AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ ಡೇವಿಡ್ ವಾರ್ನರ್

Dubai Capitals vs Abu Dhabi Knight Riders: ಇಂಟರ್​ನ್ಯಾಷನಲ್ ಲೀಗ್​ ಟಿ20 ಟೂರ್ನಿಯ 29ನೇ ಪಂದ್ಯದಲ್ಲಿ ದುಬೈ ಕ್ಯಾಪಿಟಲ್ಸ್ ತಂಡ 26 ರನ್​ಗಳ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ದುಬೈ ಕ್ಯಾಪಿಟಲ್ಸ್ 20 ಓವರ್​ಗಳಲ್ಲಿ 217 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಅಬುಧಾನಿ ನೈಟ್ ರೈಡರ್ಸ್ ತಂಡವು 20 ಓವರ್​ಗಳಲ್ಲಿ 191 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿದ ಡೇವಿಡ್ ವಾರ್ನರ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದುಕೊಂಡರು.

ಝಾಹಿರ್ ಯೂಸುಫ್
|

Updated on: Feb 03, 2025 | 10:30 AM

Share
ದುಬೈನಲ್ಲಿ ನಡೆಯುತ್ತಿರುವ ಇಂಟರ್​ನ್ಯಾಷನಲ್​ ಲೀಗ್ ಟಿ20 ಟೂರ್ನಿಯಲ್ಲಿ ಡೇವಿಡ್ ವಾರ್ನರ್ ಅಬ್ಬರಿಸಿದ್ದಾರೆ. ಭಾನುವಾರ ನಡೆದ ಅಬುಧಾಬಿ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ದುಬೈ ಕ್ಯಾಪಿಟಲ್ಸ್ ಪರ ಆರಂಭಿಕನಾಗಿ ಕಣಕ್ಕಿಳಿದ ಡೇವಿಡ್ ವಾರ್ನರ್ 57 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 12 ಫೋರ್​ಗಳೊಂದಿಗೆ ಅಜೇಯ 93 ರನ್ ಚಚ್ಚಿದ್ದಾರೆ.

1 / 5
ಈ 93 ರನ್​ಗಳೊಂದಿಗೆ ಡೇವಿಡ್ ವಾರ್ನರ್ ಟಿ20 ರನ್ ಸರದಾರರ ಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಿದ್ದಾರೆ. ಅದು ಕೂಡ ರನ್ ಮೆಷಿನ್ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕುವ ಮೂಲಕ ಎಂಬುದು ವಿಶೇಷ. ಅಂದರೆ ಟಿ20 ರನ್​ ಸರದಾರರ ಟಾಪ್-5 ಪಟ್ಟಿಯಲ್ಲಿ ಈ ಹಿಂದೆ ವಿರಾಟ್ ಕೊಹ್ಲಿ ಕಾಣಿಸಿಕೊಂಡಿದ್ದರು.

2 / 5
2007 ರಿಂದ 2024 ರವರೆಗೆ 382 ಟಿ20 ಇನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ 9 ಭರ್ಜರಿ ಶತಕ ಹಾಗೂ 97 ಅರ್ಧಶತಕಗಳೊಂದಿಗೆ ಒಟ್ಟು 12886 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಭಾರತೀಯ ಹಾಗೂ ವಿಶ್ವದ 5ನೇ ಬ್ಯಾಟರ್ ಎನಿಸಿಕೊಂಡಿದ್ದರು.

3 / 5
ಇದೀಗ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿ ಡೇವಿಡ್ ವಾರ್ನರ್ ಐದನೇ ಸ್ಥಾನಕ್ಕೇರಿದ್ದಾರೆ. ಈವರೆಗೆ 397 ಟಿ20 ಇನಿಂಗ್ಸ್ ಆಡಿರುವ ವಾರ್ನರ್ 8 ಶತಕ ಹಾಗೂ 108 ಅರ್ಧಶತಕಗಳೊಂದಿಗೆ ಒಟ್ಟು 12909 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಗಳಿಸಿದ ಟಾಪ್-5 ಬ್ಯಾಟರ್​ಗಳ ಪಟ್ಟಿಯಲ್ಲಿ ಐದನೇ ಸ್ಥಾನ ಅಲಂಕರಿಸಿದ್ದಾರೆ.

4 / 5
ಇನ್ನು ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆ ವೆಸ್ಟ್ ಇಂಡೀಸ್​ನ ಕ್ರಿಸ್ ಗೇಲ್ ಹೆಸರಿನಲ್ಲಿದೆ. 2005 ರಿಂದ 2022 ರವರೆಗೆ ವೆಸ್ಟ್ ಇಂಡೀಸ್ ಸೇರಿದಂತೆ ವಿವಿಧ ತಂಡಗಳ ಪರ ಕಣಕ್ಕಿಳಿದಿರುವ ಕ್ರಿಸ್ ಗೇಲ್ 455 ಇನಿಂಗ್ಸ್​ಗಳಿಂದ ಒಟ್ಟು 14562 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

5 / 5
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ

ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?

ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ

ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು

‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್

2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ

ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ

ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ

VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