
ನ್ಯೂಜಿಲೆಂಡ್ ಆಲ್ ರೌಂಡರ್ ಡ್ಯಾರಿಲ್ ಮಿಚೆಲ್ ಇಂಗ್ಲೆಂಡ್ ವಿರುದ್ಧ ಉತ್ತಮ ಪ್ರದರ್ಶನ ಮುಂದುವರಿಸಿದ್ದಾರೆ. ಈ ಬಲಗೈ ಬ್ಯಾಟ್ಸ್‌ಮನ್ ಮೂರನೇ ಟೆಸ್ಟ್‌ನಲ್ಲೂ ಅದ್ಭುತ ಬ್ಯಾಟಿಂಗ್ ಮಾಡಿ ಶತಕ ಗಳಿಸಿದರು. ಹೆಡಿಂಗ್ಲಿ ಟೆಸ್ಟ್‌ನ ಎರಡನೇ ದಿನದಂದು, ಡ್ಯಾರಿಲ್ ಮಿಚೆಲ್ ಅದ್ಭುತ ಸಿಕ್ಸರ್ ಬಾರಿಸುವ ಮೂಲಕ ತಮ್ಮ ನಾಲ್ಕನೇ ಟೆಸ್ಟ್ ಶತಕವನ್ನು ಪೂರ್ಣಗೊಳಿಸಿದರು.

ಈ ಸರಣಿಯಲ್ಲಿ ಡ್ಯಾರಿಲ್ ಮಿಚೆಲ್ ಸತತ ಮೂರನೇ ಶತಕ ಗಳಿಸಿದ್ದಾರೆ. ಇಂಗ್ಲೆಂಡ್ನಲ್ಲಿ ಈ ಸಾಧನೆ ಮಾಡಿದ ಮೊದಲ ಕಿವೀಸ್ ಆಟಗಾರ ಎನಿಸಿಕೊಂಡಿದ್ದಾರೆ. ಡೆರಿಲ್ ಮಿಚೆಲ್ ಲಾರ್ಡ್ಸ್‌ನಲ್ಲಿ 108, ಟ್ರೆಂಟ್‌ಬ್ರಿಡ್ಜ್‌ನಲ್ಲಿ 190 ಮತ್ತು ಈಗ ಹೆಡಿಂಗ್ಲಿಯಲ್ಲಿ ಅವರ ಬ್ಯಾಟ್ ಶತಕ ಗಳಿಸಿದೆ.



Published On - 7:05 pm, Fri, 24 June 22