ಈ ವೇಳೆ ಕ್ರೀಸ್ಗೆ ಆಗಮಿಸಿದ ಡೇವಿಡ್ ಮಿಲ್ಲರ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಮೈದಾನದ ಮೂಲೆ ಮೂಲೆಗೆ ಸಿಕ್ಸ್ ಫೋರ್ಗಳ ಸುರಿಮಳೆಗೈದ ಮಿಲ್ಲರ್ ಕೇವಲ 17 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅಲ್ಲದೆ 5 ಭರ್ಜರಿ ಸಿಕ್ಸ್ ಹಾಗೂ 3 ಫೋರ್ಗಳೊಂದಿಗೆ ಅಜೇಯ 50 ರನ್ ಚಚ್ಚುವ ಮೂಲಕ 4.2 ಓವರ್ಗಳಲ್ಲಿ ಬಾರ್ಬಡೋಸ್ ರಾಯಲ್ಸ್ ತಂಡವನ್ನು ಗೆಲುವಿನ ದಡ ಸೇರಿಸಿದರು. ಈ ಗೆಲುವಿನೊಂದಿಗೆ ಬಾರ್ಬಡೋಸ್ ರಾಯಲ್ಸ್ ಮುಂದಿನ ಹಂತಕ್ಕೇರಿದರೆ, ಟ್ರಿನ್ಬಾಗೊ ನೈಟ್ ರೈಡರ್ಸ್ ಸಿಪಿಎಲ್ 2024 ರಿಂದ ಹೊರಬಿದ್ದಿದೆ.