AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬ್ಬರದ ಶತಕ ಸಿಡಿಸಿ ಕಿಂಗ್ ಕೊಹ್ಲಿಯ ದಾಖಲೆ ಮುರಿದ ಡೇವಿಡ್ ವಾರ್ನರ್

David Warner's Explosive 110*: ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಡೇವಿಡ್ ವಾರ್ನರ್ ಬಿಗ್ ಬ್ಯಾಷ್ ಲೀಗ್ 2025-26 ರಲ್ಲಿ ಸ್ಫೋಟಕ 110* ರನ್ ಬಾರಿಸಿದ್ದಾರೆ. ಈ ಶತಕದೊಂದಿಗೆ, ವಾರ್ನರ್ ತಮ್ಮ 10 ನೇ ಟಿ20 ಶತಕವನ್ನು ಗಳಿಸಿ ವಿರಾಟ್ ಕೊಹ್ಲಿ (9 ಶತಕಗಳು) ಅವರನ್ನು ಹಿಂದಿಕ್ಕಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕಗಳನ್ನು ಗಳಿಸಿದ ಆಟಗಾರರ ಪಟ್ಟಿಯಲ್ಲಿ ಅವರು ಈಗ ಮೂರನೇ ಸ್ಥಾನದಲ್ಲಿದ್ದಾರೆ. ಇದು ಅವರ ಸತತ ನಾಲ್ಕನೇ 50+ ಇನ್ನಿಂಗ್ಸ್ ಆಗಿದೆ.

ಪೃಥ್ವಿಶಂಕರ
|

Updated on: Jan 16, 2026 | 6:55 PM

Share
ಅಂತರರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಬಳಿಕ ಟಿ20 ಲೀಗ್​ಗಳಲ್ಲಿ ನಿರತರಾಗಿರುವ ಆಸ್ಟ್ರೇಲಿಯಾದ ಮಾಜಿ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಮತ್ತೊಮ್ಮೆ ಕ್ರಿಕೆಟ್ ಜಗತ್ತಿನಲ್ಲಿ ಸಂಚಲನ ಮೂಡಿಸಿದ್ದಾರೆ. ಬಿಗ್ ಬ್ಯಾಷ್ ಲೀಗ್ 2025-26 ರ 37 ನೇ ಪಂದ್ಯದಲ್ಲಿ, ಸಿಡ್ನಿ ಥಂಡರ್ ನಾಯಕ ಡೇವಿಡ್ ವಾರ್ನರ್ ಸಿಡ್ನಿ ಸಿಕ್ಸರ್ಸ್ ವಿರುದ್ಧ ಸ್ಫೋಟಕ ಶತಕ ಬಾರಿಸಿದ್ದಾರೆ.

1 / 6
ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಥಂಡರ್ ತಂಡದ ಪರ ಅಬ್ಬರಿಸಿದ ಡೇವಿಡ್ ವಾರ್ನರ್ ಈ ಆವೃತ್ತಿಯ ಎರಡನೇ ಶತಕ ಬಾರಿಸಿದರು. ಈ ಪಂದ್ಯದಲ್ಲಿ ಡೇವಿಡ್ ವಾರ್ನರ್ 65 ಎಸೆತಗಳಲ್ಲಿ ಅಜೇಯ 110 ರನ್ ಗಳಿಸಿದರು. ಅವರ ಇನ್ನಿಂಗ್ಸ್‌ನಲ್ಲಿ 11 ಬೌಂಡರಿ ಮತ್ತು 4 ಸಿಕ್ಸರ್‌ಗಳು ಸೇರಿದ್ದವು.

2 / 6
ವಾರ್ನರ್ ಅವರ ಈ ಸ್ಫೋಟಕ ಶತಕದಿಂದಾಗಿ ಮೊದಲು ಬ್ಯಾಟಿಂಗ್‌ ಮಾಡಿದ ಸಿಡ್ನಿ ಥಂಡರ್ ತಂಡವು 20 ಓವರ್‌ಗಳಲ್ಲಿ 6 ವಿಕೆಟ್‌ಗಳ ನಷ್ಟಕ್ಕೆ 189 ರನ್ ಗಳಿಸಿತು. ಈ ಅದ್ಭುತ ಶತಕದೊಂದಿಗೆ ವಾರ್ನರ್, ಟಿ20 ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ಶತಕಗಳನ್ನು ಬಾರಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ್ದಾರೆ.

