- Kannada News Photo gallery Cricket photos David Warner has the most hundreds by an opener in International history
ಸಚಿನ್ ತೆಂಡೂಲ್ಕರ್ ವಿಶ್ವ ದಾಖಲೆ ಮುರಿದ ಡೇವಿಡ್ ವಾರ್ನರ್
David Warner: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಪರ ಆರಂಭಿಕನಾಗಿ ಕಣಕ್ಕಿಳಿದ ಡೇವಿಡ್ ವಾರ್ನರ್ 93 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 12 ಫೋರ್ಗಳೊಂದಿಗೆ 106 ರನ್ ಬಾರಿಸಿ ಅಬ್ಬರಿಸಿದ್ದರು. ಈ ಶತಕದೊಂದಿಗೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ವಾರ್ನರ್ ತಮ್ಮದಾಗಿಸಿಕೊಂಡಿದ್ದಾರೆ.
Updated on: Sep 09, 2023 | 8:01 PM

ಮಂಗಾಂಗ್ ಓವಲ್ ಮೈದಾನದಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ಆಸ್ಟ್ರೇಲಿಯಾ ಆಟಗಾರ ಡೇವಿಡ್ ವಾರ್ನರ್ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಪರ ಆರಂಭಿಕನಾಗಿ ಕಣಕ್ಕಿಳಿದ ಡೇವಿಡ್ ವಾರ್ನರ್ 93 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 12 ಫೋರ್ಗಳೊಂದಿಗೆ 106 ರನ್ ಬಾರಿಸಿ ಅಬ್ಬರಿಸಿದ್ದರು.

ಈ ಶತಕದೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯಧಿಕ ಶತಕ ಸಿಡಿಸಿದ ಆರಂಭಿಕ ಆಟಗಾರ ಎಂಬ ವಿಶ್ವ ದಾಖಲೆ ಡೇವಿಡ್ ವಾರ್ನರ್ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು.

ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಆರಂಭಿಕನಾಗಿ ಕಣಕ್ಕಿಳಿದು ಒಟ್ಟು 45 ಶತಕಗಳನ್ನು ಬಾರಿಸಿದ್ದರು. ಇದೀಗ ಈ ವಿಶ್ವ ದಾಖಲೆಯನ್ನು ಮುರಿದು ವಾರ್ನರ್ ಅಗ್ರಸ್ಥಾನಕ್ಕೇರಿದ್ದಾರೆ.

ಡೇವಿಡ್ ವಾರ್ನರ್ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಆರಂಭಿಕನಾಗಿ ಒಟ್ಟು 46 ಶತಕಗಳನ್ನು ಬಾರಿಸಿದ್ದಾರೆ. ಇದರಲ್ಲಿ 20 ಏಕದಿನ ಶತಕಗಳಿದ್ದರೆ, 25 ಟೆಸ್ಟ್ ಶತಕಗಳು ಸೇರಿವೆ. ಹಾಗೆಯೇ 1 ಟಿ20 ಶತಕವನ್ನು ಕೂಡ ಸಿಡಿಸಿದ್ದಾರೆ. ಈ ಮೂಲಕ ಸಚಿನ್ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದು ಡೇವಿಡ್ ವಾರ್ನರ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಡೇವಿಡ್ ವಾರ್ನರ್, ಸಚಿನ್ ತೆಂಡೂಲ್ಕರ್ ಅಲ್ಲದೆ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿ ವೆಸ್ಟ್ ಇಂಡೀಸ್ನ ಕ್ರಿಸ್ ಗೇಲ್ ಕಾಣಿಸಿಕೊಂಡಿದ್ದಾರೆ. ಗೇಲ್ ಆರಂಭಿಕನಾಗಿ ಒಟ್ಟು 42 ಶತಕಗಳನ್ನು ಬಾರಿಸಿದ್ದಾರೆ.

ಇದಲ್ಲದೆ ಸೌತ್ ಆಫ್ರಿಕಾ ವಿರುದ್ಧ ಏಕದಿನ ಕ್ರಿಕೆಟ್ನಲ್ಲಿ ಅತೀ ಹೆಚ್ಚು ಶತಕ ಸಿಡಿಸಿದ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನೂ ಕೂಡ ಡೇವಿಡ್ ವಾರ್ನರ್ ಸರಿಗಟ್ಟಿದ್ದಾರೆ.

ಸಚಿನ್ ತೆಂಡೂಲ್ಕರ್ ಸೌತ್ ಆಫ್ರಿಕಾ ವಿರುದ್ಧ 5 ಶತಕಗಳನ್ನು ಬಾರಿಸಿ ದಾಖಲೆ ನಿರ್ಮಿಸಿದ್ದರು. ಇದೀಗ ಸೌತ್ ಆಫ್ರಿಕಾ ವಿರುದ್ಧ ತಮ್ಮ 5ನೇ ಶತಕ ಪೂರೈಸಿರುವ ಮೂಲಕ ವಾರ್ನರ್ ಮಾಸ್ಟರ್ ಬ್ಲಾಸ್ಟರ್ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಸರಿಗಟ್ಟಿದ್ದಾರೆ.

ಒಟ್ಟಿನಲ್ಲಿ ಒಂದು ಭರ್ಜರಿ ಶತಕ ಸಿಡಿಸುವ ಮೂಲಕ ಡೇವಿಡ್ ವಾರ್ನರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ 1 ವಿಶ್ವ ದಾಖಲೆಯನ್ನು ಮುರಿದು, ಮತ್ತೊಂದು ದಾಖಲೆಯನ್ನು ಸರಿಗಟ್ಟಿರುವುದು ವಿಶೇಷ.



















