AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

David Warner: ಸಚಿನ್ ತೆಂಡೂಲ್ಕರ್ ವಿಶ್ವ ದಾಖಲೆ ಸರಿಗಟ್ಟಿದ್ದ ಡೇವಿಡ್ ವಾರ್ನರ್

David Warner - Sachin Tendulkar: ಈ ಡಬಲ್ ಸೆಂಚುರಿಯ ಮೂಲಕ​ ಕ್ರಿಕೆಟ್ ದೇವರು ಮಾಸ್ಟರ್ ಬ್ಲಾಸ್ಟರ್​ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ಅಪರೂಪದ ವಿಶ್ವ ದಾಖಲೆಯನ್ನು ಕೂಡ ವಾರ್ನರ್ ಸರಿಗಟ್ಟಿದ್ದಾರೆ.

TV9 Web
| Edited By: |

Updated on:Dec 27, 2022 | 9:38 PM

Share
ಮೆಲ್ಬೋರ್ನ್​ನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಬ್ಯಾಟ್ಸ್​ಮನ್ ಡೇವಿಡ್ ವಾರ್ನರ್ ಭರ್ಜರಿ ದ್ವಿಶತಕ ಸಿಡಿಸಿದ್ದಾರೆ. ಈ ದ್ವಿಶತಕದೊಂದಿಗೆ ತಮ್ಮ 100ನೇ ಟೆಸ್ಟ್ ಪಂದ್ಯದಲ್ಲಿ ಡಬಲ್ ಸೆಂಚುರಿ ಬಾರಿಸಿದ ವಿಶ್ವದ 2ನೇ ಬ್ಯಾಟರ್ ಎಂಬ ದಾಖಲೆಯನ್ನು ವಾರ್ನರ್ ತಮ್ಮದಾಗಿಸಿಕೊಂಡಿದ್ದಾರೆ.

1 / 6
ಇದಕ್ಕೂ ಮುನ್ನ ಈ ದಾಖಲೆ ಬರೆದಿದ್ದು ಇಂಗ್ಲೆಂಡ್​ನ ಜೋ ರೂಟ್. 2021 ರಲ್ಲಿ 100ನೇ ಟೆಸ್ಟ್ ಪಂದ್ಯವಾಡಿದ್ದ ರೂಟ್ ಆ ಮ್ಯಾಚ್​ನಲ್ಲಿ ದ್ವಿಶತಕ ಬಾರಿಸುವ ಮೂಲಕ ವಿಶೇಷ ದಾಖಲೆ ಬರೆದಿದ್ದರು. ಇದೀಗ ಈ ಸಾಧನೆಯನ್ನು ಡೇವಿಡ್ ವಾರ್ನರ್ ಸರಿಗಟ್ಟಿದ್ದಾರೆ.

2 / 6
ಅಷ್ಟೇ ಅಲ್ಲದೆ ಈ ಡಬಲ್ ಸೆಂಚುರಿಯ ಮೂಲಕ​ ಕ್ರಿಕೆಟ್ ದೇವರು ಮಾಸ್ಟರ್ ಬ್ಲಾಸ್ಟರ್​ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ಅಪರೂಪದ ವಿಶ್ವ ದಾಖಲೆಯನ್ನು ಕೂಡ ವಾರ್ನರ್ ಸರಿಗಟ್ಟಿದ್ದಾರೆ.

3 / 6
ಸೌತ್ ಆಫ್ರಿಕಾ ವಿರುದ್ಧ ಶತಕ ಪೂರೈಸುವುದರೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಆರಂಭಿಕನಾಗಿ ಅತ್ಯಧಿಕ ಶತಕ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಇದೀಗ ವಾರ್ನರ್ ಅಗ್ರಸ್ಥಾನಕ್ಕೇರಿದ್ದಾರೆ. ಅದು ಕೂಡ ಸಚಿನ್ ಅವರ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದೇ ಇಲ್ಲಿ ವಿಶೇಷ.

4 / 6
ಸಚಿನ್ ತೆಂಡೂಲ್ಕರ್ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ (ಏಕದಿನ) ಆರಂಭಿಕರಾಗಿ ಒಟ್ಟು 45 ಶತಕಗಳನ್ನು ಬಾರಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು. ಇದೀಗ ಸೌತ್ ಆಫ್ರಿಕಾ ವಿರುದ್ಧದ ಶತಕದೊಂದಿಗೆ ವಾರ್ನರ್ ಕೂಡ ಆಸ್ಟ್ರೇಲಿಯಾ ಪರ​ ಆರಂಭಿಕರಾಗಿ ಕಣಕ್ಕಿಳಿದು ಒಟ್ಟು 45 ಶತಕಗಳನ್ನು ಪೂರೈಸಿದ್ದಾರೆ. ಈ ಮೂಲಕ ಸಚಿನ್ ಹೆಸರಿನಲಿದ್ದ ವಿಶ್ವ ದಾಖಲೆಯನ್ನು ಸರಿಗಟ್ಟಿದ್ದಾರೆ.

5 / 6
ಇನ್ನು ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿ ವೆಸ್ಟ್​ ಇಂಡೀಸ್​ನ ಮಾಜಿ ಆಟಗಾರ ಕ್ರಿಸ್ ಗೇಲ್ ಇದ್ದಾರೆ. ಗೇಲ್ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಆರಂಭಿಕರಾಗಿ 42 ಸೆಂಚುರಿ ಸಿಡಿಸಿದ್ದಾರೆ. ಇದೀಗ ಆರಂಭಿಕರಾಗಿ 45 ಶತಕ ಬಾರಿಸಿರುವ ವಾರ್ನರ್ ಇನ್ನೊಂದು ಶತಕ ಸಿಡಿಸಿದರೆ ಹೊಸ ವಿಶ್ವ ದಾಖಲೆ ನಿರ್ಮಾಣವಾಗಲಿದೆ.

6 / 6

Published On - 3:53 pm, Tue, 27 December 22

TV9 Web
TV9 Web

TV9 Kannada

Read More
Follow Us
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!

ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ

‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್

ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ

ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!

ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ

ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್

ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ

‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು

'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