David Warner: ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಡೇವಿಡ್ ವಾರ್ನರ್ ವಿದಾಯ

David Warner: ಡೇವಿಡ್ ವಾರ್ನರ್ ಮೂರು ಸ್ವರೂಪಗಳಲ್ಲೂ ವಿಶ್ವ ಚಾಂಪಿಯನ್ ತಂಡದ ಭಾಗವಾಗಿದ್ದರು. 2021 ರಲ್ಲಿ ಟಿ20 ವಿಶ್ವಕಪ್ ಗೆದ್ದ ಆಸ್ಟ್ರೇಲಿಯಾ ತಂಡದ ಭಾಗವಾಗಿದ್ದ ಡೇವಿಡ್ ವಾರ್ನರ್, 2023 ರಲ್ಲಿ ಏಕದಿನ ಮತ್ತು ಟೆಸ್ಟ್ ವಿಶ್ವ ಚಾಂಪಿಯನ್​ಶಿಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಹೀಗೆ ಮೂರು ಸ್ವರೂಪಗಳಲ್ಲೂ ಟ್ರೋಫಿ ಎತ್ತಿ ಹಿಡಿದ ಕೆಲವೇ ಕೆಲವು ಆಟಗಾರರಲ್ಲಿ ಡೇವಿಡ್ ವಾರ್ನರ್ ಕೂಡ ಒಬ್ಬರು.

|

Updated on:Jun 25, 2024 | 2:21 PM

T20 World Cup 2024: ಟಿ20 ವಿಶ್ವಕಪ್​ನಿಂದ ಆಸ್ಟ್ರೇಲಿಯಾ ತಂಡ ಹೊರಬಿದ್ದ ಬೆನ್ನಲ್ಲೇ ಡೇವಿಡ್ ವಾರ್ನರ್ (David Warner) ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಸೂಪರ್-8 ಸುತ್ತಿನ ನಿರ್ಣಾಯಕ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ದ ಆಸ್ಟ್ರೇಲಿಯಾ 24 ರನ್​ಗಳಿಂದ ಸೋಲನುಭವಿಸಿತ್ತು. ಈ ಸೋಲಿನೊಂದಿಗೆ ವಾರ್ನರ್ ತಮ್ಮ ಟಿ20 ಕೆರಿಯರ್ ಅಂತ್ಯಗೊಳಿಸಿದ್ದಾರೆ.

1 / 6
ಈ ಬಾರಿಯ ಟಿ20 ವಿಶ್ವಕಪ್​ಗೂ ಮುನ್ನ ಡೇವಿಡ್ ವಾರ್ನರ್ ನಿವೃತ್ತಿಯ ಸೂಚನೆ ನೀಡಿದ್ದರು. ಅಲ್ಲದೆ ಟಿ20 ವಿಶ್ವಕಪ್ ಗೆಲ್ಲುವ ಮೂಲಕ ಚುಟುಕು ಕ್ರಿಕೆಟ್ ಕೆರಿಯರ್ ಅಂತ್ಯಗೊಳಿಸಲು ನಿರ್ಧರಿಸಿದ್ದರು. ಆದರೆ ಟಿ20 ವಿಶ್ವಕಪ್​ನ ದ್ವಿತೀಯ ಸುತ್ತಿನಲ್ಲಿ ಆಸ್ಟ್ರೇಲಿಯಾ ತಂಡದ ಲೆಕ್ಕಾಚಾರಗಳು ತಲೆಕೆಳಗಾಗಿದೆ. ಹೀಗಾಗಿ ಡೇವಿಡ್ ವಾರ್ನರ್ ನೋವಿನ ವಿದಾಯ ಹೇಳುವಂತಾಗಿದೆ.

2 / 6
ಇದಕ್ಕೂ ಮುನ್ನ ಜನವರಿ 1, 2024 ರಂದು ಡೇವಿಡ್ ವಾರ್ನರ್ ಏಕದಿನ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಅಲ್ಲದೆ ಜನವರಿ 6 ರಂದು ಕೊನೆಯ ಪಂದ್ಯವಾಡುವ ಮೂಲಕ ಟೆಸ್ಟ್ ಕ್ರಿಕೆಟ್​ಗೂ ಗುಡ್ ಬೈ ಹೇಳಿದ್ದರು. ಇದೀಗ ಟಿ20 ವಿಶ್ವಕಪ್​ ಮೂಲಕ ಚುಟುಕು ಕ್ರಿಕೆಟ್​ಗೂ ನಿವೃತ್ತಿ ಘೋಷಿಸಿದ್ದಾರೆ.