3 / 6
ಡೇವಿಡ್ ವಾರ್ನರ್ ತಮ್ಮ 10 ನೇ ಟಿ20 ಶತಕವನ್ನು ಗಳಿಸುವ ಮೂಲಕ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ್ದಾರೆ. ಇದರೊಂದಿಗೆ ವಾರ್ನರ್ ಅತಿ ಹೆಚ್ಚು ಟಿ20 ಶತಕಗಳನ್ನು ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಮೂರನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.

4 / 6
ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಟಿ20ಕ್ರಿಕೆಟ್​ನಲ್ಲಿ ಒಂಬತ್ತು ಶತಕಗಳನ್ನು ಬಾರಿಸಿದ್ದು ಇದೀಗ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಉಳಿದಂತೆ ವಿಂಡೀಸ್ ದಿಗ್ಗಜ ಕ್ರಿಸ್ ಗೇಲ್ 22 ಶತಕಗಳೊಂದಿಗೆ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರೆ, ಪಾಕ್ ಮಾಜಿ ನಾಯಕ ಬಾಬರ್ ಆಝಂ 11 ಶತಕಗಳೊಂದಿಗೆ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.

5 / 6
2025-26 ರ ಬಿಗ್ ಬ್ಯಾಷ್ ಲೀಗ್ ಸೀಸನ್‌ನಲ್ಲಿ ಕಳಪೆ ಆರಂಭ ಪಡೆದುಕೊಂಡಿದ್ದ ಡೇವಿಡ್ ವಾರ್ನರ್, ಕಳೆದ ನಾಲ್ಕು ಪಂದ್ಯಗಳಲ್ಲಿ ಸಾಕಷ್ಟು ರನ್ ಗಳಿಸಿದ್ದಾರೆ. ಇದು ಅವರ ಸತತ ನಾಲ್ಕನೇ 50 ಪ್ಲಸ್ ಇನ್ನಿಂಗ್ಸ್ ಆಗಿದೆ. ಅವರ ಹಿಂದಿನ ಮೂರು ಪಂದ್ಯಗಳಲ್ಲಿ, ಅವರು 82, 67* ಮತ್ತು ಅಜೇಯ 130 ರನ್​ಗಳ ಇನ್ನಿಂಗ್ಸ್ ಆಡಿದ್ದರು.

6 / 6
ಇದು ಯಾವುದೋ ಜಾತ್ರೆಯಲ್ಲ: ಹೋರಿ ಅಂತಿಮ ದರ್ಶನಕ್ಕೆ ಹರಿದುಬಂದ ಜನಸಾಗರ

‘ಅನ್ನ ಕದ್ದು ತಿಂದಿದ್ದೆ’; ಗಿಲ್ಲಿಯ ಹಳೆಯ ಕಥೆ ಕೇಳಿ ರಕ್ಷಿತಾ ಕಣ್ಣೀರು

ಜ್ವರ ಬಂದು ಬಾಯಿ ಕೆಟ್ಟಿತ್ತು: ಕಾಲ್ ಸೂಪ್, ನಾಟಿ ಚಿಕನ್ ಚಪ್ಪರಿಸಿದ ಸಿಎಂ

ಬೈಕ್​​ಗೆ ಗುದ್ದಿದ ಕಾರು: 10 ಅಡಿ ಎತ್ತರಕ್ಕೆ ಹಾರಿಬಿದ್ದ ಸವಾರ!

ಸ್ಟೈಲಿಶ್ ಆಗಿ ಗಿಲ್ಲಿಗೆ ಆಲ್​ ದಿ ಬೆಸ್ಟ್ ಹೇಳಿದ ಶಿವಣ್ಣ; ವಿಡಿಯೋ ನೋಡಿ

ಸಿದ್ದರಾಮಯ್ಯ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ದೋಷ, ಮುಂದೇನಾಯ್ತು?

ಎಲ್ಲೆಲ್ಲೂ ಗಿಲ್ಲಿ, ಎಲ್ಲೆಲ್ಲೂ ಗಿಲ್ಲಿ: ಅಭಿಮಾನಿಗಳ ಪ್ರೀತಿಯ ಅಭಿಯಾನ ನೋಡಿ

ಆಸ್ತಿಗಾಗಿ 4 ದಿನದಲ್ಲಿ ಹಸೆಮಣೆ ಏರಬೇಕಿದ್ದ ತಮ್ಮನನ್ನೇ ಕೊಂದ ಪಾಪಿ ಅಣ್ಣ!

ಮದುವೆಗೆ ಏನಾದರೂ ತೊಂದ್ರೆ ಆದ್ರೆ ಗಿಲ್ಲಿಯೇ ಕಾರಣ; ನೇರವಾಗಿ ಹೇಳಿದ ಕಾವ್ಯಾ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗೆ ಚುನಾವಣೆಯಲ್ಲಿ ಗೆಲುವು