ರನ್​ ಸರದಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿಯನ್ನೇ ಹಿಂದಿಕ್ಕಿದ ಡೇವಿಡ್ ವಾರ್ನರ್

Updated on: Aug 12, 2025 | 11:53 AM

T20 World Record: ಟಿ20 ಕ್ರಿಕೆಟ್ ಇತಿಹಾಸದಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆ ವೆಸ್ಟ್ ಇಂಡೀಸ್​ನ ಕ್ರಿಸ್ ಗೇಲ್ ಹೆಸರಿನಲ್ಲಿದೆ. ಇದೀಗ ಗೇಲ್ ಅವರ ದಾಖಲೆ ಮುರಿಯಲು ಆಸ್ಟ್ರೇಲಿಯನ್ ದಾಂಡಿಗ ಡೇವಿಡ್ ವಾರ್ನರ್ ದಾಂಗುಡಿ ಇಟ್ಟಿದ್ದಾರೆ. ಮುಂಬರುವ ದಿನಗಳಲ್ಲಿ ವಾರ್ನರ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರೆ ಗೇಲ್ ದಾಖಲೆಯನ್ನು ಮುರಿಯುವುದು ಖಚಿತ ಎಂದೇ ಹೇಳಬಹುದು.

1 / 5
ಟಿ20 ರನ್​ ಸರದಾರರ ಪಟ್ಟಿಯಲ್ಲಿ ಡೇವಿಡ್ ವಾರ್ನರ್ (David Warner) ಐದನೇ ಸ್ಥಾನಕ್ಕೇರಿದ್ದಾರೆ. ಅದು ಕೂಡ ದಾಖಲೆಗಳ ಸರದಾರ ವಿರಾಟ್ ಕೊಹ್ಲಿಯನ್ನು (Virat Kohli) ಹಿಂದಿಕ್ಕುವ ಮೂಲಕ ಎಂಬುದು ವಿಶೇಷ. ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ದಿ ಹಂಡ್ರೆಡ್ ಲೀಗ್​ನ 9ನೇ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಡೇವಿಡ್ ವಾರ್ನರ್ 71 ರನ್​ಗಳಿಸಿದ್ದರು.

2 / 5
ಈ 71 ರನ್​ಗಳೊಂದಿಗೆ ಡೇವಿಡ್ ವಾರ್ನರ್ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಆಸ್ಟ್ರೇಲಿಯಾ ಪರ ಅತ್ಯಧಿಕ ರನ್​ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಈವರೆಗೆ 418 ಟಿ20 ಇನಿಂಗ್ಸ್ ಆಡಿರುವ ವಾರ್ನರ್ ಒಟ್ಟು 13545 ರನ್ ಕಲೆಹಾಕಿದ್ದು, ಈ ಮೂಲಕ ಟಿ20 ರನ್ ಸರದಾರರ ಪಟ್ಟಿಯಲ್ಲಿ ಟಾಪ್-5 ಗೆ ಎಂಟ್ರಿ ಕೊಟ್ಟಿದ್ದಾರೆ.

3 / 5
ಇದಕ್ಕೂ ಮುನ್ನ ಐದನೇ ಸ್ಥಾನದಲ್ಲಿ ಟೀಮ್ ಇಂಡಿಯಾದ ವಿರಾಟ್ ಕೊಹ್ಲಿ ಕಾಣಿಸಿಕೊಂಡಿದ್ದರು. ಕಿಂಗ್ ಕೊಹ್ಲಿ 397 ಟಿ20 ಪಂದ್ಯಗಳ ಮೂಲಕ ಒಟ್ಟು 13543 ರನ್​ ಕಲೆಹಾಕಿದ್ದಾರೆ. ಈ ಮೂಲಕ ಭಾರತದ ಪರ ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ರನ್​ಗಳಿಸಿ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ. ಅಲ್ಲದೆ ಟಿ20 ಟಾಪ್ ರನ್ ಸರದಾರರ ಪಟ್ಟಿಯಲ್ಲಿ ಐದನೇ ಸ್ಥಾನವನ್ನು ಅಲಂಕರಿಸಿದ್ದರು.

4 / 5
ಇದೀಗ 13545 ರನ್​ಗಳೊಂದಿಗೆ ಡೇವಿಡ್ ವಾರ್ನರ್ ಐದನೇ ಸ್ಥಾನಕ್ಕೇರುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ದಿ ಹಂಡ್ರೆಡ್ ಲೀಗ್​ನಲ್ಲಿ ಕಣಕ್ಕಿಳಿಯುತ್ತಿರುವ ವಾರ್ನರ್ ಮುಂದಿನ ಪಂದ್ಯದಲ್ಲಿ 27 ರನ್​ಗಳಿಸಿದರೆ ಪಾಕಿಸ್ತಾನದ ಶೊಯೆಬ್ ಮಲಿಕ್ (13571) ಅವರನ್ನು ಹಿಂದಿಕ್ಕಿ ಟಿ20 ರನ್ ಸರದಾರರ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಬಹುದು.

5 / 5
ಅಂದಹಾಗೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ರನ್​ಗಳಿಸಿದ ವಿಶ್ವ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿದೆ. ಚುಟುಕು ಕ್ರಿಕೆಟ್​ನಲ್ಲಿ 455 ಇನಿಂಗ್ಸ್​ ಆಡಿರುವ ಗೇಲ್ 10060 ಎಸೆತಗಳನ್ನು ಎದುರಿಸಿ ಒಟ್ಟು 14562 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ ಇತಿಹಾಸದ ರನ್ ಸರದಾರ ಎಂಬ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ.