David Warner: ಸಚಿನ್ ವಿಶ್ವ ದಾಖಲೆ ಮುರಿದು ಇತಿಹಾಸ ನಿರ್ಮಿಸಿರುವ ಡೇವಿಡ್ ವಾರ್ನರ್

| Updated By: ಝಾಹಿರ್ ಯೂಸುಫ್

Updated on: Jan 07, 2024 | 7:14 AM

David Warner: ​ಸದ್ಯ ಏಕದಿನ ಹಾಗೂ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಹೇಳಿರುವ ಡೇವಿಡ್ ವಾರ್ನರ್ ಟಿ20 ಕ್ರಿಕೆಟ್​ನಲ್ಲಿ ಮುಂದುವರೆಯುವ ಇಚ್ಛೆ ಹೊಂದಿದ್ದಾರೆ. ಅದರಂತೆ ಮುಂಬರುವ ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ ವಿಶ್ವಾಸದಲ್ಲಿದ್ದಾರೆ.

1 / 6
ಆಸ್ಟ್ರೇಲಿಯಾ ತಂಡದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಏಕದಿನ ಹಾಗೂ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಈ ವಿದಾಯದ ನಡುವೆ ವಾರ್ನರ್ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಈ ದಾಖಲೆಗಳ ಪಟ್ಟಿಯಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನೂ ಸಹ ಮುರಿದಿರುವುದು ವಿಶೇಷ.

2 / 6
ಹೌದು, ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ಶತಕ ಸಿಡಿಸಿದ ಆರಂಭಿಕ ಬ್ಯಾಟರ್ ಎಂಬ ವಿಶ್ವ ದಾಖಲೆ ಇದೀಗ ಡೇವಿಡ್ ವಾರ್ನರ್ ಹೆಸರಿನಲ್ಲಿದೆ. ಇದಕ್ಕೂ ಮುನ್ನ ಈ ದಾಖಲೆ ಶತಕಗಳ ಸರದಾರ ಸಚಿನ್ ಹೆಸರಿನಲ್ಲಿತ್ತು.

3 / 6
ಆರಂಭಿಕನಾಗಿ 342 ಇನಿಂಗ್ಸ್ ಆಡಿದ್ದ ಸಚಿನ್ ತೆಂಡೂಲ್ಕರ್ ಒಟ್ಟು 45 ಶತಕಗಳನ್ನು ಬಾರಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು. ಈ ದಾಖಲೆಯನ್ನು ಡೇವಿಡ್ ವಾರ್ನರ್ ಮುರಿದಿದ್ದಾರೆ.

4 / 6
ಡೇವಿಡ್ ವಾರ್ನರ್ ಆಸ್ಟ್ರೇಲಿಯಾ ಪರ 451 ಇನಿಂಗ್ಸ್​ಗಳಲ್ಲಿ ಆರಂಭಿಕನಾಗಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ 49 ಸೆಂಚುರಿಗಳನ್ನು ಸಿಡಿಸಿ ಅತೀ ಹೆಚ್ಚು ಶತಕ ಬಾರಿಸಿದ ಆರಂಭಿಕ ಬ್ಯಾಟರ್ ಎನಿಸಿಕೊಂಡಿದ್ದಾರೆ. ಈ ಮೂಲಕ ಅತ್ಯಧಿಕ ಶತಕ ಬಾರಿಸಿದ ಓಪನರ್ ಎಂಬ ವಿಶ್ವ ದಾಖಲೆಯನ್ನು ಡೇವಿಡ್ ವಾರ್ನರ್ ತಮ್ಮದಾಗಿಸಿಕೊಂಡಿದ್ದಾರೆ.

5 / 6
ಇನ್ನು ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವುದು ವೆಸ್ಟ್ ಇಂಡೀಸ್​ನ ಸ್ಪೋಟಕ ದಾಂಡಿಗ ಕ್ರಿಸ್ ಗೇಲ್. ವಿಂಡೀಸ್ ಪರ ಒಟ್ಟು 506 ಇನಿಂಗ್ಸ್​ಗಳಲ್ಲಿ ಆರಂಭಿಕನಾಗಿ ಕಣಕ್ಕಿಳಿದಿರುವ ಗೇಲ್ 42 ಶತಕಗಳನ್ನು ಬಾರಿಸಿದ್ದಾರೆ.

6 / 6
ಸದ್ಯ ಏಕದಿನ ಹಾಗೂ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಹೇಳಿರುವ ಡೇವಿಡ್ ವಾರ್ನರ್ ಟಿ20 ಕ್ರಿಕೆಟ್​ನಲ್ಲಿ ಮುಂದುವರೆಯುವ ಇಚ್ಛೆ ಹೊಂದಿದ್ದಾರೆ. ಅದರಂತೆ ಮುಂಬರುವ ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ ವಿಶ್ವಾಸದಲ್ಲಿದ್ದಾರೆ. ಒಂದು ವೇಳೆ ಮುಂಬರುವ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯದಿದ್ದರೆ ಟಿ20 ಕ್ರಿಕೆಟ್​ಗೂ ಡೇವಿಡ್ ವಾರ್ನರ್ ವಿದಾಯ ಹೇಳುವ ಸಾಧ್ಯತೆಯಿದೆ.