ಏಕದಿನ ವಿಶ್ವಕಪ್ನಲ್ಲಿ ಸಚಿನ್- ಡಿವಿಲಿಯರ್ಸ್ ದಾಖಲೆ ಮುರಿದ ವಾರ್ನರ್..!
ICC ODI World Cup 2023: ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಏಕದಿನ ವಿಶ್ವಕಪ್ನ ಮೊದಲ ಪಂದ್ಯದಲ್ಲಿ ಆಸೀಸ್ ತಂಡದ ಆರಂಭಿಕ ಬ್ಯಾಟರ್ ಡೇವಿಡ್ ವಾರ್ನರ್ 41 ರನ್ಗಳ ಇನ್ನಿಂಗ್ಸ್ ಆಡುವ ಮೂಲಕ ಸಚಿನ್ ತೆಂಡೂಲ್ಕರ್ ದಾಖಲೆ ಮುರಿದಿದ್ದಾರೆ.
1 / 8
ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಏಕದಿನ ವಿಶ್ವಕಪ್ನ ಮೊದಲ ಪಂದ್ಯದಲ್ಲಿ ಆಸೀಸ್ ತಂಡದ ಆರಂಭಿಕ ಬ್ಯಾಟರ್ ಡೇವಿಡ್ ವಾರ್ನರ್ 41 ರನ್ಗಳ ಇನ್ನಿಂಗ್ಸ್ ಆಡುವ ಮೂಲಕ ಸಚಿನ್ ತೆಂಡೂಲ್ಕರ್ ದಾಖಲೆ ಮುರಿದಿದ್ದಾರೆ.
2 / 8
ಟೀಂ ಇಂಡಿಯಾ ವಿರುದ್ಧ 52 ಎಸೆತಗಳಲ್ಲಿ 6 ಬೌಂಡರಿ ಸಹಿತ 41 ರನ್ ಬಾರಿಸಿದ ಡೇವಿಡ್ ವಾರ್ನರ್, ಏಕದಿನ ವಿಶ್ವಕಪ್ನಲ್ಲಿ ಅತಿ ಕಡಿಮೆ ಇನ್ನಿಂಗ್ಸ್ನಲ್ಲಿ ಸಾವಿರ ರನ್ ಪೂರೈಸಿದ ದಾಖಲೆ ನಿರ್ಮಿಸಿದ್ದಾರೆ.
3 / 8
ಡೇವಿಡ್ ವಾರ್ನರ್ ಇದುವರೆಗೆ ಏಕದಿನ ವಿಶ್ವಕಪ್ನಲ್ಲಿ 19 ಇನ್ನಿಂಗ್ಸ್ಗಳನ್ನು ಆಡಿದ್ದು, 1000 ರನ್ ಪೂರೈಸಿದ್ದಾರೆ. ಈ ವಿಚಾರದಲ್ಲಿ ಭಾರತ ಸಚಿನ್ ತೆಂಡೂಲ್ಕರ್ ಹಾಗೂ ದಕ್ಷಿಣ ಆಫ್ರಿಕಾದ ಮಾಜಿ ಬ್ಯಾಟರ್ ಡಿವಿಲಿಯರ್ಸ್ ದಾಖಲೆಯನ್ನು ಮುರಿದಿದ್ದಾರೆ.
4 / 8
ಈ ಹಿಂದೆ ಏಕದಿನ ವಿಶ್ವಕಪ್ನಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಮತ್ತು ಎಬಿ ಡಿವಿಲಿಯರ್ಸ್ ತಲಾ 20 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದರು.
5 / 8
ಇನ್ನು ಭಾರತದ ವಿರುದ್ಧದ ಪಂದ್ಯಕ್ಕೂ ಮುನ್ನ ಈ ಸಾಧನೆ ಮಾಡಲು 8 ರನ್ಗಳ ಅಗತ್ಯವಿತ್ತು. ಇಂದು ಟೀಂ ಇಂಡಿಯಾ ವಿರುದ್ಧ ಆರಂಭಿಕನಾಗಿ ಕಣಕ್ಕಿಳಿದಿದ್ದ ಡೇವಿಡ್ ವಾರ್ನರ್, ಹಾರ್ದಿಕ್ ಪಾಂಡ್ಯ ಅವರ ಓವರ್ನಲ್ಲಿ ಬೌಂಡರಿ ಬಾರಿಸುವ ಮೂಲಕ ಈ ಮೈಲಿಗಲ್ಲನ್ನು ಸಾಧಿಸಿದರು.
6 / 8
ಟೆಸ್ಟ್ ಕ್ರಿಕೆಟ್‌ನಲ್ಲಿ ತಮ್ಮ ಕಳಪೆ ಫಾರ್ಮ್‌ನಿಂದ ಬಳಲುತ್ತಿರುವ ವಾರ್ನರ್, ಏಕದಿನದಲ್ಲಿ ಮಾತ್ರ ತಮ್ಮ ಅದ್ಭುತ ಪ್ರದರ್ಶನವನ್ನು ಮುಂದುವರೆಸಿದ್ದಾರೆ. ಈ ಸ್ವರೂಪದಲ್ಲಿ ಕೊನೆಯ ಏಳು ಇನ್ನಿಂಗ್ಸ್‌ಗಳಲ್ಲಿ ವಾರ್ನರ್ ಶತಕ ಐದು ಅರ್ಧಶತಕಗಳನ್ನೂ ಸಿಡಿಸಿದ್ದಾರೆ.
7 / 8
ಭಾರತ ತಂಡ: ರೋಹಿತ್ ಶರ್ಮಾ(ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್(ಡಬ್ಲ್ಯೂ), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
8 / 8
ಆಸ್ಟ್ರೇಲಿಯಾ ತಂಡ: ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಮಾರ್ನಸ್ ಲಬುಶೇನ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ, ಗ್ಲೆನ್ ಮ್ಯಾಕ್ಸ್‌ವೆಲ್, ಪ್ಯಾಟ್ ಕಮಿನ್ಸ್(ನಾಯಕ), ಮಿಚೆಲ್ ಸ್ಟಾರ್ಕ್, ಜೋಶ್ ಹ್ಯಾಜಲ್‌ವುಡ್, ಆಡಮ್ ಝಂಪಾ