(PC-CSK).

ಐಪಿಎಲ್​ನ ಅತ್ಯಂತ ಯಶಸ್ವಿ ತಂಡಗಳಾದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ರದರ್ಶನ ಕಳೆದ ಕೆಲವು ಆವೃತ್ತಿಗಳಿಂದ ತೀರ ಕಳಪೆಯಾಗಿದೆ. ಹೀಗಾಗಿ ಮುಂದಿನ ಸೀಸನ್ ಆರಂಭಕ್ಕೂ ಮುನ್ನ ಸಿಎಸ್​ಕೆ ತಂಡದಲ್ಲಿ ಮಹತ್ತರ ಬದಲಾವಣೆಗಳಾಗುತ್ತಿವೆ. ಅದರಂತೆ ತಂಡದ ಹೆಡ್ ಕೋಚ್ ಸ್ಟೀಫನ್ ಫ್ಲೆಮಿಂಗ್ ರಾಜೀನಾಮೆಯಿಂದ ತೆರವಾಗಿದ್ದ ಜಾಗಕ್ಕೆ ಹೊಸ ಮುಖ್ಯ ಕೋಚ್​ ಆಗಮನವಾಗಿದೆ(PC-CSK).

2 / 5

ಐಪಿಎಲ್ ಆರಂಭದಿಂದಲೂ ಸಿಎಸ್​ಕೆ ತಂಡದ ಹೆಡ್ ಕೋಚ್ ಆಗಿದ್ದ ನ್ಯೂಜಿಲೆಂಡ್​ನ ಸ್ಟೀಫನ್ ಫ್ಲೆಮಿಂಗ್ 2026 ರ ಐಪಿಎಲ್ ಮುಗಿದ ಕೆಲವು ದಿನಗಳ ನಂತರ ತಮ್ಮ ಹುದ್ದೆಯಿಂದ ಕೆಳಗಿಳಿದಿದ್ದರು. ಹೀಗಾಗಿ ಅವರ ಬದಲಿಯಾಗಿ ಸಿಎಸ್​ಕೆ ಆಡಳಿತ ಮಂಡಳಿ ಯಾರನ್ನು ತಂದುಕೂರಿಸುತ್ತದೆ ಎಂಬುದು ಕುತೂಹಲ ಮೂಡಿಸಿತ್ತು. ಈ ಹುದ್ದೆಗೆ ಈ ಮೊದಲು ನಾನಾ ಹೆಸರುಗಳು ಕೇಳಿಬಂದಿದ್ದವು. ಆದರೀಗ ತಂಡದ ನೂತನ ಹೆಡ್ ಕೋಚ್ ಅನ್ನು ಸಿಎಸ್​ಕೆ ಫ್ರಾಂಚೈಸಿ ಘೋಷಿಸಿದೆ(PC-CSK).

3 / 5

ಟೀಂ ಇಂಡಿಯಾದ ಮಾಜಿ ವೇಗದ ಬೌಲರ್ ಜಹೀರ್ ಖಾನ್ ಅವರನ್ನು ಸಿಎಸ್​ಕೆ ತನ್ನ ತಂಡಕ್ಕೆ ಮುಖ್ಯ ಕೋಚ್ ಆಗಿ ನೇಮಿಸಿದೆ. ಹೀಗಾಗಿ ಜಹೀರ್ ಐಪಿಎಲ್ 2027 ರ ಸೀಸನ್‌ನಿಂದ ಚೆನ್ನೈ ತಂಡದ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ. ಐಪಿಎಲ್ 2026 ರ ನಂತರ ಸಿಎಸ್‌ಕೆ ತೊರೆದ ಸ್ಟೀಫನ್ ಫ್ಲೆಮಿಂಗ್ ಬದಲಿಗೆ ಜಹೀರ್ ಈ ಪಾತ್ರದಲ್ಲಿ ಕಾರ್ಯನಿರ್ವಹಿಸಲಿದ್ದಾರೆ(PC-PTI).

4 / 5

ಸೆಪ್ಟೆಂಬರ್ 21, ಸೋಮವಾರದಂದು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಈ ವಿಶೇಷ ಘೋಷಣೆ ಮಾಡಿದ್ದು, ಎಲ್ಲರನ್ನೂ ಅಚ್ಚರಿಗೊಳಿಸಿದೆ. ಸಿಎಸ್‌ಕೆ ತನ್ನ ಪೋಸ್ಟ್‌ನಲ್ಲಿ ‘ಈಗ ಎಡಗೈ ಬೌಲರ್‌ನ ಸರದಿ. ಚೆನ್ನೈ ಸೂಪರ್ ಕಿಂಗ್ಸ್‌ನ ಮುಖ್ಯ ಕೋಚ್ ಆಗಿ ಜಹೀರ್ ಖಾನ್ ಅವರನ್ನು ಸ್ವಾಗತಿಸುತ್ತೇನೆ’ ಎಂದು ಬರೆದುಕೊಂಡಿದೆ(PC-PTI).

5 / 5

ಕಳೆದ ಸೀಸನ್​ನಲ್ಲಿ ಜಹೀರ್ ಲಕ್ನೋ ಸೂಪರ್ ಜೈಂಟ್ಸ್ ತಂಡದ ಭಾಗವಾಗಿದ್ದರು, ಅಲ್ಲಿ ಅವರು ಮಾರ್ಗದರ್ಶಕರಾಗಿ ಸೇವೆ ಸಲ್ಲಿಸಿದ್ದರು. ಇದಲ್ಲದೆ, ಅವರು ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯಲ್ಲೂ ಕ್ರಿಕೆಟ್ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು. ಇದರರ್ಥ ಜಹೀರ್ ತಂಡದ ನಿರ್ವಹಣೆ ಮತ್ತು ಮಾರ್ಗದರ್ಶಕತ್ವದಲ್ಲಿ ಅನುಭವ ಹೊಂದಿದ್ದಾರೆ. ಇದು ಅವರಿಗೆ ಕೋಚ್ ಆಗಿ ಉಪಯುಕ್ತವಾಗುತ್ತದೆಯೇ ಎಂಬುದು ಭವಿಷ್ಯದಲ್ಲಿ ಬಹಿರಂಗಗೊಳ್ಳುತ್ತದೆ(PC-PTI).

ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Loading...
Unable to load recommendations.
Follow Us