AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರೋಬ್ಬರಿ 46 ವರ್ಷಗಳ ಬಳಿಕ ಅಗ್ರಸ್ಥಾನಕ್ಕೇರಿದ ನ್ಯೂಝಿಲೆಂಡ್ ಬ್ಯಾಟರ್..!

ICC ODI Batting Rankings: ಐಸಿಸಿ ಪ್ರಕಟಿಸಿರುವ ಏಕದಿನ ಬ್ಯಾಟರ್​ಗಳ ನೂತನ ಪಟ್ಟಿಯಲ್ಲಿ ಟಾಪ್-5 ನಲ್ಲಿ ಟೀಮ್ ಇಂಡಿಯಾದ ಮೂವರು ಬ್ಯಾಟರ್​ಗಳು ಕಾಣಿಸಿಕೊಂಡಿದ್ದಾರೆ. ಇದಾಗ್ಯೂ ಅಗಸ್ಥಾನದಲ್ಲಿ ಕಾಣಿಸಿಕೊಂಡಿರುವುದು ನ್ಯೂಝಿಲೆಂಡ್​​ನ ಡೇರಿಲ್ ಮಿಚೆಲ್. 782 ಅಂಕಗಳೊಂದಿಗೆ ಡೇರಿಲ್ ಮಿಚೆಲ್ ರೋಹಿತ್ ಶರ್ಮಾ (781) ಅವರನ್ನು ಹಿಂದಿಕ್ಕಿದ್ದಾರೆ.

ಝಾಹಿರ್ ಯೂಸುಫ್
|

Updated on: Nov 19, 2025 | 5:55 PM

Share
ಐಸಿಸಿ ಏಕದಿನ ಬ್ಯಾಟರ್​ಗಳ ನೂತನ ರ‍್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ರೋಹಿತ್ ಶರ್ಮಾ ಅವರನ್ನು ಹಿಂದಿಕ್ಕಿ ಅಗ್ರಸ್ಥಾನ ಅಲಂಕರಿಸಿರುವುದು ನ್ಯೂಝಿಲೆಂಡ್ ಬ್ಯಾಟರ್ ಡೇರಿಲ್ ಮಿಚೆಲ್ (Daryl Mitchell). ಇದರೊಂದಿಗೆ ಕಿವೀಸ್ ಬ್ಯಾಟರ್​ಗಳ ನಾಲ್ಕು ದಶಕಗಳ ಕನಸೊಂದು ಈಡೇರಿದಂತಾಗಿದೆ.

1 / 7
ಅಂದರೆ ಕಳೆದ 46 ವರ್ಷಗಳಲ್ಲಿ ನ್ಯೂಝಿಲೆಂಡ್​ನ ಯಾವುದೇ ಬ್ಯಾಟರ್ ಏಕದಿನ ಬ್ಯಾಟ್ಸ್​​ಮನ್​​ಗಳ ಶ್ರೇಯಾಂಕ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿರಲಿಲ್ಲ. 1979 ರಲ್ಲಿ ಗ್ಲೆನ್ ಟರ್ನರ್ ಮೊದಲ ಸ್ಥಾನದಲ್ಲಿ ಕಾಣಿಸಿಕೊಂಡಿದ್ದೇ ಕೊನೆ. ಇದಾದ ಬಳಿಕ ನಾಥನ್ ಆಸ್ಟ್ಲೆ, ರಾಸ್ ಟೇಲರ್ ಹಾಗೂ ಕೇನ್ ವಿಲಿಯಮ್ಸನ್ ಟಾಪ್-3 ನಲ್ಲಿ ಕಾಣಿಸಿಕೊಂಡರೂ ಮೊದಲ ಸ್ಥಾನಕ್ಕೇರಲು ಸಾಧ್ಯವಾಗಿರಲಿಲ್ಲ.

