AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

David Miller: ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಡೇವಿಡ್ ಮಿಲ್ಲರ್

David Miller: ಸೌತ್ ಆಫ್ರಿಕಾ ತಂಡದ ಸ್ಟಾರ್ ಬ್ಯಾಟರ್ ಡೇವಿಡ್ ಮಿಲ್ಲರ್ ಐಪಿಎಲ್​ನಲ್ಲಿ ಗುಜರಾತ್ ಟೈಟಾನ್ಸ್ ತಂಡದ ಪರ ಕಣಕ್ಕಿಳಿಯಲಿದ್ದಾರೆ. ಇದುವರೆಗೆ 121 ಐಪಿಎಲ್ ಪಂದ್ಯಗಳನ್ನಾಡಿರುವ ಕಿಲ್ಲರ್ ಮಿಲ್ಲರ್ ಖ್ಯಾತಿಯ ಡೇವಿಡ್ 2714 ರನ್ ಕಲೆಹಾಕಿದ್ದಾರೆ. ಈ ವೇಳೆ 1 ಶತಕ ಹಾಗೂ 12 ಅರ್ಧಶತಕಗಳನ್ನು ಬಾರಿಸಿ ಮಿಂಚಿದ್ದರು.

TV9 Web
| Edited By: |

Updated on: Feb 08, 2024 | 9:32 AM

Share
ಸೌತ್ ಆಫ್ರಿಕಾದ ಸ್ಟಾರ್ ಬ್ಯಾಟರ್ ಡೇವಿಡ್ ಮಿಲ್ಲರ್ (David Miller) ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಎಸ್​ಎಟಿ20 ಲೀಗ್​ನ ಎಲಿಮಿನೇಟರ್ ಪಂದ್ಯದಲ್ಲಿ ಜೋಬರ್ಗ್​ ಸೂಪರ್ ಕಿಂಗ್ಸ್​ ವಿರುದ್ಧ ಮಿಲ್ಲರ್ 47 ರನ್​​ ಬಾರಿಸಿದ್ದರು. ಈ 47 ರನ್​ಗಳೊಂದಿಗೆ ಟಿ20 ಕ್ರಿಕೆಟ್​ನಲ್ಲಿ 10 ಸಾವಿರ ರನ್​ಗಳನ್ನು ಪೂರೈಸಿದ್ದಾರೆ.

1 / 6
ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ 10 ಸಾವಿರ ರನ್ ಕಲೆಹಾಕಿದ ಸೌತ್ ಆಫ್ರಿಕಾದ ಮೊದಲ ಬ್ಯಾಟರ್ ಎಂಬ ದಾಖಲೆಯನ್ನು ಡೇವಿಡ್ ಮಿಲ್ಲರ್ ತಮ್ಮದಾಗಿಸಿಕೊಂಡಿದ್ದಾರೆ. ಹಾಗೆಯೇ ಈ ಸಾಧನೆ ಮಾಡಿದ ವಿಶ್ವದ 12ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

2 / 6
ಸೌತ್ ಆಫ್ರಿಕಾ, ಗುಜರಾತ್ ಟೈಟಾನ್ಸ್, ಪಾರ್ಲ್ ರಾಯಲ್ಸ್ ಸೇರಿದಂತೆ ವಿವಿಧ ತಂಡಗಳ ಪರ ಟಿ20 ಕ್ರಿಕೆಟ್​ನಲ್ಲಿ ಕಣಕ್ಕಿಳಿದಿರುವ ಡೇವಿಡ್ ಮಿಲ್ಲರ್ ಇದುವರೆಗೆ 423 ಇನಿಂಗ್ಸ್ ಆಡಿದ್ದಾರೆ. ಈ ವೇಳೆ 4 ಶತಕ ಹಾಗೂ 45 ಅರ್ಧಶತಕಗಳೊಂದಿಗೆ ಒಟ್ಟು 10019 ರನ್ ಕಲೆಹಾಕಿ 10 ಸಾವಿರ ರನ್ ಪೂರೈಸಿದ ವಿಶೇಷ ಸಾಧಕರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

3 / 6
ಇನ್ನು ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆ ಯೂನಿವರ್ಸ್ ಬಾಸ್ ಕ್ರಿಸ್ ಗೇಲ್ ಹೆಸರಿನಲ್ಲಿದೆ. ವೆಸ್ಟ್ ಇಂಡೀಸ್ ಪರ ಮತ್ತು ಇತರೆ ಲೀಗ್​ಗಳಲ್ಲಿ ಒಟ್ಟು 455 ಪಂದ್ಯಗಳನ್ನಾಡಿರುವ ಗೇಲ್ 22 ಶತಕ ಹಾಗೂ 88 ಅರ್ಧಶತಕಗಳೊಂದಿಗೆ ಒಟ್ಟು 14562 ರನ್ ಕಲೆಹಾಕಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

4 / 6
ಹಾಗೆಯೇ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಭಾರತೀಯ ವಿರಾಟ್ ಕೊಹ್ಲಿ. ಟೀಮ್ ಇಂಡಿಯಾ ಮತ್ತು ಆರ್​ಸಿಬಿ ಪರ ಒಟ್ಟು 359 ಇನಿಂಗ್ಸ್ ಆಡಿರುವ ಕೊಹ್ಲಿ 8 ಶತಕ ಹಾಗೂ 91 ಅರ್ಧಶತಕಗಳೊಂದಿಗೆ 11994 ರನ್ ಕಲೆಹಾಕಿದ್ದಾರೆ.

5 / 6
ಇದೀಗ ಸೌತ್ ಆಫ್ರಿಕಾ ಪರ ಟಿ20 ಕ್ರಿಕೆಟ್​ನಲ್ಲಿ 10 ಸಾವಿರ ರನ್ ಪೂರೈಸಿದ ಮೊದಲ ಬ್ಯಾಟರ್ ಆಗಿ ಡೇವಿಡ್ ಮಿಲ್ಲರ್ ಹೊರಹೊಮ್ಮಿದ್ದಾರೆ. ಅಂದಹಾಗೆ ಮಿಲ್ಲರ್ ಈ ಬಾರಿಯ ಐಪಿಎಲ್​ನಲ್ಲಿ ಗುಜರಾತ್ ಟೈಟಾನ್ಸ್ ಪರ ಕಣಕ್ಕಿಳಿಯಲಿದ್ದಾರೆ. ಅಲ್ಲದೆ ಈ ಟೂರ್ನಿಯಲ್ಲಿ ಇನ್ನು 296 ರನ್​​ಗಳಿಸಿದರೆ ಐಪಿಎಲ್​ನಲ್ಲಿ 3 ಸಾವಿರ ರನ್ ಪೂರೈಸಿದ ವಿದೇಶಿ ಬ್ಯಾಟರ್​ಗಳ ಪಟ್ಟಿಗೂ ಕಿಲ್ಲರ್ ಮಿಲ್ಲರ್ ಹೆಸರು ಸೇರ್ಪಡೆಯಾಗಲಿದೆ.

6 / 6
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!

ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು

ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!

ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ

ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!

ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ

ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!

ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ

ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ

ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್