IPL ನಲ್ಲಿಲ್ಲ ಚಾನ್ಸ್… PSL ನತ್ತ ಮುಖ ಮಾಡಿದ ಡೇವಿಡ್ ವಾರ್ನರ್
David Warner: ಐಪಿಎಲ್ ಇತಿಹಾಸದಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ವಿದೇಶಿ ಬ್ಯಾಟರ್ಗಳ ಪಟ್ಟಿಯಲ್ಲಿ ಡೇವಿಡ್ ವಾರ್ನರ್ ಹೆಸರು ಅಗ್ರಸ್ಥಾನದಲ್ಲಿದೆ. ಸನ್ರೈಸರ್ಸ್ ಹೈದರಾಬಾದ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ಪರ ಕಣಕ್ಕಿಳಿದಿರುವ ವಾರ್ನರ್ ಒಟ್ಟು 6565 ರನ್ ಕಲೆಹಾಕಿದ್ದಾರೆ. ಈ ಮೂಲಕ ಐಪಿಎಲ್ನಲ್ಲಿ ಅತೀ ಹೆಚ್ಚು ರನ್ಗಳಿಸಿದ ವಿದೇಶಿ ಬ್ಯಾಟರ್ ಎನಿಸಿಕೊಂಡಿದ್ದಾರೆ.
Updated on: Jan 02, 2025 | 12:08 PM

ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಮೆಗಾ ಹರಾಜಿನಲ್ಲಿ ಬಿಕರಿಯಾಗದೇ ಉಳಿದ ಸ್ಟಾರ್ ಆಟಗಾರರಲ್ಲಿ ಡೇವಿಡ್ ವಾರ್ನರ್ ಕೂಡ ಒಬ್ಬರು. 2 ಕೋಟಿ ರೂ. ಮೂಲ ಬೆಲೆ ಘೋಷಿಸಿದ್ದ ವಾರ್ನರ್ ಅವರನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಇತ್ತ ಐಪಿಎಲ್ನಲ್ಲಿ ಅವಕಾಶ ಕೈ ತಪ್ಪುತ್ತಿದ್ದಂತೆ ವಾರ್ನರ್ ಪಿಎಸ್ಎಲ್ನತ್ತ ಮುಖ ಮಾಡಲು ನಿರ್ಧರಿಸಿದ್ದಾರೆ.

ಹೌದು, ಐಪಿಎಲ್ನಲ್ಲಿ ಅನ್ಸೋಲ್ಡ್ ಆಗಿರುವ ಡೇವಿಡ್ ವಾರ್ನರ್ ಮುಂಬರುವ ಪಾಕಿಸ್ತಾನ್ ಸೂಪರ್ ಲೀಗ್ಗಾಗಿ ಹೆಸರು ನೀಡಿದ್ದಾರೆ. ಪಿಎಸ್ಎಲ್ 2025ರ ಡ್ರಾಫ್ಟ್ ಪಟ್ಟಿಯಲ್ಲಿ ವಾರ್ನರ್ ಹೆಸರು ಕಾಣಿಸಿಕೊಂಡಿದ್ದು, ಈ ಮೂಲಕ ಪಾಕ್ನಲ್ಲಿ ಟಿ20 ಲೀಗ್ ಆಡಲು ಸಜ್ಜಾಗಿ ನಿಂತಿದ್ದಾರೆ.

ಇಂಟ್ರೆಸ್ಟಿಂಗ್ ವಿಷಯ ಎಂದರೆ 2019 ರಲ್ಲಿ ಪಾಕಿಸ್ತಾನ್ ಸೂಪರ್ ಲೀಗ್ಗೆ ಡೇವಿಡ್ ವಾರ್ನರ್ ಅವರನ್ನು ಆಯ್ಕೆ ಮಾಡಲಾಗಿತ್ತು. ಆದರೆ ಐಪಿಎಲ್ ಕಾರಣ ಆಸೀಸ್ ದಾಂಡಿಗ ಪಿಎಸ್ಎಲ್ನಿಂದ ಹಿಂದೆ ಸರಿದಿದ್ದರು. ಇದೀಗ ಐಪಿಎಲ್ನಲ್ಲಿ ಅವಕಾಶ ಸಿಗದ ಹಿನ್ನಲೆ ಪಾಕಿಸ್ತಾನ್ ಸೂಪರ್ ಲೀಗ್ನತ್ತ ಮುಖ ಮಾಡಿದ್ದಾರೆ.

ಅದರಂತೆ ಇದೀಗ 5 ವರ್ಷಗಳ ಬಳಿಕ ಪಾಕಿಸ್ತಾನ್ ಸೂಪರ್ ಲೀಗ್ ಡ್ರಾಫ್ಟ್ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಡೇವಿಡ್ ವಾರ್ನರ್ ಅವರನ್ನು ಮುಂದಿನ ಸೀಸನ್ಗಾಗಿ ಯಾವ ತಂಡ ಆಯ್ಕೆ ಮಾಡಲಿದೆ ಎಂಬುದನ್ನು ಕಾದು ನೋಡಬೇಕಿದೆ. ಹೀಗೆ ಆಯ್ಕೆಯಾದರೆ ಈ ಬಾರಿಯ ಐಪಿಎಲ್ ಅವಧಿಯಲ್ಲಿ ಡೇವಿಡ್ ವಾರ್ನರ್ ಪಾಕ್ನಲ್ಲಿ ಪಿಎಸ್ಎಲ್ನಲ್ಲಿ ಕಣಕ್ಕಿಳಿಯುವುದನ್ನು ನೋಡಬಹುದು.

ಅಂದಹಾಗೆ ಡೇವಿಡ್ ವಾರ್ನರ್ ಐಪಿಎಲ್ ಇತಿಹಾಸದ ಅತ್ಯಂತ ಯಶಸ್ವಿ ವಿದೇಶಿ ಆಟಗಾರ ಎಂಬುದು ವಿಶೇಷ. ಡೆಲ್ಲಿ ಕ್ಯಾಪಿಟಲ್ಸ್, ಸನ್ರೈಸರ್ಸ್ ಹೈದರಾಬಾದ್ ಪರ ಕಣಕ್ಕಿಳಿದಿರುವ ವಾರ್ನರ್ 184 ಪಂದ್ಯಗಳನ್ನಾಡಿದ್ದು, ಈ ವೇಳೆ 4 ಶತಕ ಹಾಗೂ 62 ಅರ್ಧಶತಕಗಳೊಂದಿಗೆ ಒಟ್ಟು 6565 ರನ್ ಕಲೆಹಾಕಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಅತ್ಯಧಿಕ ರನ್ ಗಳಿಸಿದ ವಿದೇಶಿ ಬ್ಯಾಟರ್ ಎನಿಸಿಕೊಂಡಿದ್ದಾರೆ.
























