AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಬೆಂಗಳೂರಿನಲ್ಲಿ ಭಾರತಕ್ಕೆ ಗೆಲುವು ನಿಶ್ಚಿತ! ಇದು ಕ್ರೀಡಾಂಗಣದ ಅಂಕಿಅಂಶ ಹೇಳಿದ ಕಥೆ

IND vs SL: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಮತ್ತು ಶ್ರೀಲಂಕಾ ನಡುವೆ ಎರಡನೇ ಟೆಸ್ಟ್ ಪಂದ್ಯ ನಡೆಯಲಿದ್ದು, ಭಾರತ ಇಲ್ಲಿ ಉತ್ತಮ ದಾಖಲೆ ಹೊಂದಿದೆ.

ಪೃಥ್ವಿಶಂಕರ
|

Updated on:Mar 10, 2022 | 6:53 PM

Share
ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಗೆಲುವಿನೊಂದಿಗೆ ಶುಭಾರಂಭ ಮಾಡಿದೆ. ಮೊಹಾಲಿಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಶ್ರೀಲಂಕಾವನ್ನು ಇನ್ನಿಂಗ್ಸ್ ಮತ್ತು 222 ರನ್‌ಗಳಿಂದ ಸೋಲಿಸಿದೆ. ಈ ಮೂಲಕ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 1-0 ಮುನ್ನಡೆ ಸಾಧಿಸಿದೆ. ಇನ್ನು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಎರಡೂ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯ ಹಗಲು-ರಾತ್ರಿ ಮಾದರಿಯಲ್ಲಿ ನಡೆಯಲಿದೆ. ಚಿನ್ನಸ್ವಾಮಿಯಲ್ಲಿ ಭಾರತದ ದಾಖಲೆ ಏನು ಎಂಬುದರ ಬಗ್ಗೆ ಇಲ್ಲಿದೆ ಮಾಹಿತಿ.

1 / 5
ಭಾರತ ತನ್ನ ಮೊದಲ ಟೆಸ್ಟ್ ಪಂದ್ಯವನ್ನು ವೆಸ್ಟ್ ಇಂಡೀಸ್ ವಿರುದ್ಧ 1974 ರಲ್ಲಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಡಿತು. ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಗೆದ್ದಿತ್ತು. ಇದುವರೆಗೆ ಭಾರತ ಈ ಕ್ರೀಡಾಂಗಣದಲ್ಲಿ ಒಟ್ಟು 23 ಪಂದ್ಯಗಳನ್ನು ಆಡಿದೆ.

2 / 5
IND vs SL: ಬೆಂಗಳೂರಿನಲ್ಲಿ ಭಾರತಕ್ಕೆ ಗೆಲುವು ನಿಶ್ಚಿತ! ಇದು ಕ್ರೀಡಾಂಗಣದ ಅಂಕಿಅಂಶ ಹೇಳಿದ ಕಥೆ

ಈ 23 ಪಂದ್ಯಗಳ ಪೈಕಿ ಭಾರತ ಎಂಟು ಪಂದ್ಯಗಳನ್ನು ಗೆದ್ದಿದ್ದರೆ, ಆರು ಪಂದ್ಯಗಳಲ್ಲಿ ಸೋತಿದೆ. ಉಳಿದ ಒಂಬತ್ತು ಪಂದ್ಯಗಳು ಡ್ರಾ ಆಗಿವೆ. ಭಾರತ ಇಲ್ಲಿ ತನ್ನ ಕೊನೆಯ ಪಂದ್ಯವನ್ನು ಜೂನ್ 2018 ರಲ್ಲಿ ಅಫ್ಘಾನಿಸ್ತಾನದ ವಿರುದ್ಧ ಆಡಿತು, ಅದರಲ್ಲಿ ಭಾರತ ಗೆದ್ದಿತು.

3 / 5
IND vs SL: ಬೆಂಗಳೂರಿನಲ್ಲಿ ಭಾರತಕ್ಕೆ ಗೆಲುವು ನಿಶ್ಚಿತ! ಇದು ಕ್ರೀಡಾಂಗಣದ ಅಂಕಿಅಂಶ ಹೇಳಿದ ಕಥೆ

ಈ ಮೈದಾನದಲ್ಲಿ ಭಾರತ ವೆಸ್ಟ್ ಇಂಡೀಸ್, ಪಾಕಿಸ್ತಾನ (ಎರಡು ಬಾರಿ), ಆಸ್ಟ್ರೇಲಿಯಾ (ಎರಡು ಬಾರಿ), ದಕ್ಷಿಣ ಆಫ್ರಿಕಾ ವಿರುದ್ಧ ಸೋತಿದೆ. ಈ ತಂಡಗಳ ಪಟ್ಟಿಯಲ್ಲಿ ಶ್ರೀಲಂಕಾ ತನ್ನ ಹೆಸರನ್ನು ಬರೆಯಬಹುದೇ ಎಂದು ನೋಡಬೇಕು.

