ಸೌತ್ ಆಫ್ರಿಕಾ ಹಾಗೂ ಇತರೆ ಹಲವು ಫ್ರಾಂಚೈಸಿ ಲೀಗ್ ತಂಡಗಳ ಪರ ಕಣಕ್ಕಿಳಿದಿರುವ ಡೇವಿಡ್ ಮಿಲ್ಲರ್ 513 ಟಿ20 ಪಂದ್ಯಗಳನ್ನಾಡಿದ್ದು, ಈ ವೇಳೆ ಆಡಿದ 468 ಇನಿಂಗ್ಸ್ಗಳಲ್ಲಿ 11046 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ 11 ಸಾವಿರ ರನ್ಗಳನ್ನು ಪೂರೈಸಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ಸೌತ್ ಆಫ್ರಿಕಾದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.