David Warner: ದಾಖಲೆಯೊಂದಿಗೆ ವಿದಾಯ ಹೇಳಿದ ಡೇವಿಡ್ ವಾರ್ನರ್

| Updated By: ಝಾಹಿರ್ ಯೂಸುಫ್

Updated on: Jan 06, 2024 | 8:20 AM

David Warner Records: ಆಸ್ಟ್ರೇಲಿಯಾ ಪರ ಡೇವಿಡ್ ವಾರ್ನರ್ 112 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 205 ಇನಿಂಗ್ಸ್ ಆಡಿರುವ ಅವರು 3 ದ್ವಿಶತಕ, 26 ಶತಕ ಹಾಗೂ 37 ಅರ್ಧಶತಕಗಳೊಂದಿಗೆ ಒಟ್ಟು 8783+ ರನ್ ಕಲೆಹಾಕಿದ್ದಾರೆ.

1 / 7
ಸಿಡ್ನಿಯಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ ಕೊನೆಯ ಟೆಸ್ಟ್ ಪಂದ್ಯದ ಮೂಲಕ ಆಸ್ಟ್ರೇಲಿಯಾ ತಂಡದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ವಾರ್ನರ್ (57) ತಮ್ಮ ಕೊನೆಯ ಇನಿಂಗ್ಸ್​ನಲ್ಲಿ ಅರ್ಧಶತಕ ಬಾರಿಸಿ ಮಿಂಚಿದ್ದರು.

2 / 7
ಈ ಅರ್ಧಶತಕದೊಂದಿಗೆ ಆಸ್ಟ್ರೇಲಿಯಾ ಪರ ಟೆಸ್ಟ್​ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಬಾರಿಸಿದ ಆರಂಭಿಕ ಆಟಗಾರ ಎಂಬ ದಾಖಲೆ ಡೇವಿಡ್ ವಾರ್ನರ್ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಮ್ಯಾಥ್ಯೂ ಹೇಡನ್ ಅವರ ಹೆಸರಿನಲ್ಲಿತ್ತು.

3 / 7
ಆಸ್ಟ್ರೇಲಿಯಾ ತಂಡದ ಮಾಜಿ ಎಡಗೈ ಆರಂಭಿಕ ಆಟಗಾರ ಮ್ಯಾಥ್ಯೂ ಹೇಡನ್ ಓಪನರ್ ಆಗಿ ಕಣಕ್ಕಿಳಿದು ಒಟ್ಟು 8625 ರನ್ ಕಲೆಹಾಕಿ ಇತಿಹಾಸ ಬರೆದಿದ್ದರು. ಇದೀಗ ಈ ದಾಖಲೆಯನ್ನು ಡೇವಿಡ್ ವಾರ್ನರ್ ಮುರಿದಿದ್ದಾರೆ.

4 / 7
ಆಸ್ಟ್ರೇಲಿಯಾ ಪರ 203 ಟೆಸ್ಟ್ ಇನಿಂಗ್ಸ್​ ಆಡಿರುವ ಡೇವಿಡ್ ವಾರ್ನರ್ ಆರಂಭಿಕನ ಸ್ಥಾನದಲ್ಲಿ ಒಟ್ಟು 8786 ರನ್ ಕಲೆಹಾಕಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾ ಪರ ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಬಾರಿಸಿದ ಆರಂಭಿಕ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

5 / 7
ಹಾಗೆಯೇ ಆಸ್ಟ್ರೇಲಿಯಾ ಪರ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ 2ನೇ ಬ್ಯಾಟರ್ ಎನಿಸಿಕೊಂಡರು. ಆಸೀಸ್ ಪರ ಒಟ್ಟು 463 ಇನಿಂಗ್ಸ್ ಆಡಿರುವ ವಾರ್ನರ್ 18607+ ರನ್ ಕಲೆಹಾಕಿದ್ದಾರೆ.

6 / 7
ಇನ್ನು ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ರಿಕಿ ಪಾಂಟಿಂಗ್. ಒಟ್ಟು 667 ಇನಿಂಗ್ಸ್ ಆಡಿರುವ ಪಾಂಟಿಂಗ್ 27368 ರನ್ ಕಲೆಹಾಕಿ ದಾಖಲೆ ನಿರ್ಮಿಸಿಟ್ಟಿದ್ದಾರೆ.

7 / 7
ಡೇವಿಡ್ ವಾರ್ನರ್ ಟೆಸ್ಟ್ ವೃತ್ತಿಜೀವನ: ಆಸ್ಟ್ರೇಲಿಯಾ ಪರ ಡೇವಿಡ್ ವಾರ್ನರ್ 112 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 205 ಇನಿಂಗ್ಸ್ ಆಡಿರುವ ಅವರು 3 ದ್ವಿಶತಕ, 26 ಶತಕ ಹಾಗೂ 37 ಅರ್ಧಶತಕಗಳೊಂದಿಗೆ ಒಟ್ಟು 8786 ರನ್ ಕಲೆಹಾಕಿದ್ದಾರೆ. ಇದೀಗ ಸಿಡ್ನಿ ಟೆಸ್ಟ್ ಪಂದ್ಯದ ಮೂಲಕ ಡೇವಿಡ್ ವಾರ್ನರ್ ಟೆಸ್ಟ್ ವೃತ್ತಿಜೀವನಕ್ಕೆ ವಿದಾಯ ಹೇಳಿದ್ದಾರೆ.