ಸದ್ಯ ಏಕದಿನ ಹಾಗೂ ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಿರುವ ಡೇವಿಡ್ ವಾರ್ನರ್ ಟಿ20 ಕ್ರಿಕೆಟ್ನಲ್ಲಿ ಮುಂದುವರೆಯುವ ಇಚ್ಛೆ ಹೊಂದಿದ್ದಾರೆ. ಅದರಂತೆ ಮುಂಬರುವ ಟಿ20 ವಿಶ್ವಕಪ್ನಲ್ಲಿ ಕಣಕ್ಕಿಳಿಯುವ ವಿಶ್ವಾಸದಲ್ಲಿದ್ದಾರೆ. ಒಂದು ವೇಳೆ ಮುಂಬರುವ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯದಿದ್ದರೆ ಟಿ20 ಕ್ರಿಕೆಟ್ಗೂ ಡೇವಿಡ್ ವಾರ್ನರ್ ವಿದಾಯ ಹೇಳುವ ಸಾಧ್ಯತೆಯಿದೆ.