ಭಾರತದ ವಿರುದ್ಧ ಕಣಕ್ಕಿಳಿಯಲು ನಾನು ರೆಡಿ: ಕಂಬ್ಯಾಕ್ ಸೂಚನೆ ನೀಡಿದ ವಾರ್ನರ್

David Warner: ಆಸ್ಟ್ರೇಲಿಯಾ ಪರ 205 ಬಾರಿ ಇನಿಂಗ್ಸ್ ಆರಂಭಸಿರುವ ಡೇವಿಡ್ ವಾರ್ನರ್ ಒಟ್ಟು 8786 ರನ್ ಕಲೆಹಾಕಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾ ಪರ ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಬಾರಿಸಿದ ಆರಂಭಿಕ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದೀಗ ಆಸ್ಟ್ರೇಲಿಯಾ ತಂಡವು ಬದಲಿ ಆರಂಭಿಕ ಆಟಗಾರನ ಹುಡುಕಾಟದಲ್ಲಿದೆ.

ಝಾಹಿರ್ ಯೂಸುಫ್
|

Updated on: Oct 23, 2024 | 12:14 PM

ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿರುವ ಡೇವಿಡ್ ವಾರ್ನರ್ ಇದೀಗ ತಮ್ಮ ನಿವೃತ್ತಿಯನ್ನು ಹಿಂಪಡೆಯುವ ಸೂಚನೆ ನೀಡಿದ್ದಾರೆ. ಅದು ಕೂಡ ಭಾರತ ವಿರುದ್ಧದ ಪ್ರತಿಷ್ಠಿತ ಟೆಸ್ಟ್ ಸರಣಿ ಆಡಲು ಎಂಬುದೇ ವಿಶೇಷ. ಅಂದರೆ ಮುಂಬರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಆಯ್ಕೆಗೆ ತಾನು ಲಭ್ಯವಿರುವುದಾಗಿ ವಾರ್ನರ್ ತಿಳಿಸಿದ್ದಾರೆ.

1 / 6
ನಾನು ಮುಂದಿನ ಶೀಲ್ಡ್​ಫೀಲ್ಡ್​ ಟೂರ್ನಿ ಆಡಲು ಸಿದ್ಧನಿದ್ದೇನೆ. ಅಲ್ಲದೆ ಮುಂಬರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲೂ ಕಣಕ್ಕಿಳಿಯಲು ಬಯಸುತ್ತೇನೆ ಎಂದು ಡೇವಿಡ್ ವಾರ್ನರ್ ತಿಳಿಸಿದ್ದಾರೆ. ಈ ಮೂಲಕ ಆಸೀಸ್ ಆರಂಭಿಕ ದಾಂಡಿಗ ಟೆಸ್ಟ್ ಕ್ರಿಕೆಟ್​ಗೆ ಮರಳುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ.

2 / 6
ಡೇವಿಡ್ ವಾರ್ನರ್ ಇದೇ ವರ್ಷ ಜನವರಿ 6 ರಂದು ಸಿಡ್ನಿಯಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ ಟೆಸ್ಟ್​ ಪಂದ್ಯದ ಮೂಲಕ ದೀರ್ಘಾವಧಿಯ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಇದೀಗ ಮತ್ತೆ ಆಸ್ಟ್ರೇಲಿಯಾ ಟೆಸ್ಟ್ ತಂಡದಲ್ಲಿ ಆಡಲು ಬಯುಸುವುದಾಗಿ ತಿಳಿಸಿದ್ದಾರೆ. ಇದರ ಬೆನ್ನಲ್ಲೇ 37 ವರ್ಷದ ವಾರ್ನರ್ ಅವರನ್ನು ಕ್ರಿಕೆಟ್ ಆಸ್ಟ್ರೇಲಿಯಾ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೆ ಆಯ್ಕೆ ಮಾಡಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

3 / 6
ಏಕೆಂದರೆ ಡೇವಿಡ್ ವಾರ್ನರ್ ನಿರ್ಗಮನದ ಬಳಿಕ ಆಸ್ಟ್ರೇಲಿಯಾ ಬದಲಿ ಆರಂಭಿಕನ ಹುಡುಕಾಟದಲ್ಲಿದೆ. ಈ ಹಿಂದೆ ಉಸ್ಮಾನ್ ಖ್ವಾಜಾ ಜೊತೆ ಆರಂಭಿಕನಾಗಿ ಸ್ಟೀವ್ ಸ್ಮಿತ್ ಅವರನ್ನು ಕಣಕ್ಕಿಳಿಸಿದರೂ ನಿರೀಕ್ಷಿತ ಯಶಸ್ಸು ಸಾಧಿಸಿಲ್ಲ. ಹೀಗಾಗಿ ಸ್ಮಿತ್ ಬಾರ್ಡರ್-ಗವಾಸ್ಕರ್ ಸರಣಿಯಲ್ಲಿ ಮತ್ತೆ 4ನೇ ಕ್ರಮಾಂಕದಲ್ಲೇ ಬ್ಯಾಟ್ ಬೀಸಲಿದ್ದಾರೆ.

4 / 6
ಇತ್ತ ಆಸ್ಟ್ರೇಲಿಯಾ ತಂಡದ ಯಶಸ್ವಿ ಆರಂಭಿಕನಾಗಿ ಗುರುತಿಸಿಕೊಂಡಿರುವ ಡೇವಿಡ್ ವಾರ್ನರ್ ಅವರ ಪುನರಾಗಮನವು ತಂಡವನ್ನು ಬಲಿಷ್ಠಗೊಳಿಸುವುದರಲ್ಲಿ ಅನುಮಾನ ಇಲ್ಲ. ಹೀಗಾಗಿ 37 ವರ್ಷದ ಹಿರಿಯ ಆಟಗಾರನಿಗೆ ಕ್ರಿಕೆಟ್ ಆಸ್ಟ್ರೇಲಿಯಾ ಮತ್ತೆ ಅವಕಾಶ ನೀಡಲಿದೆಯಾ ಎಂಬುದೇ ಈಗ ಕುತೂಹಲ.

5 / 6
ಡೇವಿಡ್ ವಾರ್ನರ್ ಟೆಸ್ಟ್ ವೃತ್ತಿಜೀವನ: ಆಸ್ಟ್ರೇಲಿಯಾ ಪರ ಡೇವಿಡ್ ವಾರ್ನರ್ 112 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 205 ಇನಿಂಗ್ಸ್ ಆಡಿರುವ ಅವರು 3 ದ್ವಿಶತಕ, 26 ಶತಕ ಹಾಗೂ 37 ಅರ್ಧಶತಕಗಳೊಂದಿಗೆ ಒಟ್ಟು 8786 ರನ್ ಕಲೆಹಾಕಿದ್ದಾರೆ. ಇದೀಗ ಮತ್ತೆ ಟೆಸ್ಟ್ ಕ್ರಿಕೆಟ್​ಗೆ ಮರಳುವ ಇಚ್ಛೆಯನ್ನು ವ್ಯಕ್ತಪಡಿಸಿದ್ದು, ಅದರಂತೆ ಮುಂಬರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಾರ್ನರ್ ಕಾಣಿಸಿಕೊಳ್ಳಲಿದ್ದಾರಾ ಕಾದು ನೋಡಬೇಕಿದೆ.

6 / 6
Follow us
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ

ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ

ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ

ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ

70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್

ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್

ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್

ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ

‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್