AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepak Hooda – Axar Patel: 13 ವರ್ಷಗಳ ಹಳೆಯ ದಾಖಲೆ ಮುರಿದ ದೀಪಕ್ ಹೂಡಾ-ಅಕ್ಷರ್ ಪಟೇಲ್

India vs Sri Lanka 1st T20: ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಜಯ ಸಾಧಿಸುವ ಮೂಲಕ ಹಾರ್ದಿಕ್ ಪಾಂಡ್ಯ ನೇತೃತ್ವದ ಟೀಮ್ ಇಂಡಿಯಾ ಹೊಸ ವರ್ಷದಲ್ಲಿ ಶುಭಾರಂಭ ಮಾಡಿದೆ.

TV9 Web
| Edited By: |

Updated on:Jan 03, 2023 | 11:31 PM

Share
ಮುಂಬೈನ ವಾಂಖೆಡೆ ಕ್ರಿಕೆಟ್ ಮೈದಾನದಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ 2 ರನ್​ಗಳ ರೋಚಕ ಜಯ ಸಾಧಿಸಿದೆ. ಈ ಗೆಲುವಿನ ರೂವಾರಿಗಳೆಂದರೆ ದೀಪಕ್ ಹೂಡಾ, ಅಕ್ಷರ್ ಪಟೇಲ್ ಹಾಗೂ ಶಿವಂ ಮಾವಿ.

1 / 6
ದೀಪಕ್ ಹೂಡಾ ಹಾಗೂ ಅಕ್ಷರ್ ಪಟೇಲ್ ಆಲ್​ರೌಂಡರ್​ ಪ್ರದರ್ಶನ ನೀಡಿದ್ರೆ, ಶಿವಂ ಮಾವಿ 4 ವಿಕೆಟ್ ಕಬಳಿಸಿ ಮಿಂಚಿದರು. ವಿಶೇಷ ಎಂದರೆ 14.1 ಓವರ್​ಗಳಲ್ಲಿ 94 ರನ್​ಗೆ 5 ಪ್ರಮುಖ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಟೀಮ್ ಇಂಡಿಯಾಗೆ ದೀಪಕ್ ಹೂಡಾ ಹಾಗೂ ಅಕ್ಷರ್ ಪಟೇಲ್ ಆಸರೆಯಾದರು. ಅಲ್ಲದೆ ಇಡೀ ಪಂದ್ಯದ ಚಿತ್ರಣವನ್ನು ಬದಲಿಸಿದ್ದರು.

2 / 6
6ನೇ ವಿಕೆಟ್​ ವಿಕೆಟ್​ಗೆ ಜೊತೆಯಾದ ದೀಪಕ್ ಹೂಡಾ (41 ರನ್, 23 ಎಸೆತ) ಹಾಗೂ ಅಕ್ಷರ್ ಪಟೇಲ್ (31 ರನ್, 20 ಎಸೆತ) ಅಂತಿಮ ಹಂತದಲ್ಲಿ 35 ಎಸೆತಗಳನ್ನು ಎದುರಿಸಿ 68 ರನ್​ ಚಚ್ಚಿದರು. ಪರಿಣಾಮ ಟೀಮ್ ಇಂಡಿಯಾ ಮೊತ್ತ 162 ಕ್ಕೆ ಬಂದು ನಿಂತಿತು. ವಿಶೇಷ ಎಂದರೆ ಈ 68 ರನ್​ಗಳೊಂದಿಗೆ ಹೂಡಾ-ಅಕ್ಷರ್ ಜೋಡಿ 13 ವರ್ಷಗಳ ಹಳೆಯ ದಾಖಲೆಯನ್ನು ಮುರಿದಿದ್ದಾರೆ.

3 / 6
ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ 6ನೇ ವಿಕೆಟ್​ಗೆ ಮೂಡಿಬಂದ 2ನೇ ಅತ್ಯುತ್ತಮ ಜೊತೆಯಾಟ 63 ರನ್​ಗಳು. 2009 ರಲ್ಲಿ ಲಾರ್ಡ್ಸ್​ ಮೈದಾನದಲ್ಲಿ ಇಂಗ್ಲೆಂಡ್ ವಿರುದ್ಧ ಮಹೇಂದ್ರ ಸಿಂಗ್ ಧೋನಿ ಹಾಗೂ ಯೂಸುಫ್ ಪಠಾಣ್ 63 ರನ್​ಗಳ ಜೊತೆಯಾಟವಾಡಿದ್ದರು.

4 / 6
ಇದೀಗ ದೀಪಕ್ ಹೂಡಾ ಹಾಗೂ ಅಕ್ಷರ್ ಪಟೇಲ್ 6ನೇ ವಿಕೆಟ್​ಗೆ 68 ರನ್ ಕಲೆಹಾಕುವ ಮೂಲಕ ಧೋನಿ ಹಾಗೂ ಯೂಸುಫ್ ಪಠಾಣ್ ಹೆಸರಿನಲ್ಲಿದ್ದ 13 ವರ್ಷಗಳ ಹಳೆಯ ದಾಖಲೆಯನ್ನು ಹಿಂದಿಕ್ಕಿದ್ದಾರೆ. ಅಷ್ಟೇ ಅಲ್ಲದೆ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ 6ನೇ ವಿಕೆಟ್​ನ ಅತ್ಯುತ್ತಮ ಜೊತೆಯಾಟದ ಪಟ್ಟಿಯಲ್ಲಿ 2ನೇ ಸ್ಥಾನ ಅಲಂಕರಿಸಿದ್ದಾರೆ.

5 / 6
ಅಂದಹಾಗೆ ಟೀಮ್ ಇಂಡಿಯಾ ಪರ ಟಿ20 ಯಲ್ಲಿ 6ನೇ ವಿಕೆಟ್​ಗೆ ಮೂಡಿಬಂದ ಅತ್ಯುತ್ತಮ ಜೊತೆಯಾಟ 70 ರನ್​ಗಳು. 2021 ರಲ್ಲಿ ಇಂಗ್ಲೆಂಡ್ ವಿರುದ್ಧ ವಿರಾಟ್ ಕೊಹ್ಲಿ ಹಾಗೂ ಹಾರ್ದಿಕ್ ಪಾಂಡ್ಯ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿ ಈ ದಾಖಲೆ ಬರೆದಿದ್ದರು. ಇದೀಗ 68 ರನ್​ಗಳ ಜೊತೆಯಾಟದೊಂದಿಗೆ ಅಕ್ಷರ್ ಪಟೇಲ್ ಹಾಗೂ ದೀಪಕ್ ಹೂಡಾ ಈ ಪಟ್ಟಿಯಲ್ಲಿ 2ನೇ ಸ್ಥಾನ ಅಲಂಕರಿಸಿರುವುದು ವಿಶೇಷ.

6 / 6

Published On - 11:31 pm, Tue, 3 January 23

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ

ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ

ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!

ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?

ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