David Warner: ಕಿಂಗ್ ಕೊಹ್ಲಿಯ ವಿಶ್ವ ದಾಖಲೆ ಸರಿಗಟ್ಟಿದ ಡೇವಿಡ್ ವಾರ್ನರ್
TV9 Web | Updated By: ಝಾಹಿರ್ ಯೂಸುಫ್
Updated on:
Feb 10, 2024 | 7:18 AM
David Warner Records: ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಆಸ್ಟ್ರೇಲಿಯಾ ತಂಡದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಹಲವು ದಾಖಲೆಗಳನ್ನು ಬರೆದಿದ್ದಾರೆ. ಅದರಲ್ಲಿ ಕೆಲ ದಾಖಲೆಗಳು ವಿಶ್ವ ದಾಖಲೆ ಎಂಬುದು ವಿಶೇಷ. ಹಾಗೆಯೇ ಈ ದಾಖಲೆಗಳ ಮೂಲಕ ವಾರ್ನರ್ ವಿರಾಟ್ ಕೊಹ್ಲಿ ಹೆಸರಿನಲ್ಲಿರುವ ವಿಶೇಷ ದಾಖಲೆಯನ್ನೂ ಕೂಡ ಸರಿಗಟ್ಟಿದ್ದಾರೆ.
1 / 7
ಹೋಬಾರ್ಟ್ನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಡೇವಿಡ್ ವಾರ್ನರ್ (David Warner) ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ದಾಖಲೆಗಳ ಸರದಾರ ವಿರಾಟ್ ಕೊಹ್ಲಿ ಹೆಸರಿನಲ್ಲಿರುವ ವಿಶೇಷ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.
2 / 7
ಅಂದರೆ ಈ ಪಂದ್ಯದ ಮೂಲಕ ಡೇವಿಡ್ ವಾರ್ನರ್ ಟಿ20 ಕ್ರಿಕೆಟ್ನಲ್ಲಿ 100 ಪಂದ್ಯಗಳನ್ನು ಪೂರೈಸಿದ್ದಾರೆ. ಇದರೊಂದಿಗೆ ಮೂರು ಸ್ವರೂಪಗಳಲ್ಲೂ 100 ಪಂದ್ಯಗಳನ್ನಾಡಿರುವ ವಿಶ್ವದ ಮೂರನೇ ಆಟಗಾರ ಎನಿಸಿಕೊಂಡಿದ್ದಾರೆ.
3 / 7
ಇದಕ್ಕೂ ಮುನ್ನ ವಿರಾಟ್ ಕೊಹ್ಲಿ ಮತ್ತು ನ್ಯೂಝಿಲೆಂಡ್ನ ರಾಸ್ ಟೇಲರ್ ಮಾತ್ರ ಈ ಸಾಧನೆ ಮಾಡಿದ್ದರು. ಇದೀಗ ಈ ಪಟ್ಟಿಗೆ ಮೂರನೇ ಆಟಗಾರನಾಗಿ ಡೇವಿಡ್ ವಾರ್ನರ್ ಎಂಟ್ರಿ ಕೊಟ್ಟಿದ್ದಾರೆ. ಅಲ್ಲದೆ ಆಸ್ಟ್ರೇಲಿಯಾ ಪರ ಈ ಸಾಧನೆ ಮಾಡಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೂ ವಾರ್ನರ್ ಪಾತ್ರರಾಗಿದ್ದಾರೆ.
4 / 7
ಹಾಗೆಯೇ ಈ ದಾಖಲೆ ಬರೆದ 2ನೇ ಸಕ್ರೀಯ ಆಟಗಾರ ಎನಿಸಿಕೊಂಡಿದ್ದಾರೆ. ಅಂದರೆ ಪ್ರಸ್ತುತ ಕ್ರಿಕೆಟಿಗರಲ್ಲಿ ವಿರಾಟ್ ಕೊಹ್ಲಿ ಮಾತ್ರ ಮೂರು ಸ್ವರೂಪಗಳಲ್ಲೂ 100ಕ್ಕಿಂತ ಹೆಚ್ಚು ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದಾರೆ. ಇದೀಗ ಡೇವಿಡ್ ವಾರ್ನರ್ ಕೂಡ ಈ ಸಾಧನೆ ಮಾಡುವ ಮೂಲಕ ಕಿಂಗ್ ಕೊಹ್ಲಿ ಹೆಸರಿನಲ್ಲಿರುವ ವಿಶೇಷ ದಾಖಲೆಯನ್ನು ಸರಿಗಟ್ಟಿದ್ದಾರೆ.
5 / 7
ಇನ್ನು ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ವಾರ್ನರ್ 36 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 12 ಫೋರ್ಗಳೊಂದಿಗೆ 70 ರನ್ ಬಾರಿಸಿ ಮಿಂಚಿದ್ದರು. ಈ ಮೂಲಕ ತವರಿನಲ್ಲಿ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಿಂದ 1000 ರನ್ ಪೂರೈಸಿದ ಮತ್ತೊಂದು ದಾಖಲೆಯನ್ನು ಕೂಡ ಡೇವಿಡ್ ವಾರ್ನರ್ ನಿರ್ಮಿಸಿದ್ದಾರೆ.
6 / 7
ಹಾಗೆಯೇ ಆಸ್ಟ್ರೇಲಿಯಾದಲ್ಲಿ ಟಿ20 ಕ್ರಿಕೆಟ್ನಲ್ಲಿ 2 ಸಾವಿರ ರನ್ ಪೂರೈಸಿದ ವಿಶೇಷ ದಾಖಲೆಯನ್ನು ಕೂಡ ವಾರ್ನರ್ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಇದಲ್ಲದೆ ಮೂರು ಸ್ವರೂಪಗಳಲ್ಲಿ 100ನೇ ಪಂದ್ಯದಲ್ಲಿ 50+ ಸ್ಕೋರ್ಗಳಿಸಿದ ವಿಶ್ವದ ಏಕೈಕ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ಡೇವಿಡ್ ವಾರ್ನರ್ ತಮ್ಮದಾಗಿಸಿಕೊಂಡಿದ್ದಾರೆ.
7 / 7
ಒಟ್ಟಿನಲ್ಲಿ 100ನೇ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಡೇವಿಡ್ ವಾರ್ನರ್ ಹಲವು ವಿಶ್ವ ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದು, ಈ ಮೂಲಕ ಮುಂಬರುವ ಟಿ20 ವಿಶ್ವಕಪ್ನಲ್ಲಿ ಕಣ್ಕಕಿಳಿಯುವುದನ್ನು ಖಚಿತಪಡಿಸಿಕೊಂಡಿದ್ದಾರೆ.