4 / 5
IND vs SL: ಬೆಂಗಳೂರಿನಲ್ಲಿ ಭಾರತಕ್ಕೆ ಗೆಲುವು ನಿಶ್ಚಿತ! ಇದು ಕ್ರೀಡಾಂಗಣದ ಅಂಕಿಅಂಶ ಹೇಳಿದ ಕಥೆ

ಮತ್ತೊಂದೆಡೆ, ನಾವು ಶ್ರೀಲಂಕಾದ ಬಗ್ಗೆ ಮಾತನಾಡಿದರೆ, ಈ ಮೈದಾನದಲ್ಲಿ ಅವರು ಇಲ್ಲಿಯವರೆಗೆ ಭಾರತದ ವಿರುದ್ಧ 1 ಟೆಸ್ಟ್ ಪಂದ್ಯವನ್ನು ಆಡಿದ್ದಾರೆ. ಅವರು ಈ ಟೆಸ್ಟ್ ಪಂದ್ಯವನ್ನು ಜನವರಿ 1994 ರಲ್ಲಿ ಆಡಿದರು. ಈ ಪಂದ್ಯದಲ್ಲಿ ಅವರು ಇನ್ನಿಂಗ್ಸ್ ಮತ್ತು 95 ರನ್‌ಗಳ ಸೋಲು ಎದುರಿಸಬೇಕಾಯಿತು.

5 / 5

Published On - 5:54 pm, Thu, 10 March 22

ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್​ಗೆ ನೈಟ್ ರೈಡರ್ಸ್​
ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್​ಗೆ ನೈಟ್ ರೈಡರ್ಸ್​
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಈ ಡ್ಯಾನ್ಸ್ ನೋಡಲು ಎರಡು ಕಣ್ಣು ಸಾಲದು; ನಮ್ರತಾ-ಸಂಗೀತಾ ಪ್ರೀತಿಯ ಅಪ್ಪುಗೆ
ಈ ಡ್ಯಾನ್ಸ್ ನೋಡಲು ಎರಡು ಕಣ್ಣು ಸಾಲದು; ನಮ್ರತಾ-ಸಂಗೀತಾ ಪ್ರೀತಿಯ ಅಪ್ಪುಗೆ
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಮತ್ತೆ ಅಶ್ವಿನಿ-ಗಿಲ್ಲಿ ಮಧ್ಯೆ ದೊಡ್ಡ ಫೈಟ್; ಕೊಟ್ಟ ಶಿಕ್ಷೆ ಘನಘೋರ
ಮತ್ತೆ ಅಶ್ವಿನಿ-ಗಿಲ್ಲಿ ಮಧ್ಯೆ ದೊಡ್ಡ ಫೈಟ್; ಕೊಟ್ಟ ಶಿಕ್ಷೆ ಘನಘೋರ
ಆಂಧ್ರಪ್ರದೇಶದಲ್ಲಿ 158 ಪ್ರಯಾಣಿಕರಿದ್ದ 2 ರೈಲು ಬೋಗಿಗಳಿಗೆ ಬೆಂಕಿ
ಆಂಧ್ರಪ್ರದೇಶದಲ್ಲಿ 158 ಪ್ರಯಾಣಿಕರಿದ್ದ 2 ರೈಲು ಬೋಗಿಗಳಿಗೆ ಬೆಂಕಿ
104 ಮೀಟರ್​ ಸಿಕ್ಸರ್​ನೊಂದಿಗೆ ಹೊಸ ಮೈಲುಗಲ್ಲು ದಾಟಿದ ಮ್ಯಾಕ್ಸ್​ವೆಲ್
104 ಮೀಟರ್​ ಸಿಕ್ಸರ್​ನೊಂದಿಗೆ ಹೊಸ ಮೈಲುಗಲ್ಲು ದಾಟಿದ ಮ್ಯಾಕ್ಸ್​ವೆಲ್
ಮೊಸಳೆ ದಾಳಿ ತಡೆಯಲು ನೀರಿನಲ್ಲಿ ಈಜಿ ಹೊರಟ ಮಂಗಗಳು
ಮೊಸಳೆ ದಾಳಿ ತಡೆಯಲು ನೀರಿನಲ್ಲಿ ಈಜಿ ಹೊರಟ ಮಂಗಗಳು
ಸಾಮಾನ್ಯ ಜನ ಗರ್ಭಗುಡಿ ಪ್ರವೇಶಿಸಿದರೆ ಏನಾಗುತ್ತೆ?
ಸಾಮಾನ್ಯ ಜನ ಗರ್ಭಗುಡಿ ಪ್ರವೇಶಿಸಿದರೆ ಏನಾಗುತ್ತೆ?