2 / 7
ಇದೀಗ ಬರೋಬ್ಬರಿ 46 ವರ್ಷಗಳ ಬಳಿಕ ನ್ಯೂಝಿಲೆಂಡ್ ದಾಂಡಿಗ ಡೇರಿಲ್ ಮಿಚೆಲ್ ಏಕದಿನ ಬ್ಯಾಟರ್​ಗಳ ರ‍್ಯಾಂಕಿಂಗ್ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದ್ದಾರೆ. ಈ ಮೂಲಕ ಐಸಿಸಿ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಕಾಣಿಸಿಕೊಂಡ ನ್ಯೂಝಿಲೆಂಡ್​ನ 2ನೇ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ.

3 / 7
ಇನ್ನು ಏಕದಿನ ಬ್ಯಾಟರ್​ಗಳ ನೂತನ ರ‍್ಯಾಂಕಿಂಗ್ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿ ರೋಹಿತ್ ಶರ್ಮಾ ಕಾಣಿಸಿಕೊಂಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಭರ್ಜರಿ ಪ್ರದರ್ಶನ ನೀಡಿ ಅಗ್ರಸ್ಥಾನಕ್ಕೇರಿದ್ದ ಹಿಟ್​ಮ್ಯಾನ್ ಈ ಬಾರಿ ಒಂದು ಸ್ಥಾನ ಕುಸಿತ ಕಂಡಿದ್ದು, ಒಟ್ಟು 781 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ.

4 / 7
ಮೂರನೇ ಸ್ಥಾನದಲ್ಲಿ ಅಫ್ಘಾನಿಸ್ತಾನದ ಯುವ ದಾಂಡಿಗ ಇಬ್ರಾಹಿಂ ಝದ್ರಾನ್ ಕಾಣಿಸಿಕೊಂಡಿದ್ದಾರೆ. ಬಾಂಗ್ಲಾದೇಶ್ ವಿರುದ್ಧದ ಸರಣಿಯಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ಝದ್ರಾನ್ ಒಟ್ಟು 764 ಅಂಕಗಳೊಂದಿಗೆ ಐಸಿಸಿಯ ನೂತನ ಶ್ರೇಯಾಂಕ ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದಿದ್ದಾರೆ.

5 / 7
ನಾಲ್ಕನೇ ಸ್ಥಾನದಲ್ಲಿ ಭಾರತ ಏಕದಿನ ತಂಡದ ನಾಯಕ ಶುಭ್​​ಮನ್ ಗಿಲ್ ಇದ್ದಾರೆ. ಚಾಂಪಿಯನ್ ಟ್ರೋಫಿ ಟೂರ್ನಿಯ ಬೆನ್ನಲ್ಲೇ ಅಗ್ರಸ್ಥಾನಕ್ಕೇರಿದ್ದ ಗಿಲ್ ಆಸ್ಟ್ರೇಲಿಯಾ ಸರಣಿಯಲ್ಲಿ ವಿಫಲರಾಗಿದ್ದರು. ಅದರ ಪರಿಣಾಮ ಇದೀಗ 745 ಅಂಕಗಳೊಂದಿಗೆ ನಾಲ್ಕನೇ ಸ್ಥಾನಕ್ಕೆ ಕುಸಿದಿದ್ದಾರೆ.

6 / 7
ಇನ್ನು ಐದನೇ ಶ್ರೇಯಾಂಕದಲ್ಲಿ ಕಾಣಿಸಿಕೊಂಡಿರುವುದು ವಿರಾಟ್ ಕೊಹ್ಲಿ. ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಮೂರನೇ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಸಿಡಿಸಿದ್ದ ಕೊಹ್ಲಿ ಏಕದಿನ ಬ್ಯಾಟರ್​ಗಳ ಶ್ರೇಯಾಂಕ ಪಟ್ಟಿಯಲ್ಲಿ ಒಟ್ಟು 725 ಅಂಕಗಳೊಂದಿಗೆ ಐದನೇ ಸ್ಥಾನವನ್ನು ಅಲಂಕರಿಸಿದ್ದಾರೆ.

7 / 7
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ

ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ

ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ

ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ

ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ

ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು

ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ

ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು

ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್

ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?