- Kannada News Photo gallery Cricket photos Debut For Anshul Kamboj: India's Probable Playing XI For 4th Test
IND vs ENG: ಟೀಮ್ ಇಂಡಿಯಾ ಪರ ಯುವ ವೇಗಿ ಪಾದಾರ್ಪಣೆ ಸಾಧ್ಯತೆ
India vs England 4th Test: ಇಂದಿನಿಂದ ಭಾರತ ಮತ್ತು ಇಂಗ್ಲೆಂಡ್ ನಡುವಣ 4ನೇ ಟೆಸ್ಟ್ ಪಂದ್ಯ ಶುರುವಾಗಲಿದೆ. ಮ್ಯಾಚೆಂಸ್ಟರ್ನ ಓಲ್ಡ್ ಟ್ರಾಫೋರ್ಡ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್ನಲ್ಲಿ ಗೆದ್ದರೆ ಮಾತ್ರ ಭಾರತ ತಂಡವು ಸರಣಿ ಗೆಲ್ಲುವ ಆಸೆಯನ್ನು ಜೀವಂತವಿರಿಸಿಕೊಳ್ಳಬಹುದು.
Updated on: Jul 23, 2025 | 12:54 PM

ಭಾರತ ಮತ್ತು ಇಂಗ್ಲೆಂಡ್ ನಡುವಣ 4ನೇ ಟೆಸ್ಟ್ ಪಂದ್ಯವು ಇಂದಿನಿಂದ (ಜುಲೈ 23) ಆರಂಭವಾಗಲಿದೆ. ಮ್ಯಾಚೆಂಸ್ಟರ್ನ ಓಲ್ಡ್ ಟ್ರಾಫೋರ್ಡ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಟೀಮ್ ಇಂಡಿಯಾ ವೇಗಿ ಆಕಾಶ್ ದೀಪ್ ಅಲಭ್ಯರಾಗಿದ್ದಾರೆ. ತೊಡೆಸಂದು ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಆಕಾಶ್ ಅವರಿಗೆ ವಿಶ್ರಾಂತಿ ನೀಡಲು ಟೀಮ್ ಮ್ಯಾನೇಜ್ಮೆಂಟ್ ನಿರ್ಧರಿಸಿದೆ.

ಇತ್ತ ಆಕಾಶ್ ದೀಪ್ ಬದಲಿಗೆ ಕಣಕ್ಕಿಳಿಯಬೇಕಿದ್ದ ಅರ್ಷದೀಪ್ ಸಿಂಗ್ ಕೂಡ ಅಭ್ಯಾಸದ ವೇಳೆ ಗಾಯಗೊಂಡಿದ್ದಾರೆ. ಹೀಗಾಗಿ ಅವರು ಸಹ ಮ್ಯಾಚೆಂಸ್ಟರ್ ಟೆಸ್ಟ್ಗೆ ಅಲಭ್ಯರಾಗಿದ್ದಾರೆ. ಇದೇ ಕಾರಣದಿಂದಾಗಿ ಇದೀಗ ಟೀಮ್ ಇಂಡಿಯಾ ಹರ್ಯಾಣದ ಯುವ ವೇಗಿ ಅನ್ಶುಲ್ ಕಂಬೋಜ್ ಅವರನ್ನು ತಂಡಕ್ಕೆ ಸೇರ್ಪಡೆಗೊಳಿಸಿದೆ.

ಇದೀಗ ಹೆಚ್ಚುವರಿ ವೇಗಿಯಾಗಿ ತಂಡಕ್ಕೆ ಎಂಟ್ರಿ ಕೊಟ್ಟಿರುವ ಅನ್ಶುಲ್ ಕಂಬೋಜ್ ಇಂಗ್ಲೆಂಡ್ ವಿರುದ್ಧದ ಪಂದ್ಯದ ಮೂಲಕ ಪಾದಾರ್ಪಣೆ ಮಾಡುವ ಸಾಧ್ಯತೆಯಿದೆ. ಏಕೆಂದರೆ ಕಳೆದ ಎರಡು ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಪ್ರಸಿದ್ಧ್ ಕೃಷ್ಣ ಕಡೆಯಿಂದ ಉತ್ತಮ ಪ್ರದರ್ಶನ ಮೂಡಿಬಂದಿಲ್ಲ. ಇತ್ತ ಅರ್ಷದೀಪ್ ಸಿಂಗ್ ಕೂಡ ಗಾಯಗೊಂಡಿದ್ದಾರೆ. ಇದೀಗ ತಂಡದಲ್ಲಿರುವ ಪರಿಪೂರ್ಣ ವೇಗಿ ಎಂದರೆ ಅನ್ಶುಲ್ ಕಂಬೋಜ್ ಮಾತ್ರ. ಹೀಗಾಗಿ ಮ್ಯಾಂಚೆಸ್ಟರ್ ಟೆಸ್ಟ್ನಲ್ಲಿ ಕಂಬೋಜ್ಗೆ ಸ್ಥಾನ ಸಿಗುವ ಸಾಧ್ಯತೆಯಿದೆ.

ಅನ್ಶುಲ್ ಕಂಬೋಜ್ ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ ಈವರೆಗೆ 24 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 41 ಇನಿಂಗ್ಸ್ಗಳಲ್ಲಿ ಬೌಲಿಂಗ್ ಮಾಡಿರುವ ಅವರು ಒಟ್ಟು 79 ವಿಕೆಟ್ ಕಬಳಿಸಿದ್ದಾರೆ. ಇದರ ನಡುವೆ 2 ಬಾರಿ 5 ವಿಕೆಟ್ಗಳನ್ನು ಸಹ ಪಡೆದಿದ್ದಾರೆ. ಇನ್ನು 34 ಇನಿಂಗ್ಸ್ಗಳಲ್ಲಿ ಬ್ಯಾಟ್ ಬೀಸಿರುವ ಅವರು ಒಂದು ಅರ್ಧಶತಕದೊಂದಿಗೆ 486 ರನ್ ಕಲೆಹಾಕಿದ್ದಾರೆ.

ಅಲ್ಲದೆ ಇತ್ತೀಚೆಗೆ ನಡೆದ ಇಂಗ್ಲೆಂಡ್ ಲಯನ್ಸ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಭಾರತ ಎ ತಂಡ ಪರ ಅನ್ಶುಲ್ ಕಣಕ್ಕಿಳಿದಿದ್ದರು. ಈ ವೇಳೆ 5 ವಿಕೆಟ್ಗಳನ್ನು ಸಹ ಕಬಳಿಸಿದ್ದಾರೆ. ಹೀಗಾಗಿ ಮ್ಯಾಂಚೆಸ್ಟರ್ ಟೆಸ್ಟ್ ಮೂಲಕ ಅನ್ಶುಲ್ ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಅದರಂತೆ ಭಾರತ ತಂಡದ ಸಂಭಾವ್ಯ ಪ್ಲೇಯಿಂಗ್ 11 ಈ ಕೆಳಗಿನಂತಿರಲಿದೆ...

ಟೀಮ್ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ 11: ಕೆಎಲ್ ರಾಹುಲ್, ಯಶಸ್ವಿ ಜೈಸ್ವಾಲ್, ಸಾಯಿ ಸುದರ್ಶನ್, ಶುಭ್ಮನ್ ಗಿಲ್, ರಿಷಭ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಅನ್ಶುಲ್ ಕಂಬೋಜ್.
