
ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಗೆಲುವಿನೊಂದಿಗೆ ಶುಭಾರಂಭ ಮಾಡಿದೆ. ಮೊಹಾಲಿಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಶ್ರೀಲಂಕಾವನ್ನು ಇನ್ನಿಂಗ್ಸ್ ಮತ್ತು 222 ರನ್‌ಗಳಿಂದ ಸೋಲಿಸಿದೆ. ಈ ಮೂಲಕ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 1-0 ಮುನ್ನಡೆ ಸಾಧಿಸಿದೆ. ಇನ್ನು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಎರಡೂ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯ ಹಗಲು-ರಾತ್ರಿ ಮಾದರಿಯಲ್ಲಿ ನಡೆಯಲಿದೆ. ಚಿನ್ನಸ್ವಾಮಿಯಲ್ಲಿ ಭಾರತದ ದಾಖಲೆ ಏನು ಎಂಬುದರ ಬಗ್ಗೆ ಇಲ್ಲಿದೆ ಮಾಹಿತಿ.

ಭಾರತ ತನ್ನ ಮೊದಲ ಟೆಸ್ಟ್ ಪಂದ್ಯವನ್ನು ವೆಸ್ಟ್ ಇಂಡೀಸ್ ವಿರುದ್ಧ 1974 ರಲ್ಲಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಡಿತು. ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಗೆದ್ದಿತ್ತು. ಇದುವರೆಗೆ ಭಾರತ ಈ ಕ್ರೀಡಾಂಗಣದಲ್ಲಿ ಒಟ್ಟು 23 ಪಂದ್ಯಗಳನ್ನು ಆಡಿದೆ.



Published On - 5:54 pm, Thu, 10 March 22