ಗಣೇಶ ಚತುರ್ಥಿಗೆ ಶುಭಾಶಯ ತಿಳಿಸಿದ ಡೇವಿಡ್ ವಾರ್ನರ್

David Warner: ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿರುವ ಡೇವಿಡ್ ವಾರ್ನರ್ ಸದ್ಯ ಫ್ರಾಂಚೈಸಿ ಲೀಗ್​ನಲ್ಲಿ ಮುಂದುವರೆದಿದ್ದಾರೆ. ಅದರಂತೆ ಇದೀಗ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಭಾಗವಾಗಿರುವ ಆಸೀಸ್ ದಾಂಡಿಗ ಮುಂಬರುವ ಐಪಿಎಲ್​ನ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

|

Updated on: Sep 07, 2024 | 1:21 PM

ದೇಶದೆಲ್ಲೆಡೆ ಗಣೇಶ ಚತುರ್ಥಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ಈ ಸಂಭ್ರಮಕ್ಕೆ ಆಸ್ಟ್ರೇಲಿಯಾದ ಮಾಜಿ ಆಟಗಾರ ಡೇವಿಡ್ ವಾರ್ನರ್ ಶುಭಾಶಯ ತಿಳಿಸಿರುವುದು ವಿಶೇಷ. ತಮ್ಮ ಇನ್​ಸ್ಟಾಗ್ರಾಮ್ ಖಾತೆಯ ಮೂಲಕ ವಾರ್ನರ್ ಚೌತಿ ಹಬ್ಬಕ್ಕೆ ವಿಶಸ್ ತಿಳಿಸಿದ್ದಾರೆ.

1 / 6
ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ವಿಘ್ನನಿವಾರಕ ಗಣಪನ ಫೋಟೋವನ್ನು ಹಂಚಿಕೊಂಡಿರುವ ಡೇವಿಡ್ ವಾರ್ನರ್, ಹ್ಯಾಪಿ ಗಣೇಶ ಚತುರ್ಥಿ ಎಂದು ಸರ್ವರಿಗೂ ಶುಭಾಶಯ ತಿಳಿಸಿದ್ದಾರೆ. ಇದೀಗ ವಾರ್ನರ್ ಹಂಚಿಕೊಂಡಿರುವ ಶುಭಾಶಯದ ಫೋಟೋ ವೈರಲ್ ಆಗಿದ್ದು, ಭಾರತೀಯ ಅಭಿಮಾನಿಗಳಿಂದ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

2 / 6
ಅಂದಹಾಗೆ ಡೇವಿಡ್ ವಾರ್ನರ್ ಹೀಗೆ ಶುಭಾಶಯ ತಿಳಿಸುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಅಯೋಧ್ಯೆ ರಾಮಮಂದಿರದಲ್ಲಿ ರಾಮ ಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನಾ ಸಂದರ್ಭದಲ್ಲಿ ಭಗವಾನ್ ಶ್ರೀರಾಮನ ಅವತಾರದ ಫೋಟೋವೊಂದನ್ನು ಹಂಚಿಕೊಂಡು ಅಭಿನಂದನಾ ಸಂದೇಶವನ್ನು ತಿಳಿಸಿದ್ದರು.

3 / 6
ಹಾಗೆಯೇ ಭಾರತದ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭಗಳಲ್ಲೂ ಶುಭಾಶಯ ತಿಳಿಸುವ ಪರಿಪಾಠ ರೂಢಿಸಿಕೊಂಡಿದ್ದಾರೆ. ಇದೀಗ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಭಾಗವಾಗಿರುವ ವಾರ್ನರ್ ಮುಂಬರುವ ಐಪಿಎಲ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಅಲ್ಲದೆ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತರಾಗಿರುವ ಅವರು ವಿಶ್ವದ ಹಲವು ಲೀಗ್​ನಲ್ಲಿ​ ಕಾಣಿಸಿಕೊಳ್ಳಲಿದ್ದಾರೆ.

4 / 6
ಏಕದಿನ ಕ್ರಿಕೆಟ್​ನಲ್ಲಿ ಆಸೀಸ್ ಪರ 161 ಪಂದ್ಯಗಳಲ್ಲಿ 159 ಇನಿಂಗ್ಸ್ ಆಡಿರುವ ಡೇವಿಡ್ ವಾರ್ನರ್ 6932 ರನ್ ಕಲೆಹಾಕಿದ್ದಾರೆ. ಈ ವೇಳೆ 22 ಭರ್ಜರಿ ಶತಕ ಹಾಗೂ 33 ಅರ್ಧಶತಕಗಳನ್ನು ಸಿಡಿಸಿದ್ದಾರೆ. ಹಾಗೆಯೇ ಆಸ್ಟ್ರೇಲಿಯಾ ಪರ 110 ಟಿ20 ಪಂದ್ಯಗಳನ್ನಾಡಿರುವ ವಾರ್ನರ್ 2300 ಎಸೆತಗಳನ್ನು ಎದುರಿಸಿ 3277 ರನ್ ಕಲೆಹಾಕಿದ್ದಾರೆ. ಈ ವೇಳೆ ಒಂದು ಭರ್ಜರಿ ಶತಕ ಹಾಗೂ 28 ಅರ್ಧಶತಕಗಳನ್ನು ಬಾರಿಸಿದ್ದಾರೆ.

5 / 6
ಇನ್ನು 112 ಟೆಸ್ಟ್ ಪಂದ್ಯಗಳನ್ನಾಡಿರುವ ವಾರ್ನರ್ 205 ಇನಿಂಗ್ಸ್​ಗಳಲ್ಲಿ 3 ದ್ವಿಶತಕ, 26 ಶತಕ ಹಾಗೂ 37 ಅರ್ಧಶತಕಗಳೊಂದಿಗೆ ಒಟ್ಟು 8786 ರನ್ ಕಲೆಹಾಕಿದ್ದಾರೆ. ಈ ಮೂಲಕ ಮೂರು ಸ್ವರೂಪಗಳಲ್ಲೂ ಆಸ್ಟ್ರೇಲಿಯಾ ಪರ 3 ಸಾವಿರಕ್ಕೂ ಅಧಿಕ ರನ್ ಕಲೆಹಾಕಿದ ಏಕೈಕ ಬ್ಯಾಟರ್ ಎನಿಸಿಕೊಂಡಿದ್ದಾರೆ.

6 / 6
Follow us