3 / 6
ಆಸ್ಟ್ರೇಲಿಯಾ ಪರ 110 ಟಿ20 ಪಂದ್ಯಗಳನ್ನಾಡಿರುವ ಡೇವಿಡ್ ವಾರ್ನರ್ 2300 ಎಸೆತಗಳನ್ನು ಎದುರಿಸಿ 3277 ರನ್ ಕಲೆಹಾಕಿದ್ದಾರೆ. ಈ ವೇಳೆ ಒಂದು ಭರ್ಜರಿ ಶತಕ ಹಾಗೂ 28 ಅರ್ಧಶತಕಗಳನ್ನು ಬಾರಿಸಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

4 / 6
ಏಕದಿನ ಕ್ರಿಕೆಟ್​ನಲ್ಲಿ ಆಸೀಸ್ ಪರ 161 ಪಂದ್ಯಗಳಲ್ಲಿ 159 ಇನಿಂಗ್ಸ್ ಆಡಿರುವ ಡೇವಿಡ್ ವಾರ್ನರ್ 6932 ರನ್ ಕಲೆಹಾಕಿದ್ದಾರೆ. ಈ ವೇಳೆ 22 ಭರ್ಜರಿ ಶತಕ ಹಾಗೂ 33 ಅರ್ಧಶತಕಗಳನ್ನು ಸಿಡಿಸಿದ್ದಾರೆ.

5 / 6
ಡೇವಿಡ್ ವಾರ್ನರ್ ಆಸ್ಟ್ರೇಲಿಯಾ ಪರ 112 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 205 ಇನಿಂಗ್ಸ್ ಆಡಿರುವ ಅವರು 3 ದ್ವಿಶತಕ, 26 ಶತಕ ಹಾಗೂ 37 ಅರ್ಧಶತಕಗಳೊಂದಿಗೆ ಒಟ್ಟು 8786 ರನ್ ಕಲೆಹಾಕಿದ್ದಾರೆ. ಈ ಮೂಲಕ ಮೂರು ಸ್ವರೂಪಗಳಲ್ಲೂ ಆಸ್ಟ್ರೇಲಿಯಾ ಪರ 3 ಸಾವಿರಕ್ಕೂ ಅಧಿಕ ರನ್ ಕಲೆಹಾಕಿದ ಏಕೈಕ ಬ್ಯಾಟರ್ ಆಗಿ ಡೇವಿಡ್ ವಾರ್ನರ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ.

6 / 6

Published On - 2:19 pm, Tue, 25 June 24

Follow us
ದರ್ಶನ್​ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಹಿರಿಯ ನಿರ್ಮಾಪಕ ಸಾ.ರಾ. ಗೋವಿಂದು

ಸಿಎಂ ವಿವಾದ ಸಿದ್ದರಾಮಯ್ಯ ಕಾರ್ಯವೈಖರಿ ಮೇಲೆ ಪ್ರಭಾವ ಬೀರಿದೆ: ಶೆಟ್ಟರ್

ಹೋರಿ ಬೆದರಿಸುವುದನ್ನು ನೋಡಲು ವಿದ್ಯುತ್​ ಟಿಸಿ ಏರಿ ಕೂತರು: ಜನರ ಹುಚ್ಚಾಟ

ಸೋತಲ್ಲೇ ಗೆಲುವ ಹುಡುಕುವ ಛಲ ಮಗನಲ್ಲಿ ಹುಟ್ಟಿದೆ: ಲಕ್ಷ್ಮಿ ಹೆಬ್ಬಾಳ್ಕರ್

ಕಾಂಗ್ರೆಸ್ ನಾಯಕರು ಯಾರನ್ನೇ ಸಿಎಂ ಮಾಡಿದರೂ ನಂಗೆ ಸಂಬಂಧಿಸದ ವಿಷಯ: ರೇವಣ್ಣ

ದರ್ಶನ್ ಬಂಧನದ ದಿನ ‘ಡೆವಿಲ್’ ಸಿನಿಮಾ ಸೆಟ್​ನಲ್ಲಿ ಏನಾಯ್ತು? ವಿನಯ್

ಡಿಕೆ ಸುರೇಶ್​ರನ್ನು ಸೋಲಿಸಿದ್ದು ಸಿದ್ದರಾಮಯ್ಯ; ಅಶೋಕರಿಂದ ಅಸಂಬದ್ಧ ಹೇಳಿಕೆ

ಸಿಎಂ ಮತ್ತು ಡಿಸಿಎಂ ಆಯ್ಕೆ ಮಾಡೋದು ಸ್ವಾಮೀಜಿಗಳಲ್ಲ: ಸಿದ್ದರಾಮಯ್ಯ, ಸಿಎಂ

ಸ್ವಾಮೀಜಿಗಳು ಹೇಳುತ್ತಿರುವ ಹಿಂದೆ ಬಿಜೆಪಿ ಕೈವಾಡ ಇರಬಹುದು: ಚಲುವರಾಯಸ್ವಾಮಿ

ದರ್ಶನ್ ನಡೆದು ಬಂದ ಹಾದಿಯ ಬಗ್ಗೆ ಸಾರಾ ಗೋವಿಂದು ವಿಶ್ಲೇಷಣೆ